ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …
Read More »Monthly Archives: ಜನವರಿ 2025
ಹೈವೇ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ: ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಬೆಳಗಾವಿ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಮತ್ತು ಸಿದ್ದಾರ್ಥ ಪಾಟೀಲ್ (23) ಮೃತರು. ಇಬ್ಬರೂ ಬೈಕ್ ಮೇಲೆ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ, ಹಿಂದಿನಿಂದ ಬಂದ ಅಪರಿಚಿತ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ …
Read More »ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ
ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಮರಣಾರ್ಥವಾಗಿ, ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ರಾಷ್ಟ್ರಪಿತ ಗಾಂಧಿಯವರ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಿದರು. ಈ ವೇಳೆ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್, ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪಸಿಂಗ್ …
Read More »ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಮೂವರು ಆರೋಪಿಗಳಲ್ಲಿ ಒಬ್ಬ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮುಂಬೈನ ಚೆಂಬೂರಿನ ಕಣ್ಣನ್ ಮಣಿ (36) ಗುಂಡೇಟು ತಗುಲಿದ ಆರೋಪಿ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಜ.17 ರಂದು ಉಳ್ಳಾಲದ ಕೆ.ಸಿ. ರೋಡ್ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಪಿಸ್ತೂಲ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿರುವ …
Read More »ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿಗಳು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ/ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ/ಜಿಲ್ಲಾಧಿಕಾರಿಗಳ/ ಉಪವಿಭಾಗಾಧಿಕಾರಿ/ತಹಶೀಲ್ದಾರ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ …
Read More »ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿತನನ್ನ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಅತೀಕ್ ಅಹಮದ್ ಬಂಧಿತ ಆರೋಪಿ. ಪ್ರವೀಣ್ ಹತ್ಯೆ ಹಿಂದಿನ ಮುಖ್ಯ ಸಂಚುಕೋರ ಎಂದು ಗುರುತಿಸಲಾದ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಅತೀಕ್ ಅಹಮದ್ನನ್ನ ಪ್ರಕರಣದಲ್ಲಿ 21ನೇ ಆರೋಪಿ ಎಂದು ಗುರುತಿಸಲಾಗಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಾಯಕತ್ವದ ಅಡಿ ಕೆಲಸ ಮಾಡಿದ್ದ ಅತೀಕ್ ಅಹಮದ್, ಹತ್ಯೆ …
Read More »ದಂಪತಿ ಮನೆ ತೊರೆದ ವಿಚಾರ ತಿಳಿದು ಅವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಖದೀಮನೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಹೆಂಡತಿಯೊಂದಿಗೆ ಜಗಳವಾಡಿಕೊಂಡು ಊರಿಗೆ ಹೋಗಿದ್ದ ವ್ಯಕ್ತಿಯ ಮನೆ ದೋಚಿದ್ದ ಕಳ್ಳನನ್ನ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ವೆಲ್ಲೂರು ಮೂಲದ ಸತೀಶ್ ಬಂಧಿತ ಆರೋಪಿ. ಆರೋಪಿ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಸುಮಾರು 16.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಮನೆ ತೊರೆದಾಗ ಕಳ್ಳನ ಕೈಚಳಕ: ಅಕ್ಕಸಾಲಿಗರಾಗಿದ್ದ ಮನೆ ಮಾಲೀಕ ಮನೆಯಲ್ಲಿ ಚಿನ್ನಾಭರಣಗಳ …
Read More »ಡಿಕೆ ಶಿವಕುಮಾರ್ಗೆ ಸಿಎಂ ಆಗುವಂತೆ ಆಶೀರ್ವದಿಸಿದ ಗುಣಧರನಂದಿ ಮಹಾರಾಜರು
ಹುಬ್ಬಳ್ಳಿ: ”ನಾನು ಮುಖ್ಯಮಂತ್ರಿ ಆಗಲಿ ಎಂದು ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ನುಡಿದರು. ವರೂರು ನವಗ್ರಹ ತೀರ್ಥಕ್ಷೇತ್ರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ”ವಿನಯ್ ಗುರೂಜಿ ಅವರು ಈ ಮಾತನ್ನು ಹೇಳಿದ್ದರು. ಈಗ ಗುಣಧರನಂದಿ ಮಹಾರಾಜರು ಆಶೀರ್ವಾದ ಮಾಡಿದ್ದಾರೆ. ಆದರೆ, ನೀವು ಆಶೀರ್ವಾದ ಮಾಡಿದಾಗಲೆಲ್ಲಾ ನಮಗೆ ಏಟು ಹೊಡಿತಾ ಇರ್ತಾರೆ” ಎಂದು …
Read More »ಪ್ರಿಯಾಂಕಾ ಗಾಂಧಿ ಕಿತ್ತೂರು ಚನ್ನಮ್ಮನಂತೆ:ಖರ್ಗೆ
ಬೆಳಗಾವಿ: ಬಿಜೆಪಿ, ಆರ್ಎಸ್ಎಸ್ ವಿರುದ್ಧ ಶಕ್ತಿಶಾಲಿಯಾಗಿ ಹೋರಾಟ ಮಾಡುವ ಹೆಣ್ಣುಮಗಳು ಪ್ರಿಯಾಂಕಾ ಗಾಂಧಿ. ಪ್ರಿಯಾಂಕಾ ಮೆತ್ತಗೆ ಕಾಣುತ್ತಾರೆ, ಮುಟ್ಟಿ ನೋಡಿ. ನಮ್ಮ ಕಿತ್ತೂರು ಚನ್ನಮ್ಮ ಪ್ರಿಯಾಂಕಾ ಗಾಂಧಿ. ನಾನೇನು ಹೊಗಳುತ್ತಿಲ್ಲ. ಅವರಿಗೆ ಅಷ್ಟೊಂದು ಶಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟರು. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂದೆ ಕಳೆದುಕೊಂಡಾಗ ಪ್ರಿಯಾಂಕಾ ಅವರಿಗೆ ನಾಲ್ಕೈದು ವರ್ಷ. ತಾಯಿ ರಕ್ಷಣೆಯಲ್ಲಿ …
Read More »ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗಿದೆ. ದಶಕಗಳ ಬೇಡಿಕೆಯ ನಂತರ ಕರ್ನಾಟಕ ಸರ್ಕಾರ ಇಂದು ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.
ಧಾರವಾಡ, ಜನವರಿ 21: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇತ್ತೀಚೆಗೆ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿತ್ತು. ಇದೀಗ ಇಂದಿನಿಂದ ಅಧಿಕೃತವಾಗಿ ಧಾರವಾಡ ಮಹಾನಗರ ಪಾಲಿಕೆ ಎಂದು ಕರ್ನಾಟಕ ಸರ್ಕಾರದಿಂದ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ. ಆ ಮೂಲಕ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಬೇಕು ಅನ್ನೋದು ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಬೇರ್ಪಡಿಸುವ ನಿರ್ಧಾರ ಯಾರೂ ತೆಗೆದುಕೊಂಡಿರಲೇ ಇಲ್ಲ. ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ …
Read More »