ಬೆಳಗಾವಿ (ಜನವರಿ.20): ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ …
Read More »Monthly Archives: ಜನವರಿ 2025
ಬ್ಯಾಂಕ್ ಅಧಿಕಾರಿಗಳ ಜೊತೆ ಹು-ಧಾ ಪೊಲೀಸ್ ಕಮಿಷನರ್ ಸಭೆ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಇಂದು ನಗರದ ಬಿವಿಬಿ ಕಾಲೇಜಿನಲ್ಲಿ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, “ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಎರಡು ಗಂಟೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ …
Read More »ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಎರಡು ವಿವಿಗಳಿಂದ 2 ಗೌರವ ಡಾಕ್ಟರೇಟ್ ಘೋಷಣೆ
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪ್ರತ್ಯೇಕ ಗೌರವ ಡಾಕ್ಟರೇಟ್ ಘೋಷಿಸಿವೆ. 92 ವರ್ಷ ವಯಸ್ಸಿನ ಕಾಗೋಡು ತಿಮ್ಮಪ್ಪನವರಿಗೆ ಜ.22ರ ಬೆಳಗ್ಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಅದೇ ದಿನ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ …
Read More »ಸರ್ಕಾರಿ ಕಚೇರಿ ಮೇಲೆ ಪರಿಶೀಲನೆ ಕಾರ್ಯ ಮುಂದುವರೆಸಿದ ಲೋಕಾಯುಕ್ತರು
ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಮೇಲೆ ಪರಿಶೀಲನಾ ಕಾರ್ಯ ಮುಂದುವರೆಸಿರುವ ಲೋಕಾಯುಕ್ತ ಹಾಗೂ ಅಧಿಕಾರಿಗಳ ತಂಡ, ಸೋಮವಾರ ಕಾನೂನು ಹಾಗೂ ಮಾಪನ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಇತ್ತೀಚೆಗೆ ನಗರದ 54 ಬಿಬಿಎಂಪಿ ಕಚೇರಿಗಳ ಮೇಲೆ ತಪಾಸಣೆ ನಡೆಸಿ ನಡೆಯುತ್ತಿದ್ದ ಲೋಪದೋಷಗಳನ್ನು ಪತ್ತೆ ಹಚ್ಚಿದ ಲೋಕಾಯುಕ್ತ ನ್ಯಾ. …
Read More »ವಿಜಯಪುರದಲ್ಲಿ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ, ಐವರು ಆರೋಪಿಗಳ ಬಂಧನ
ವಿಜಯಪುರ: ಇಟ್ಟಿಗೆ ಭಟ್ಟಿಯ ಮಾಲೀಕ ಹಾಗೂ ಇತರ ಮೂವರು ಸೇರಿಕೊಂಡು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಹೊರಭಾಗದ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಈ ಸಂಬಂಧ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ, ರೋಹನ್ ಗಾಂಧಿನಗರ ಮತ್ತು ಕನಕಮೂರ್ತಿ ಗೊಂದಳಿ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಗಡ ಹಣ ಪಡೆದಿದ್ದರ ಕೆಲಸ ಮಾಡುವ ವಿಚಾರದ ಕುರಿತು ಮೂವರು ಕಾರ್ಮಿಕರ ಕಾಲುಗಳನ್ನು ಕಟ್ಟಿ ಪೈಪ್ಗಳಿಂದ …
Read More »ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮಅನಾವರಣಕ್ಕೆ ಕ್ಷಣಗಣನೆ
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವಕ್ಕೆ ಸಾಕ್ಷಿಯಾಗಿರುವ ಬೆಳಗಾವಿಯಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ಮತ್ತು ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ಮೊಟಕುಗೊಂಡಿದ್ದ ಕಾರ್ಯಕ್ರಮ ಮಂಗಳವಾರ (ಜ.21) ಆಯೋಜಿಸಲಾಗಿದೆ. ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು …
Read More »ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ
ಶಾಲೆಯ ಶಿಕ್ಷಕರಿಗೆ ಶಹಬ್ಬಾಸ್ಗಿರಿ ಕೊಟ್ಟ ಶಾಸಕರು ಮೂಡಲಗಿ- ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ …
Read More »ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ, ಸಾವಯವ ಮತ್ತು ಸಿರಿಧಾನ್ಯ ಮೇಳ -2025ನ್ನು ಆಯೋಜಿಸಲಾಗಿದೆ.
ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ, ಸಾವಯವ ಮತ್ತು ಸಿರಿಧಾನ್ಯ ಮೇಳ -2025ನ್ನು ಆಯೋಜಿಸಲಾಗಿದೆ. ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ ಮಾಧ್ಯಮಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು. ಸರ್ಕಾರವು ಸುಮಾರು …
Read More »ತೊಗರಿಗೆ ರಾಜ್ಯ ಸರ್ಕಾರದಿಂದ ಕ್ವಿಂಟಾಲ್‌ಗೆ ಹೆಚ್ಚುವರಿ ₹450 ಬೆಂಬಲ ಬೆಲೆ
ವಿಜಯಪುರ: ”ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದೆ. ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು” ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಿಸಿದರು. ಪ್ರವಾಸಿ ಮಂದಿರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ”ಒಟ್ಟು ಪ್ರತಿ ಕ್ವಿಂಟಾಲ್‌ಗೆ …
Read More »ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. *ಹಣ ದುರುಪಯೋಗದ ಪ್ರಶ್ನೆ ಇಲ್ಲ* ಮುಡಾ ಮತ್ತು ವಾಲ್ಮೀಕಿ …
Read More »