Breaking News

Daily Archives: ಫೆಬ್ರವರಿ 12, 2025

ಚಿತ್ರದುರ್ಗ: ನಿಧಿಯಾಸೆಗೆ ಜ್ಯೋತಿಷಿಯ ಮಾತು ಕೇಳಿ ನರಬಲಿ, ಇಬ್ಬರು ಅರೆಸ್ಟ್

ಚಿತ್ರದುರ್ಗ: ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂಬ ಕಪಟ ಜ್ಯೋತಿಷಿಯ ಮಾತು ಕೇಳಿ ವ್ಯಕ್ತಿಯೊಬ್ಬ, ಚಪ್ಪಲಿ ಹೊಲಿಯುತ್ತಾ ಜೀವನ ನಡೆಸುತ್ತಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಭಾನುವಾರ ನಡೆದಿದೆ. ಜೆ.ಜೆ.ಕಾಲೊನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಪೊಲೀಸರು ನರಬಲಿ ಕೊಟ್ಟ ಆರೋಪಿ ಆಂಧ್ರ ಪ್ರದೇಶದ ಆನಂದ್​ ರೆಡ್ಡಿ ಹಾಗೂ ಜ್ಯೋತಿಷಿ ರಾಮಕೃಷ್ಣ ಎಂಬಿಬ್ಬರನ್ನು ಬಂಧಿಸಿದ್ದಾರೆ. ನಿಧಿಯಾಸೆಗೆ ಚಪ್ಪಲಿ ಹೊಲಿಯುವ ಬಡಪಾಯಿಯ ಕೊಲೆ: ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಕುಮಾರ್ …

Read More »

ಸೀಟ್ ಎಡ್ಜ್’ ಸಿನಿಮಾದ ಮೊದಲ ಹಾಡು ರಿಲೀಸ್…ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೋಮ್ಯಾನ್ಸ್

ಸಾರಿ ಹೇಳುವೇ ಜಗಕ್ಕೆ ಎಂದ ಸಿದ್ದು ಮೂಲಿಮನಿ…ಸೀಟ್ ಎಡ್ಜ್ ಸಿನಿಮಾದ‌ ಮೊದಲ ಹಾಡು ರಿಲೀಸ್ ಸೀಟ್ ಎಡ್ಜ್ ಹೀಗೊಂದು ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಕಿರುತೆರೆ ಜೊತೆಗೆ ಒಂದಷ್ಟು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಹಾಗೂ ಯುವ ನಟಿ ರವೀಕ್ಷ ಶೆಟ್ಟಿ ಜೋಡಿಯಾಗಿ ಅಭಿನಯಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಸಿದ್ದು ಕೊಡಿಪುರ ಸಾಹಿತ್ಯದ ರೋಮ್ಯಾಂಟಿಕ್ ಗೀತೆಗೆ ಅರ್ಮನ್ ಮಲ್ಲಿಕ್ ಧ್ವನಿ ಕುಣಿಸಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. …

Read More »

ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್

ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್   ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಅತ್ಯುತ್ತಮ ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ …

Read More »

2030ರೊಳಗೆ ₹7.5 ಲಕ್ಷ ಕೋಟಿ ಹೂಡಿಕೆ, 20 ಲಕ್ಷ ಉದ್ಯೋಗ ಸೃಷ್ಟಿ: ಸಿಎಂ

ಬೆಂಗಳೂರು: ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯ. ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ದೃಢೀಕರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ ಎಂದರು. …

Read More »

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 1 ವರ್ಷ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ. ದೇಶದಲ್ಲಿ ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದು. ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ. ಮೆಕ್ಯಾನಿಕ್‌ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ …

Read More »

ಬಳಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್​ನ​ ಕೊಲೆ

ವಿಜಯಪುರ: ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ರೌಡಿಶೀಟರ್​ ಬಾಗಪ್ಪ ಹರಿಜನ್​ನನ್ನು ದುಷ್ಕರ್ಮಿಗಳು​​ ಹತ್ಯೆಗೈದಿದ್ದಾರೆ. ಮೃತ ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಶಿಷ್ಯನಾಗಿದ್ದು, ಈ ಹಿಂದೆ 2018ರಲ್ಲಿ ಕೋರ್ಟ್ ಆವರಣದಲ್ಲಿಯೇ ಈತನ ಮೇಲೆ ಫೈರಿಂಗ್ ನಡೆದಿತ್ತು

Read More »