Breaking News

Daily Archives: ಜನವರಿ 30, 2025

ಅವಾಚ್ಯ ಪದ ಬಳಕೆ ಆರೋಪ ಪ್ರಕರಣ : ಲಕ್ಷ್ಮೀ ಹೆಬ್ಬಾಳ್ಕರ್​ಗೆ ಹೈಕೋರ್ಟ್ ಹ್ಯಾಂಡ್​ ಸಮನ್ಸ್​

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿರುವ ಬಿಜೆಪಿ ಎಂಎಲ್​ಸಿ ಸಿ.ಟಿ. ರವಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ​ ಹ್ಯಾಂಡ್​ ಸಮನ್ಸ್​ ಜಾರಿ ಮಾಡಿ ಆದೇಶಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ …

Read More »

ಮೃತರ ಕುಟುಂಬಸ್ಥರ ಜೊತೆ ನಾವಿದ್ದೇವೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅಭಯ

ಬೆಳಗಾವಿ : ಪ್ರಯಾಗರಾಜ್​ನಲ್ಲಿ ಅಷ್ಟು ದೊಡ್ಡ‌ ಮಟ್ಟದಲ್ಲಿ ಜನ ಸೇರಿದ್ದರು. ಇಂಥ ಸಂದರ್ಭದಲ್ಲಿ ಆ ಘಟನೆ ಆಗಬಾರದಿತ್ತು.‌ ಆದರೆ, ಅನಾಹುತ ಸಂಭವಿಸಿದೆ. ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೃತ ಭಕ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಈಗ ಇಬ್ಬರ ಮೃತದೇಹಗಳು ಬೆಳಗಾವಿ ಸಾಂಬ್ರಾ …

Read More »

ಜನವರಿ 12ರಿಂದ ಕೊಪ್ಪಳದ ಗವಿಸಿದ್ದೇಶ್ವರ ದೇವಾಲಯದಲ್ಲಿ ಆರಂಭವಾದ ಮಹಾದಾಸೋಹ ಬುಧವಾರ ಸಂಪನ್ನಗೊಂಡಿತು.

ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ಮಹಾದಾಸೋಹ ಹಾಗೂ ಜಾತ್ರೆಗೆ ಬುಧವಾರ ವಿಧ್ಯುಕ್ತ ತೆರೆ ಬಿತ್ತು. 1,200 ಕ್ವಿಂಟಾಲ್ ಅಕ್ಕಿ ಬಳಕೆ: ಜನವರಿ 12ರಿಂದ ಆರಂಭವಾದ ಗವಿಮಠದ ಜಾತ್ರೆಯ ಮಹಾ ದಾಸೋಹದಲ್ಲಿ ಈ ಬಾರಿ 20 ಲಕ್ಷ ರೊಟ್ಟಿ, 1,200 ಕ್ವಿಂಟಾಲ್ ಅಕ್ಕಿ, 20 ಲಕ್ಷ ಜಿಲೇಬಿ, 8 ಲಕ್ಷ ಮಿರ್ಚಿ, ಟನ್‌ಗಟ್ಟಲೆ ತರಕಾರಿ, ಹಾಲು, ತುಪ್ಪ.. ಹೀಗೆ ನಾನಾ ವಿಧದ ಪದಾರ್ಥಗಳು ಬಳಕೆಯಾಗಿವೆ. ದಾಸೋಹಕ್ಕಾಗಿ …

Read More »

ಸಾಲಗಾರರ ಕಿರುಕುಳ ತಾಳಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆ

ಬೆಂಗಳೂರು: ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರುಣ್ (38) ಆತ್ಮಹತ್ಯೆ ಮಾಡಿಕೊಂಡವರು. ಅರುಣ್ ಅವರ ತಂದೆ ದೇವರಾಜ್ ನೀಡಿದ ದೂರಿನ ಮೇರೆಗೆ ಸಾಲ ನೀಡಿದ್ದ ದಿನೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕಾಶ್ ನಗರದಲ್ಲಿ ಕಳೆದ 20 ವರ್ಷಗಳಿಂದ ಅರುಣ್ ವಾಸಿಸುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವ್ಯವಹಾರದ ಸಲುವಾಗಿ ಪೂಜಾ …

Read More »

ಕುಂಭಮೇಳ; ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ

ಕನ್ನಡಿಗರು ಸಮಸ್ಯೆಯಲ್ಲಿದ್ದರೆ ದೆಹಲಿಯ ನನ್ನ ಕಚೇರಿಯನ್ನು ಸಂಪರ್ಕಿಸಿ ಎಂದ ಕೇಂದ್ರ ಸಚಿವರು ಕುಂಭಮೇಳದ ಪುಣ್ಯಸ್ನಾನ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ; ಹೆಚ್ಡಿಕೆ ಕಿಡಿ ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ …

Read More »

ಒಂದೇ ಹುದ್ದೆ, ಒಂದೇ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಕಿತ್ತಾಟ

ಕೊಪ್ಪಳ, ): ಒಂದೇ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ಗುದ್ದಾಟ ನಡೆದಿದೆ. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಹುದ್ದೆಗೆ ತಿಪ್ಪಣ್ಣ ಸಿರಸಗಿ ಮತ್ತು ಪಿ ವೈ ಶೆಟ್ಟಪ್ಪನವರ‌ ನಡುವೆ ಜಟಾಪಟಿ ನಡೆದಿದೆ. 8.9.2023 ರಂದು ಉಪನಿರ್ದೇಶಕರಾಗಿ ಬಂದಿದ್ದ ತಿಪ್ಪಣ್ಣ ಅವರನ್ನು 3.10.24ರಂದು ಕರ್ತವ್ಯಲೋಪ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿತ್ತು. ಬಳಿಕ ತಿಪ್ಪಣ್ಣ ಹುದ್ದೆಗೆ ‌ಪಿ ವೈ ಶೆಟ್ಟೆಪ್ಪ ಎನ್ನುವರನ್ನು ಸರ್ಕಾರ ನಿಯೋಜಿಸಿತ್ತು. ಆದ್ರೆ, ಇದೀಗ ತಿಪ್ಪಣ್ಣ ಅಮಾನತ್ತಿಗೆ …

Read More »

ಮುಡಾ ಮಾಜಿ ಆಯುಕ್ತರ ಶೋಧನೆ ರದ್ದುಗೊಳಿಸಿದ ಕೋರ್ಟ್

ಬೆಂಗಳೂರು, ಜನವರಿ 30: ಮುಡಾ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧದ ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆ ಅಡಿಯ ಇಡಿ ಶೋಧನೆಯನ್ನು ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ನಟೇಶ್ ದಾಖಲಿಸಿದ್ದ ಹೇಳಿಕೆಯನ್ನೂ ಹೈಕೋರ್ಟ್ ರದ್ದುಪಡಿಸಿದೆ. ಡಿಬಿ ನಟೇಶ್ ವಿರುದ್ಧ ಯಾವುದೇ ಅಧಿಸೂಚಿತ ಕೇಸ್ ದಾಖಲಾಗಿರಲಿಲ್ಲ. 14 …

Read More »

ಹೆಚ್​ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ

ಹೆಚ್​ಡಿಕೆ ಮತ್ತು ಸಂಬಂಧಿಕರಿಂದ ಸರ್ಕಾರಿ ಜಮೀನು ಒತ್ತುವರಿ ಆರೋಪ: ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಬೆಂಗಳೂರು: ಕೇತಗಾನಹಳ್ಳಿ ಸರ್ಕಾರಿ ಜಮೀನನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮತ್ತಿತರರಿಂದ ಒತ್ತುವರಿ ಮಾಡಿದ ಆರೋಪ ಪ್ರಕರಣದಲ್ಲಿ ಪ್ರತಿವಾದಿಗಳು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣದಿಂದ ಕಳೆದ ಐದು ವರ್ಷಗಳಿಂದ ತೆರವು ಕಾರ್ಯಕ್ಕೆ ಮುಂದಾಗಿಲ್ಲವೇ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು …

Read More »

ಡಿಕೆಶಿ ವಿರುದ್ಧದ ಸಿಬಿಐ ಕೇಸ್​: ಯತ್ನಾಳ್​​ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​

ನವದೆಹಲಿ: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಕುರಿತು ಸಿಬಿಐ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂದಕ್ಕೆ ತೆಗೆದುಕೊಂಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ. ಡಿಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಯ ಒಪ್ಪಿಗೆಯನ್ನು ವಾಪಸ್​ ಪಡೆದಿದ್ದನ್ನು ಪ್ರಶ್ನಿಸಿದ್ದರ ಹಿಂದೆ ಯಾವ ರಾಜಕೀಯ ದುರುದ್ದೇಶವಿದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್​ ಮತ್ತು ಎನ್​ ಕೋಟೀಶ್ವರ್​ ಸಿಂಗ್​ …

Read More »