Breaking News

Daily Archives: ಫೆಬ್ರವರಿ 3, 2025

ರಸ್ತೆ ಮೇಲೆ ಹೋಗೆಯುಗಿಳಿದ ಸರ್ಕಾರಿ ಬಸ್;RTO ಅವರೆ ಇದು ರಸ್ತೆ ನಿಯಮ ಉಲ್ಲಂಘನೆ ಅಲ್ವಾ ;ನೆಟ್ಟಿಗರು ಪ್ರಶ್ನೆ

ಅಥಣಿ: ಕೆಎಸ್‌ಆರ್‌ಟಿಸಿ ಬಸ್ಸು ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…! ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ. ಆದ್ರೆ ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಇದು ಅಥಣಿ ಪಟ್ಟಣದಿಂದ-ಪಾಂಡೆಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ ಎಸ್ ಆರ್ ಟಿ …

Read More »

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

ಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I’m god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. …

Read More »

ಕುಸ್ತಿಕಥೆಯಲ್ಲಿ ರಾಜವರ್ಧನ್..ಫೆ.7ಕ್ಕೆ ‘ಗಜರಾಮ’ ರಿಲೀಸ್.

ಬೆಂಗಳೂರು: ಟ್ರೇಲರ್ ಹಾಗೂ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಗಜರಾಮ ಸಿನಿಮಾ ಫೆಬ್ರವರಿ 7ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ನಟನೆ ಮೂಲಕ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆ ಚಿತ್ರತಂಡ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ನಟ ರಾಜವರ್ಧನ್ ಮಾತನಾಡಿ, …

Read More »

ರೋರಿಂಗ್ ಸ್ಟಾರ್ ಶ್ರೀಮುರಳಿ ಸಿನಿಮಾಗೆ ಬಹುಬೇಡಿಕೆ ಸಂಗೀತ ನಿರ್ದೇಶಕ‌ ಎಂಟ್ರಿ…’ಪರಾಕ್’ಗೆ ಚರಣ್ ರಾಜ್ ಟ್ಯೂನ್.

ಬೆಂಗಳೂರು: ಅರ್ಜುನ್ ಜನ್ಯ, ಹರಿಕೃಷ್ಣ ನಂತರ ಕನ್ನಡ ಚಿತ್ರರಂಗದ ಸಂಗೀತ ಲೋಕದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವವರು ಚರಣ್ ರಾಜ್. ಚರಣ್‌ ಸಂಗೀತ ನಿರ್ದೇಶಕನಕ್ಕೆ ಪ್ರತ್ಯೇಕ ಪ್ರೇಕ್ಷಕ ವರ್ಗ ಹುಟ್ಟುಕೊಂಡಿದೆ. ‘ಟಗರು’, ‘ಸಲಗ’, ‘ಸಪ್ತ ಸಾಗರದಾಚೆ ಎಲ್ಲೋ’ ಭೀಮ, ಬ್ಯಾಡ್ ಮ್ಯಾನರ್ಸ್, ಹೆಡ್ ಬುಷ್, ಜೇಮ್ಸ್ ಮುಂತಾದ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡ ಚಿತ್ರರಂಗದ ಪ್ರತಿಭಾವಂತ ಗೀತ ಸಂಯೋಜಕ ಚರಣ್‌ ರಾಜ್‌ ಈಗ ಪರಾಕ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕ್ಲಾಸ್ ಹಾಗೂ …

Read More »

ಸಚಿವ ಹೆಚ್​ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ

ಗದಗ, ಫೆಬ್ರವರಿ 02: ಸಚಿವ ಹೆಚ್​​.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ. ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್​​.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್​ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್​​.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ …

Read More »

ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ, ನೇಹಾ ತಂದೆ ಆರೋಪ

ಹುಬ್ಬಳ್ಳಿ, ಫೆಬ್ರವರಿ 03: ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ …

Read More »

ಆಸ್ಪತ್ರೆ ಸೇರಿದ ಸೋನು ನಿಗಮ್

ಪ್ರಸಿದ್ಧ ಗಾಯಕ ಸೋನು ನಿಗಮ್ ಅವರಿಗೆ ಲೈವ್ ಪರ್ಫಾರ್ಮೆನ್ಸ್ ಸಮಯದಲ್ಲಿ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ನೋವಿನ ಹೊರತಾಗಿಯೂ ಅವರು ಪ್ರದರ್ಶನ ಮುಂದುವರಿಸಿ, ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳುವಂತೆ ಆಶಿಸಿದ್ದಾರೆ. ಭಾರತದ ಖ್ಯಾತ ಗಾಯಕರಲ್ಲಿ ಸೋನು ನಿಗಮ್ ಕೂಡ ಹೌದು. ಅವರು ಕನ್ನಡದ ಮಗ ಎನಿಸಿಕೊಂಡಿದ್ದಾರೆ. ‘ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಎಂಬ ಭಾವನೆ ನನ್ನದು’ ಎಂದು ಕೂಡ …

Read More »

ಈಜಲು ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿ ಗ್ರಾಮದ ಬಳಿಯ ಭದ್ರಾ ನಾಲೆಯಲ್ಲಿ ಸಂಭವಿಸಿದೆ.

ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ ಮಕ್ಕಳೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶಾಲೆಗೆ ರಜೆ ಹಿನ್ನೆಲೆ ಈಜಲು ಬಂದಿದ್ದ ಮಕ್ಕಳು: ಮೃತ ಮಕ್ಕಳಿಬ್ಬರು ದೂರದ ತುರ್ಚಘಟ್ಟ ಗ್ರಾಮದ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಸ್ನೇಹಿತರಾಗಿದ್ದು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಕುರ್ಕಿ …

Read More »

ಇಡೀ ರಾಮನಗರ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ : ಡಿಸಿಎಂ ಡಿ ಕೆ

ರಾಮನಗರ : ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ತಿಳಿಸಿದರು. ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು. ಇದು ಋಣ ತೀರಿಸುವ ಕಾರ್ಯಕ್ರಮ. ನೀವು ನಮಗೆ ಕೊಟ್ಟ ಶಕ್ತಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ …

Read More »

ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

ಮೈಸೂರು: ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲ್ಲೂಕಿನ ದಂಡಿಕೆರೆ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಲೂಪುರ ಗ್ರಾಮದ ಸಿದ್ದೇಶ್ (40) ಮೃತ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಸಿದ್ದೇಶ್​, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ”ಪತ್ನಿ, ಮಕ್ಕಳು, ತಂದೆ, ತಾಯಿ ಸಹೋದರನಿಗೆ ಕ್ಷಮೆಯಾಚಿಸಿದ್ದಾರೆ. ತನ್ನ ಹೆಸರಿನಲ್ಲಿ ಸ್ನೇಹಿತನಿಗೆ ಬ್ಯಾಂಕ್ ಸಾಲ ನೀಡಿದ್ದೇನೆ. ಸ್ನೇಹಿತ ಮಣಿಕಂಠ ಎಂಬಾತನಿಗೆ ಖಾಸಗಿ ಬ್ಯಾಂಕ್​ನಲ್ಲಿ …

Read More »