Breaking News

Daily Archives: ಫೆಬ್ರವರಿ 8, 2025

1000 ಕೋಟಿ ರೂ. ಆರೋಪ: ಯತ್ನಾಳ್​ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಕೆಡವಲು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಸಿದ್ಧವಾಗುತ್ತಿದೆ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ …

Read More »

ಬೆಳಗಾವಿ : ಹಲವೆಡೆ ಭಾನುವಾರ POWER CUT

ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಮುತ್ನಾಳ, ವೀರಕನಕೊಪ್ಪ, ಅರಳಿಕಟ್ಟಿ, ಬಸಾಪೂರ, ಹಿರೇಬಾಗೇವಾಡಿ, ಭೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ. ಕೆ. ಕೊಪ್ಪ, ಕಲಾರಕೊಪ್ಪ, ಸಿದ್ಧನಹಳ್ಳಿ, ಬಡೇಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗೇರಹಾಳ, ಬಡಸ, ನಂದಿಹಳ್ಳಿ ಹಾಗೂ ಕುಕಡೊಳ್ಳಿ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ, ಗಾಡಿಕೊಪ್ಪ, ಹಾಗೂ ಪಾರಿಶ್ವಾಡ ಗ್ರಾಮಗಳಿಗೆ …

Read More »

ಪೊಲೀಸ್​ ಠಾಣೆ ಮುಂದೆ‌ ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ

ಬೆಳಗಾವಿ, ಫೆಬ್ರವರಿ 08: ಪೊಲೀಸ್​ ಠಾಣೆ (Police Station) ಎದರು ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ ನಡೆಸಿರುವ ಘಟನೆ ರಾಯಬಾಗ (Raibag) ತಾಲೂಕಿನ ಹಾರೂಗೇರಿಯಲ್ಲಿ (Harugeri) ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿಯವರು ಹಾರೂಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ ಅಣ್ಣಪ್ಪ ಅವರ ಜಮೀನಿಗೆ ಬಾಬು ನಡೋಣಿ …

Read More »

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ

ಚಿಕ್ಕೋಡಿ, ಫೆಬ್ರವರಿ 08: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆಗೆ ಸೇರಿಕೊಂಡು ಪತ್ನಿ ಹತ್ಯೆ (kill) ಮಾಡಿ ಕೃಷ್ಣಾ ನದಿಗೆ ಎಸೆದಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಅಪ್ಪಾಸಾಬ ಅಲಿಯಾಸ್ ಮಚ್ಚೇಂದ್ರ ಓಲೇಕಾರ (45) ಕೊಲೆಯಾದ ಗಂಡ. ಹೆಂಡತಿ ಸಿದ್ದವ್ವ ಓಲೇಕಾರ್ ಮತ್ತು ಪ್ರಿಯಕರ ಗಣಪತಿ ಕಾಂಬಳೆಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜ.5ರಂದು ಸುಗಂಧಾದೇವಿ ದರ್ಶನಕ್ಕೆ ಹೋಗೋಣ ಅಂತಾ ಕರೆದುಕೊಂಡು ಬಂದಿದ್ದು, ಕೃಷ್ಣಾ ನದಿ ದಂಡೆ …

Read More »

ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದ ಬಿಜೆಪಿಯ ದೆಹಲಿ ಗೆಲುವು

2024 ರ ಲೋಕಸಭೆ ಚುನಾವಣೆ ನಂತರ ನಡೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸಂಪೂರ್ಣ ಬಹುಮತದ ಗೆಲುವು ಪಡೆದಿರುವ ಬಿಜೆಪಿಯ ಗೆಲುವಿನ ಅಶ್ವಮೇಧ ಕುದುರೆಯನ್ನು ಸದ್ಯಕ್ಕಂತೂ ಯಾರೂ ಕಟ್ಟಿ ಹಾಕುವ ಲಕ್ಷಣ ಇಲ್ಲ. ಈ ಗೆಲುವು ಮುಂದಿನ ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದಬಹುದೇ, ಈ ಬಗ್ಗೆ ಇಲ್ಲಿದೆ ನೋಡಿ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದು ಮೊನ್ನೆ ಹೊರಬಿದ್ದಿದ್ದ ಮತಗಟ್ಟೆ ಸಮೀಕ್ಷೆಯ ಫಲಿತಾಂಶವನ್ನು ಹೋಲುವಂತಿದೆ. ಬಿಜೆಪಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ

ಬೆಳಗಾವಿ, ಫೆಬ್ರವರಿ 7: ಲೋಕಸಭೆ ಚುನಾವಣೆ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರ ರಾಹುಲ್‌ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್​ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಜಾರಕಿಹೊಳಿ‌ ಬೆಂಬಲಿಗರು ಪಟಾಕಿ ಸಿಡಿಸಿ‌‌ ಸಂಭ್ರಮಾಚರಣೆ ಮಾಡಿದ್ದಾರೆ. …

Read More »

ಹಾಲಿ ಮುಖ್ಯಮಂತ್ರಿಯ ವಿರುದ್ಧದ ಅಪರಾಧ ಆರೋಪವನ್ನು ತನಿಖೆ ಮಾಡಲು ಲೋಕಾಯುಕ್ತ ಸಂಸ್ಥೆ ಸಮರ್ಥವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆಯೇ?, ಸಾಂವಿಧಾನಿಕ ನ್ಯಾಯಾಲಯ (ಹೈಕೋರ್ಟ್, ಸುಪ್ರೀಂ ಕೋರ್ಟ್)ಗಳು …

Read More »

ಪರ ಸ್ತ್ರೀಯೊಂದಿಗೆ ಸಲುಗೆ: ಸುಫಾರಿ ನೀಡಿ ಗಂಡನ ಕಾಲು ಮುರಿಸಿದ ಪತ್ನಿ ಜೈಲಿಗೆ

ಕಲಬುರಗಿ: ಬ್ರಹ್ಮಪುರ ಪೊಲೀಸ್​​ ಠಾಣಾ ವ್ಯಾಪ್ತಿಯ ಅತ್ತರ ಕಾಂಪೌಂಡ್​​ ಬಳಿ ದರೋಡೆ ವೇಳೆ ಕಾಲು ಮುರಿದಿದೆ ಎಂದು ದಾಖಲಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದರೋಡೆಕೋರರಲ್ಲ.. ಕೈಹಿಡಿದ ಧರ್ಮಪತ್ನಿಯೇ ತನ್ನ ಗಂಡನ ಕಾಲು ಮುರಿಯಲು ಸುಪಾರಿ ನೀಡಿ ಕಾಲು ಮುರಿಸಿದ್ದಾಳೆ ಅನ್ನುವ ವಿಚಾರ ಪೊಲೀಸರು ಬಯಲಿಗೆಳೆದಿದ್ದಾಳೆ. ಪತ್ನಿ ನೀಡಿದ ಸುಪಾರಿಯಿಂದ ಎರಡು ಕಾಲು ಮುರಿದುಕೊಂಡು ಪತಿ ವೆಂಕಟೇಶ್​ ಬೆಡ್​ ರೆಸ್ಟ್​​ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಪಾರಿ ಕೊಟ್ಟ ಮಹಿಳೆ ಸೇರಿ ನಾಲ್ವರನ್ನು …

Read More »

ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್​ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. …

Read More »