Breaking News

Daily Archives: ಫೆಬ್ರವರಿ 10, 2025

ತಾಳಿಕೋಟಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ತಾಳಿಕೋಟಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಜಮಾದಾರ್ ಜುಬೇದಾ ಹುಸೇನ ಬಾಷಾ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ನಲ್ಲೇ ಗುರ್ತಿಸಿಕೊಂಡಿದ್ದ, ಪುರಸಭೆ ಸದಸ್ಯೆ ಕುಂಬಾರ್ ಭಾಗವ್ವ ಅವಮಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಫೆಬ್ರವರಿ 10 ರಂದು ದಿನಾಂಕ ನಿಗದಿ ಪಡಿಸಿತು. ಸರ್ಕಾರ …

Read More »

ಮುಡಾ ಹಗರಣ ಕೇಸ್: ಸಿಎಂ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು, (ಫೆಬ್ರವರಿ 10): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.  ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ …

Read More »

ರಾಹುಲ್ ಜಾರಕಿಹೊಳಿ ರಾಜ್ಯ ಯೂಥ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ!

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ರಾಜಕೀಯ ಮಹತ್ವಾಕಾಂಕ್ಷೆಗಳು ಮತ್ತೇನಾದರೂ ಉಳಿದೆವೆಯಾ? ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿ, ಮಗಳು ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿಯಿಂದ ಸಂಸದೆ ಮತ್ತು ಈಗ ಮಗ ರಾಹುಲ್ ಜಾರಕಿಹೊಳಿ ರಾಜ್ಯ ಯೂಥ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ! ಸತೀಶ್ ಅವರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಕನಸೊಂದಿದೆ. ಅದಾಗಿಬಿಟ್ಟರೆ ಅವರ ಸಂಪುಟದಲ್ಲಿ ರಾಹುಲ್ ಜಾರಕಿಹೊಳಿ ಸಚಿವನಾಗಬಹುದೇನೋ? ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ರಾಹುಲ್ …

Read More »

ಕಲಬುರಗಿ ಯಲ್ಲಿ ಮತ್ತೊಂದು ಅಕ್ರಮ: ನಕಲಿ ಅಂಕಪಟ್ಟಿ ಮಾಫಿಯಾ

ಕಲಬುರಗಿ, ಫೆಬ್ರವರಿ 10: ಸದಾ ಪರೀಕ್ಷಾ ಅಕ್ರಮಗಳಿಂದ ಸುದ್ದಿಯಲ್ಲಿರುವ ಕಲಬುರಗಿಯಲ್ಲಿ ಇದೀಗ ಮತ್ತೊಂದು ಅಕ್ರಮ‌ದ ಆರೋಪ ಕೇಳಿ ಬಂದಿದೆ. ಎಸ್ಎಸ್ಎಲ್‌ಸಿ‌ ಅಂಕಪಟ್ಟಿಯನ್ನು ಪೋರ್ಜರಿ (fake marks cards) ಮಾಡಿ ಸರ್ಕಾರಿ ಹುದ್ದೆ ಪಡೆದಿದ್ದು ಬಟಾಬಯಲಾಗಿದೆ. ಆ ಮೂಲಕ ನಕಲಿ ಅಂಕಪಟ್ಟಿ ಮಾಫಿಯಾ ಹುಟ್ಟಿಕೊಂಡಿದೆಯಾ ಎನ್ನೋ ಆತಂಕ ಶುರುವಾಗಿದೆ. ಕಲಬುರಗಿ ಅಂದರೆ ಸಾಕು ಪರೀಕ್ಷಾ ಅಕ್ರಮಗಳ ತವರು ಎನ್ನೋ ಕುಖ್ಯಾತಿ ಪಡೆದಿತ್ತು. ಇದೀಗ ಅದೇ ಸಾಲಿಗೆ ಮಗದೊಂದು ಅಕ್ರಮ ಸೆರ್ಪಡೆಯಾಗಿರುವ ಆರೋಪ ಕೇಳಿ ಬಂದಿದೆ. ಅದೆನೆಪ್ಪಾ …

Read More »

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು …

Read More »

ಸಾರ್ವಜನಿಕ ಆಸ್ತಿಗಳ ರಕ್ಷಣೆ : ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕದಿಂದ ಆಗುವ ಅನುಕೂಲವೇನು?

ಬೆಂಗಳೂರು : ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಮತ್ತು ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ. ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಈ ವಿಧೇಯಕವನ್ನು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಂಡಿಸಿದ್ದರು. ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು …

Read More »

ಆಸ್ಪತ್ರೆಯಿಂದ ಊರಿಗೆ ಶವ ತರುತ್ತಿರುವಾಗ ಮತ್ತೆ ಪ್ರಾಣ ಬಂದಿರುವ ಆಶ್ಚರ್ಯಕರ ಘಟನೆ ಶಿಗ್ಗಾಂವ್​ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.

ಹಾವೇರಿ : ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ ಬಳಿಕ ಆಸ್ಪತ್ರೆಯಿಂದ ಊರಿಗೆ ಶವ ತರುತ್ತಿರುವಾಗ ಮತ್ತೆ ಪ್ರಾಣ ಬಂದಿರುವ ಆಶ್ಚರ್ಯಕರ ಘಟನೆ ಶಿಗ್ಗಾಂವ್​ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. 45 ವರ್ಷದ ಬಿಷ್ಟಪ್ಪ ಗುಡಿಮನಿ ಸಾವನ್ನಪ್ಪಿ ಬಳಿಕ ಬದುಕುಳಿದಿರುವ ವ್ಯಕ್ತಿ. ”ನಿನ್ನ ಡಾಬಾ ಬಂತು, ನಿನ್ನ ಅಂಗಡಿನೂ ಬಂತು ನೋಡು ಅಂತ ಸಣ್ಣ ಮಗ ಹೇಳಿದಾಗ ಹಾ.. ಅಂತ ಅಂದಾನ. ಆಗ ತಕ್ಷಣನೇ ಉಸಿರಾಡ್ತಿದಾನೆ, ಕಣ್ಣು ಬಿಟ್ಟಾನ ಅನ್ನೋದು ಗೊತ್ತಾಗಿದೆ. ತಕ್ಷಣ ಅಲ್ಲೇ ಆಂಬ್ಯುಲೆನ್ಸ್​ …

Read More »

ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿ ಕೆ ಶಿವಕುಮಾರ್

ಬೆಂಗಳೂರು/ಪ್ರಯಾಗ್​ರಾಜ್ : ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಉತ್ತರಪ್ರದೇಶದ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಭಾನುವಾರ ಕುಟುಂಬ ಸಮೇತ ಪುಣ್ಯ ಸ್ನಾನ ಮಾಡಿದರು. ಡಿಸಿಎಂ ಡಿ. ಕೆ ಶಿವಕುಮಾರ್ ಅವರು ತಾವು ಅಜ್ಯಯ್ಯ ಎಂದೇ ಕರೆಯಲ್ಪಡುವ ನೆಚ್ಚಿನ ಗುರುಗಳಾದ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಪತ್ನಿ ಉಷಾ ಅವರೊಂದಿಗೆ ಪುಣ್ಯ ಸ್ನಾನ ಮಾಡಿದರು. ನಂತರ ಗಂಗಾ, ಯಮುನಾ …

Read More »

ಏರೋ ಇಂಡಿಯಾ – 2025 ಉದ್ಘಾಟನೆಗೆ ಕ್ಷಣಗಣನೆ

ಬೆಂಗಳೂರು: ಏಷ್ಯಾದ ಅತಿ ದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ರಾಜಧಾನಿಯು ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರ್ ಶೋಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ ಇಂದಿನಿಂದ ಫೆ.14ವರೆಗೆ ಏರ್ ಶೋ ನಡೆಯಲಿದ್ದು, ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ. 7 ಏಳು ಲಕ್ಷಕ್ಕೂ ಅಧಿಕ ವೀಕ್ಷಕರು ಆಗಮಿಸುವ ನಿರೀಕ್ಷೆಯಿದೆ. ಎಐ ಆಧಾರಿತ ಭದ್ರತೆ: ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ …

Read More »

ದಾವಣಗೆರೆಯಲ್ಲಿ ಎರಡು ಹಂದಿಗಳಿವೆ:ಯತ್ನಾಳ್

ದಾವಣಗೆರೆ: “ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ನಾವು ಹಾಕಿಕೊಂಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು, “ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹ ಪ್ರವೇಶವಿದೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇವೆ “ಎಂದರು. ಮುಂದುವರೆದ ಯತ್ನಾಳ್​​, “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ನಮ್ಮ ವಿರುದ್ಧದ ವರದಿಗಳು ಬರುತ್ತಿದೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ, …

Read More »