ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನ ಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿಯೇ ಪ್ರತಿಕ್ರಿಯಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಉತ್ತರಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಸಭೆ, …
Read More »Daily Archives: ಫೆಬ್ರವರಿ 16, 2025
ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!
ಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ …
Read More »ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ
ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ …
Read More »‘ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ’ ಎಲ್ಲ ದರ ಏರಿಸಿದೆ ; ಬಸವರಾಜ ಬೊಮ್ಮಾಯಿ ಕಿಡಿ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೆಟ್ರೋ ದರ ಏರಿಕೆ ಮಾಡಿದ್ದು ಕೇಂದ್ರ ಸರಕಾರ ಅಲ್ಲ, ರಾಜ್ಯ ರ್ಕಾರವೇ ದರ ಏರಿಕೆಗೆ ಪ್ರಸ್ತಾಪ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಮೆಟ್ರೋ ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಇರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ …
Read More »‘ಸತ್ಯ ಮರೆಮಾಚಲು ಮೋದಿ ಸರ್ಕಾರ ಯತ್ನ’: ಖರ್ಗೆ ಗರಂ
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಆಘಾತ ತಂದ ಘಟನೆಯಾಗಿದೆ ಎಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ ಎಂದು ಕಿಡಿಕಾರಿದ್ದಾರೆ. ದೆಹಲಿ ಕಾಲ್ತುಳಿತ ಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ಎಂದು ಗರಂ ಆದ್ರು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ “ಅತ್ಯಂತ ದುಃಖಕರ” ಮತ್ತು “ಹೃದಯ ವಿದ್ರಾವಕ” ಘಟನೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ …
Read More »ನವದೆಹಲಿ ರೈಲು ನಿಲ್ದಾಣದಲ್ಲಿ ನಡೆಯಿತು ಕಾಲ್ತುಳಿತ 18 ಮಂದಿಯ ಸಾವು.
ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ ಏಕಾಏಕಿ ಜನರು ರೈಲು ಹತ್ತಲು ಹೋಗಿ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್ ನಂಬರ್ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, …
Read More »ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಶೇ.56ರಷ್ಟು ಹೆಚ್ಚಳವಾಗಲಿದೆ ತುಟ್ಟಿಭತ್ಯ;ಜನವರಿಯಿಂದಲೇ ಪಾವತಿ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ನೀಡಲಾಗುವ ಒಂದು ರೀತಿಯ ಭತ್ಯೆಯೇ ತುಟ್ಟಿ ಭತ್ಯೆ.ತುಟ್ಟಿ ಭತ್ಯೆಯನ್ನು ವರ್ಷಕ್ಕೆ ಎರಡು ಬಾರಿ ಬದಲಾಯಿಸಲಾಗುತ್ತದೆ. ಕೈಗಾರಿಕಾ ಕಾರ್ಮಿಕರ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI-IW) ಆಧರಿಸಿ ಜನವರಿ ಮತ್ತು ಜುಲೈನಲ್ಲಿ ಪರಿಷ್ಕೃತ ದರವನ್ನು ಜಾರಿಗೆ ತರಲಾಗುತ್ತದೆ. ಇದೀಗ ಕೇಂದ್ರ ಸಕಾರಿ ನೌಕರರ ಡಿಎ ಶೇ.3 ರಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ …
Read More »