Breaking News

Daily Archives: ಫೆಬ್ರವರಿ 6, 2025

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್ ಸಹಕಾರಿ: ಈಶ್ವರ ಖಂಡ್ರೆ

ಬೆಂಗಳೂರು : ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ …

Read More »

ವಿಶ್ವ ಕ್ಯಾನ್ಸರ್‌ ದಿನದ ಪ್ರಯುಕ್ತ ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್‌ ಹಾಗೂ ಸ್ತನಕ್ಯಾನ್ಸರ್‌ ತಪಾಸಣೆ

ಬೆಂಗಳೂರು: ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹಾಗೂ ಎಚ್‌ಸಿಜಿ ಕಾನ್ಸರ್‌ ಕೇಂದ್ರದ ಸಹಯೋಗದೊಂದಿಗೆ ಒಂದು ಸಾವಿರಕ್ಕೂ ಅಧಿಕ ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್‌ ಹಾಗೂ ಸ್ತನಕ್ತಾನ್ಸರ್‌ ತಪಾಸಣಾ ನಡೆಸಲಾಯಿತು. ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್ ಹಾಗೂ ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್ ಆರೋಗ್ಯ ತಪಾಸಣಾ ಮೇಳಕ್ಕೆ ಚಾಲನೆ ನೀಡಿದರು. ಈ ಕುರಿತು ಮಾತನಾಡಿದ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್, “ಎಚ್‌ಸಿಜಿ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ – ಡಿಸಿ ದಿವ್ಯ ಫ್ರಭು.

  – ಧಾರವಾಡ ಜಿಲ್ಲೆಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಓದುಬರಹ ಸುಧಾರಣೆ, ಎಸ್‍ಎಸ್‍ಎಲ್‍ಸಿ ಅನುತ್ತಿರ್ಣ ಪ್ರಮಾಣ ಕಡಿಮೆ ಮಾಡುವುದು ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್ಯಾಂಕ್ ಗಳಿಸುವ ಉದ್ದೇಶವನ್ನು ಮಿಶನ್ ವಿದ್ಯಾಕಾಶಿ ಹೊಂದಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ನಗರದಲ್ಲಿಂದು ಕೆ.ಇ.ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಶಾಲಾ …

Read More »

ಶನಿವಾರದೊಳಗೆ ಸೌರ ವಿದ್ಯುತ್ ಸರಿಯಾಗಿ ಪೂರೈಕೆಯಾಗಿದ್ದರೇ ಹೆಸ್ಕಾಂ ಕಚೇರಿಗೆ ಮುತ್ತಿಗೆ; ಮೆಂಡಿಲ್ ಗ್ರಾಮಸ್ಥರ ಎಚ್ಚರಿಕೆ…

ಶನಿವಾರದೊಳಗೆ ಸೌರ ವಿದ್ಯುತ್ ಸರಿಯಾಗಿ ಪೂರೈಕೆಯಾಗಿದ್ದರೇ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಕಳೆದ ಎಂಟು ತಿಂಗಳಿನಿಂದ ಮೆಂಡಿಲ್ ಗ್ರಾಮದಲ್ಲಿ ಸೌರ ವಿದ್ಯುತ್ ಸರಬರಾಜು ವ್ಯತ್ಯಯ ಗೊಂಡಿದ್ದು,ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಕಳೆದ ಎಂಟು ತಿಂಗಳಿನಿಂದ ಕತ್ತಲೆಯಲ್ಲಿ ಬದುಕುತ್ತಿದ್ದಾರೆ. ಹೆಸ್ಕಾಂ ಸಮಸ್ಯೆ ನಿವಾರಣೆ ಮಾಡುವುದರಲ್ಲಿ ವಿಫಲವಾಗಿದೆ. ಇದರಿಂದ ಬೇಸತ್ತು ಮೆಂಡಿಲ್ ಗ್ರಾಮಸ್ಥರು ಖಾನಾಪೂರ ಹೆಸ್ಕಾಂ ಇಲಾಖೆಯ ಕಚೇರಿಗೆ ಭೇಟಿ ನೀಡಿ, ತಮ್ಮ ಸಮಸ್ಯೆಯನ್ನು …

Read More »

ಎಕ್ಸಲ್ ಕಟ್ ಆಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ನ ಎಕ್ಸಲ್ ಕಟ್ ಆಗಿ ಪಲ್ಟಿಯಾದ ಪರಿಣಾಮ 60ಕ್ಕೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮುದಗಲ್ ಬಳಿ ಜರುಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಬಸ್ ಪಲ್ಟಿಯಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. 60ಕ್ಕೂ ಹೆಚ್ಚು ಪ್ರಯಾಣಿಕರನ್ನ ಹೊತ್ತುಕೊಂಡು ಲೆಕ್ಕಿಹಾಳ ಗ್ರಾಮದಿಂದ ಲಿಂಗಸೂಗೂರು ಬಸ್ ಕಡೆ ತೆರಳುತ್ತಿತ್ತು. ಬಸ್​ನಲ್ಲಿ ಸುಮಾರ 33 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಚರಿಸಿದ್ದರು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ …

Read More »

ಮುರುಘಾಮಠ ಜಾತ್ರೆ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಸ್ಪರ್ಧೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ಸುಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವದ ನಿಮಿತ್ತ ಧಾರವಾಡದಲ್ಲಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ವಿವಿಧ ಭಾಗದಿಂದ ಎತ್ತುಗಳನ್ನು ತಂದಿದ್ದ ರೈತರು ಸ್ಪರ್ಧೆಯಲ್ಲಿ ಅವುಗಳ ಶಕ್ತಿ ಪ್ರದರ್ಶನ ಮಾಡಿದರು. ಧಾರವಾಡ ಹೊರವಲಯದ ಸವದತ್ತಿ ರಸ್ತೆಯ ಕಾಶಿ ನಗರದ ಜಮೀನಿನಲ್ಲಿ ಮುರುಘಾಮಠದ ಶ್ರೀ ಮದಥಣಿ ಮುರುಘರಾಜೇಂದ್ರ ಮಹಾಸ್ವಾಮಿಗಳ 95ನೇ ಜಾತ್ರಾ ಮಹೋತ್ಸವದ ನಿಮಿತ್ತ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ನೇತೃತ್ವದಲ್ಲಿ ಈ …

Read More »

ಯಲ್ಲಮ್ಮ ದೇವಿ ಜಾತ್ರೆಗೆ ವಿಶೇಷ ಬಸ್

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತರು ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಭಾರತ ಹುಣ್ಣಿಮೆ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ದೇವಿ ಜಾತ್ರೆಯು …

Read More »

ಬೆಳಗಾವಿ ಜಿಲ್ಲೆಗೆ ಐದು ಪ್ರಶಸ್ತಿಗಳ‌ ಗರಿ

ಬೆಳಗಾವಿ: 2023-24ನೇ ಸಾಲಿನಲ್ಲಿ ಮಹಾತ್ಮ‌ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ, ಅತ್ಯುತ್ತಮ ಗ್ರಾಮ ಪಂಚಾಯಿತಿ, ಉತ್ತಮ ಕಾಯಕ ಬಂಧು ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳು ಬೆಳಗಾವಿ ಜಿಲ್ಲೆಗೆ ಒಲಿದಿವೆ. ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಮಾನವಿಯಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು: 7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದಾರೆ. ಮಾನವಿಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆೆ. ಆರೋಪಿ ಶಿವನಗೌಡ ಮತ್ತು ಖಾಸಗಿ ಶಾಲೆಯ ಆಡಳಿತ ಮಂಡಳಿಯವರನ್ನು ಬಂಧಿಸಲಾಗಿದೆ. ಆರೋಪಿ ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು …

Read More »

ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ …

Read More »