Breaking News

Daily Archives: ಫೆಬ್ರವರಿ 4, 2025

ನಿಂತುಹೋಗಿದ್ದ ಪ್ರಶಸ್ತಿಗಳಿಗೆ ಮರುಜೀವ

  “ಈ ಹಿಂದಿನ ಸರ್ಕಾರ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ, ಮೊಹರೆ ಹನುಮಂತರಾಯ ಪ್ರಶಸ್ತಿ, ಪರಿಸರ ಪತ್ರಿಕಾ ಪರಿಷತ್ ನೀಡುವ ಪ್ರಶಸ್ತಿಯನ್ನು ಅನೇಕ ವರ್ಷಗಳಿಂದ ನೀಡಿಲ್ಲ. ಅವರನ್ನು ಟೀಕಿಸಿ ಯಾವುದೇ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಮತ್ತೇ ಇದಕ್ಕೆ ಜೀವ ನೀಡಿದೆ. ರಘುರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು. …

Read More »

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು : “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ …

Read More »

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ

ಜಮಖಂಡಿ ತಾಲೂಕ ಆಸ್ಪತ್ರೆ ಹಾಗೂ ಆವರಣದಲ್ಲಿ ಕಣ್ಮರೆಯಾಗಿರುವ ಸ್ವಚ್ಛತೆ ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಅಶುಚಿತ್ವ ಸ್ವಚ್ಛತೆ ಕಾಣದ ಶೌಚಾಲಯಗಳು ಸ್ವಚ್ಛತೆ ಕಾಪಾಡದ ಆಸ್ಪತ್ರೆ ಸಿಬ್ಬಂದಿಗಳು ಸಿಬ್ಬಂದಿಗಳಿಗೆ ರೋಗಿಗಳು ಹಾಗೂ ಸಾರ್ವಜನಿಕರಿಂದ ಹಿಡಿ ಶಾಪ ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯವಾಗಿದ್ದು ರೋಗಿಗಳು ಪರದಾಡುವಂತಾಗಿದೆ. ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ   ಜಮಖಂಡಿ ತಾಲೂಕ ಆಸ್ಪತ್ರೆಯಲ್ಲಿ ಸ್ವಚ್ಛ ತೆ ದೂರಾ ದೂರ. ಮೂಗು ಕಣ್ಣು ಮುಚ್ಚಿಕೊಂಡೇ ತಿರುಗಾಡುವ ಪರಿಸ್ಥಿತಿ ಶೌಚಾಲಯಗಳಂತೂ …

Read More »

ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ

ಬೈಲಹೊಂಗಲ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ …

Read More »

ಗ್ರಾಹಕರ ಸೋಗಿನಲ್ಲಿ ಬ್ಯಾಂಕ್​ನಲ್ಲಿ ಹೊಂಚು ಹಾಕಿ ಹಣ ದೋಚುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್​​ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೇವನಹಳ್ಳಿಯ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕೆ. ಹರಿಕೃಷ್ಣ ಮತ್ತು ತಮಿಳುನಾಡಿನ ಕೆ. ಸುಧಾಕರ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಜ. 4ರಂದು ಗ್ರಾಹಕರೊಬ್ಬರ ಹಣ ದೋಚಿ ಪರಾರಿಯಾಗಿದ್ದರು.   ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ …

Read More »

ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಆರೋಪ : ಫೈನಾನ್ಸ್ ಮ್ಯಾನೇಜರ್ ಬಂಧನ

ದಾವಣಗೆರೆ : ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ತಮ್ಮದೇ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದಡಿ ಮ್ಯಾನೇಜರ್​ವೊಬ್ಬರನ್ನು ಜಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರು ಪಟ್ಟಣದ ಕೆಎಲ್ಎಂ ಆ್ಯಕ್ಸಿವ್ ಫಿನ್ ವೆಸ್ಟ್ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಅರವಿಂದ ಹನುಮಂತ ಬಂಧಿತ ಆರೋಪಿ.‌   ಬಂಧಿತ ಆರೋಪಿಯು ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್​ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ನಕಲಿ ಬಂಗಾರದ ಆಭರಣಗಳನ್ನು ಅಡವಿಟ್ಟಿದ್ದರು. ಬಳಿಕ …

Read More »

ಮೊಬೈಲ್ ತಂದಿಟ್ಟ ಅವಾಂತರ: ಓರ್ವ ಸಾವು 6 ಮಂದಿಗೆ ಶಿಕ್ಷೆ

ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ ವಿಶೇಷ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗ್ರಾಮದ ಗಂಗಾಧರ್ (42) ಕೊಲೆಯಾದ ವ್ಯಕ್ತಿ. ಚನ್ನರಾಯಪಟ್ಟಣ ತಾಲೂಕು ಜನಿವಾರ ಗ್ರಾಮದ ಭರತ್ (34), ಅಭಿಷೇಕ್ ಅಲಿಯಾಸ್ ಕಬಾಬ್ ಅಭಿ (29), ಚಿರಂಜೀವಿ (27), ಅಭಿ ಅಲಿಯಾಸ್​ ರೆಬಲ್ ಅಭಿ …

Read More »