ಬೆಳಗಾವಿ : ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ತಂಡ 36 ರನ್ ಗಳ ಅಂತರದಲ್ಲಿ ವಿದರ್ಭ ತಂಡವನ್ನು ಮಣಿಸಿರುವುದು ಸಂತೋಷದ ಸಂಗತಿ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನದೊಂದಿಗೆ ಕರ್ನಾಟಕ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ” ಎಂದು …
Read More »Monthly Archives: ಜನವರಿ 2025
ಕುಮಾರಸ್ವಾಮಿ ಆರೋಪ ನಿರಾಧಾರ: ಎಂ.ಬಿ ಪಾಟೀಲ
ಕುಮಾರಸ್ವಾಮಿ ಆರೋಪ ನಿರಾಧಾರ: ಎಂ.ಬಿ ಪಾಟೀಲ ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ನಮ್ಮ ಉನ್ನತ ಅಧಿಕಾರಿಗಳೊಂದಿಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ, ಸೆಮಿಕಂಡಕ್ಟರ್ ಸೇರಿದಂತೆ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಆ ಸಂದರ್ಭದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದೆ. ಹೀಗಾಗಿ ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎನ್ನುವುದು ಸರಿಯಿಲ್ಲ ಎಂದು ಬೃಹತ್ …
Read More »ಶಾಸಕ ಶರಣಗೌಡ ಕಂದಕೂರನಿಂದ ಕಿರುಕುಳ ಆರೋಪ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ
ಯಾದಗಿರಿ, : ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ (Sharanagouda Kandakura) ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ತಡೆದುಕೊಳ್ಳಲಾಗದೆ ದಯಾಮರಣ ಕರಣಿಸುವಂತೆ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದ ಯುವಕ ಬೀರಲಿಂಗಪ್ಪ ಎಂಬುವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. “ಗುರುಮಿಠಕಲ್ ಮತಕೇತ್ರದ ಶಾಸಕ ಶರಣಗೌಡ ಕಂದಕೂರ ನನ್ನ ಊರಿನ ರಾಜಶೇಖರ ಗೌಡ ಮತ್ತು ಮಲ್ಲಿಕಾರ್ಜುನ ಮಾಲಿಪಾಟೀಲ್ ಅವರಿಂದ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಂದ ಸೈದಾಪೂರ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ …
Read More »ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ,:ರೇಣುಕಾಚಾರ್ಯ
ಬೆಂಗಳೂರು, ಜನವರಿ 19: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಒಬ್ಬ ಗೋಮುಖ ವ್ಯಾಘ್ರ. ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯತ್ನಾಳ್ರನ್ನ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಜೆಡಿಎಸ್ಗೆ ಹೋಗಿದ್ದರು. ಯಡಿಯೂರಪ್ಪನವರ ಕಾಲು ಹಿಡಿದು ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದರು. ಈಗ ಅವರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಕಿಡಿಕಾರಿದ್ದಾರೆ .ರಾಷ್ಟ್ರೀಯ ನಾಯಕರ ಆಶೀರ್ವಾದ, ರಾಜ್ಯ …
Read More »ಮುಂದಿನ ದಿನಗಳಲ್ಲಿ ಬೆಳಗಾವಿಗೆ ವಿಶೇಷ ಕೊಡುಗೆ ಘೋಷಣೆ: ಡಿಸಿಎಂ
ಬೆಳಗಾವಿ: ”ಮಹಾತ್ಮ ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸುವ ಮೂಲಕ ಬೆಳಗಾವಿಯನ್ನು ಪರಿಚಯಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಹಾಗಾಗಿ, ದೇಶದ ಜನ ಈಗ ಬೆಳಗಾವಿ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬೆಳಗಾವಿಯನ್ನು ಇಡೀ ದೇಶಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದೇವೆ. ಆ ಪರಂಪರೆ ಉಳಿಸಿ, ಮುಂದುವರಿಸುವ ಕೆಲಸವನ್ನು ನಾವು ಮಾಡುತ್ತೇವೆ. ಆದರೆ, ಈಗ ಬೆಳಗಾವಿಗೆ ಯಾವುದೇ ವಿಶೇಷ ಯೋಜನೆ ಘೋಷಿಸುವುದಿಲ್ಲ. ಮುಂದಿನ ದಿನಗಳಲ್ಲಿ ಖಂಡಿತ ಘೋಷಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ …
Read More »ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆ, ಚೌಡಯ್ಯನವರ ಸಮುದಾಯ ಭವನ ಮತ್ತು ಹಳ್ಳಿ ಸಂತೆಯನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಮಾಜದ ಜಗದ್ಗುರುಗಳು, ವಿ.ಪ. ಸದಸ್ಯ ರವಿಕುಮಾರ್, ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಭಾಗಿ ಬಾಲಚಂದ್ರ ಜಾರಕಿಹೊಳಿ ಅವರ ಸಮಾಜಮುಖಿ ಕಾರ್ಯಕ್ಕೆ ಎದ್ದು ನಿಂತು ಚಪ್ಪಾಳೆ ತಟ್ಟಿ …
Read More »ಪತ್ನಿ ಹಾಗೂ ಆಕೆಯ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ:ಅಳಿಯನ ಬಂಧನ
ಬೆಂಗಳೂರು : ಪತ್ನಿ ಹಾಗೂ ಆಕೆಯ ತಾಯಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪಿಯನ್ನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ತವರು ಮನೆ ಸೇರಿದ್ದ ಪತ್ನಿ ಹೀನಾ ಕೌಸರ್ ಹುಡುಕಿಕೊಂಡು ಜನವರಿ 14ರಂದು ಸರಬಂಡೆಪಾಳ್ಯದಲ್ಲಿರುವ ಮನೆಗೆ ಬಂದಿದ್ದ ಆರೋಪಿ, ಪತ್ನಿ ಹಾಗೂ ಅತ್ತೆ ಪರ್ವೀನ್ ತಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಈ ಬಗ್ಗೆ ಪರ್ವೀನ್ ತಾಜ್ ಮಾತನಾಡಿ, ”ಹತ್ತು ವರ್ಷಗಳ …
Read More »ಬಸನಗೌಡ ಯತ್ನಾಳ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಟಾಂಗ್
ರಾಯಚೂರು: ಭಾರತೀಯ ಜತನಾ ಪಾರ್ಟಿ ಆಂತರಿಕ ಪ್ರಜಾಪ್ರಭುತ್ವ ಇರುವಂತಹ ರಾಜಕೀಯ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಕೆಎಸ್‌ಎನ್ ಸೇವಾವತಿಯಿಂದ ಆಯೋಜಿಸಿದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಪಕ್ಷದ ಹಿರಿಯರು ಆಶೀರ್ವಾದ ಮಾಡಿ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿಕೊಂಡು …
Read More »ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,
ಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೇಲುಕಾಮನಹಳ್ಳಿಯಲ್ಲಿ ನೂತನ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಉದ್ಘಾಟನೆ ನೆರವೇರಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬದಲಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ,” ಕುರ್ಚಿ ಖಾಲಿ ಆಗಿದ್ಯಾ?. ಸದ್ಯ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ, ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರೆಯುತ್ತೇವೆ” ಎಂದು …
Read More »ಬೆಂಗಳೂರಿನ ಟೆಕ್ಕಿಗೆ ಮೊಬೈಲ್ ಫೋನ್ ಗಿಫ್ಟ್ ಕಳುಹಿಸಿ ₹2.8 ಕೋಟಿ ವಂಚನೆ
ಬೆಂಗಳೂರು: ಅಪರಿಚಿತರಿಂದ ಗಿಫ್ಟ್ ಹೆಸರಿನಲ್ಲಿ ಮೊಬೈಲ್ ಫೋನ್, ಟ್ಯಾಬ್ ನಿಮ್ಮ ಮನೆ ಬಾಗಿಲಿಗೆ ಬಂದರೆ ಅವುಗಳನ್ನ ಬಳಸುವ ಮುನ್ನ ಎಚ್ಚರವಿರಲಿ. ಇದು ಸೈಬರ್ ವಂಚಕರ ಹೊಸ ವರಸೆಯೂ ಆಗಿರಬಹುದು. ಕ್ರೆಡಿಟ್ ಕಾರ್ಡ್ ಮಂಜೂರಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು ಮೊಬೈಲ್ ಗಿಫ್ಟ್ ಕಳುಹಿಸಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರ ಖಾತೆಯಿಂದ ₹2.8 ಕೋಟಿ ರೂ ದೋಚಿರುವ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಹೆಸರಿನಲ್ಲಿ ತಾವೇ ಮೊಬೈಲ್ ಫೋನ್ ಕಥ ಕಳುಹಿಸಿ ವಂಚಿಸಿರುವ ಖದೀಮರ …
Read More »