Breaking News

Monthly Archives: ಫೆಬ್ರವರಿ 2025

ನೀವು ಸೈಬರ್ ಅಪರಾಧದ ಬಲಿಪಶುಗಳೇ” ಡಯಲ್ 1930

ಬೆಳಗಾವಿ: ಬೆಳಗಾವಿ ನಗರದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಅದರ ಭಾಗವಾಗಿ 1930 ಸಹಾಯವಾಣಿಗೆ ಇಂದು ಚಾಲನೆ ನೀಡಲಾಯಿತು. ಬೆಳಗಾವಿ ನಗರದ ಹೃದಯಭಾಗ ರಾಣಿ ಚನ್ನಮ್ಮ ವೃತ್ತದಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ 1930 ಸಹಾಯವಾಣಿಗೆ ಚಾಲನೆ ನೀಡಿದರು. ಚನ್ನಮ್ಮ ಪ್ರತಿಮೆ ಸುತ್ತಲೂ ಜಾಗೃತಿ ಫಲಕ ಅಳವಡಿಸಲಾಗಿದೆ. ಅದೇ ರೀತಿ ಬೃಹದಾಕಾರದ ಫ್ಲೆಕ್ಸ್​ನಲ್ಲಿ “ನೀವು …

Read More »

ಭದ್ರಾವತಿ ಶಾಸಕ ಸಂಗಮೇಶ್ ಮಗನ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ರಾಜಣ್ಣ

ಬೆಂಗಳೂರು: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ ‘ಪುತ್ರರತ್ನ’ ಬಸವೇಶ್ ನಿನ್ನೆ ಭದ್ರಾವತಿಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ ಕೆಟ್ಟ ಪದಗಳನ್ನು ಬಳಸಿ ಬೈದಾಡಿರುವ ಸಂಗತಿ ಕನ್ನಡಿಗರಿಗೆಲ್ಲ ಗೊತ್ತಿದೆ. ಒಂದು ಸುಸಂಸ್ಕೃತ ಕುಟುಂಬ ಯೋಚಿಸಲೂ ಸಾಧ್ಯವಿಲ್ಲದಂಥ ಕೆಟ್ಟ ಪದಗಳನ್ನು ಬಸವೇಶ್ ಅಧಿಕಾರಿಯ ವಿರುದ್ಧ ಬಳಸಿದ್ದಾನೆ. ಅವನು ಬಳಸಿದ ಭಾಷೆ ಮತ್ತು ಅಧಿಕಾರಿಯೊಂದಿಗೆ ನಡೆದುಕೊಂಡಿರುವ ರೀತಿಯನ್ನು ಸಹಕಾರ ಸಚಿವ ಕೆಎನ್ ರಾಜಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಶಾಸಕನ ಮಗನಾಗಲೀ ಆಥವಾ …

Read More »

ಟಾಟಾ ಮೋಟಾರ್ಸ್ ಕಾರುಗಳ ಮೇಲೆ ಬಂಪರ್ ರಿಯಾಯಿತಿ

ಟಾಟಾ ಕಾರುಗಳು ಫೆಬ್ರವರಿ ರಿಯಾಯಿತಿ ಕೊಡುಗೆಗಳು: ಈ ತಿಂಗಳು ನೀವು ಟಾಟಾ ಕಂಪನಿಯ ಹೊಸ ಕಾರು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಟಾಟಾ ಮೋಟಾರ್ಸ್ ತನ್ನ 2024 ರ ಉತ್ಪಾದನಾ ವರ್ಷದ ಮಾದರಿಗಳ ಮೇಲೆ ಉತ್ತಮ ರಿಯಾಯಿತಿಗಳು ಮತ್ತು ವಿನಿಮಯ/ಸ್ಕ್ರ್ಯಾಪೇಜ್ ಬೋನಸ್ ಅನ್ನು ನೀಡುತ್ತಿದೆ. ಟಿಯಾಗೊ, ಟಿಗೋರ್, ಪಂಚ್, ನೆಕ್ಸಾನ್, ಆಲ್ಟ್ರೋಜ್, ಹ್ಯಾರಿಯರ್, ಸಫಾರಿ ಮುಂತಾದ ವಿವಿಧ ವಿಭಾಗಗಳ ಟಾಟಾ ಕಾರುಗಳ ಮೇಲೆ ನೀವು ಭಾರಿ …

Read More »

ಸರ್ಕಾರಿ ಕಟ್ಟಡಗಳ ಮೇಲೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋ ಹಾಕಿರುವುದ ಆಕ್ಷೇಪ

ಬೆಂಗಳೂರು: ರಾಜಕೀಯ ನಾಯಕರ ಫೋಟೋಗಳನ್ನು ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ ಹಾಕುವುದು ಕರ್ನಾಟಕ ಬಯಲು ಜಾಗಗಳನ್ನು ವಿರೂಪಗೊಳಿಸುವುದನ್ನು ತಡೆಯುವ ಕಾಯ್ದೆಯ ವ್ಯಾಪ್ತಿಗೆ ಬರಲಿದೆಯೇ ಎಂಬುದರ ಕುರಿತಂತೆ ವಿವರಣೆ ನೀಡುವಂತೆ ಬಿಬಿಎಂಪಿಗೆ ಇಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಬಿಎಂಪಿ ಹಾಗೂ ಇತರೆ ಸರ್ಕಾರಿ ಕಟ್ಟಡಗಳಲ್ಲಿ, ಉದ್ಯಾನವನಗಳಲ್ಲಿ ವಿಜಯನಗರ ಶಾಸಕ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಫೋಟೋಗಳನ್ನು ಬಿಬಿಎಂಪಿ ಹಣದಲ್ಲಿ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯ ನಿವಾಸಿ ಎಚ್.ಎಂ.ಆರ್ತೀಶ್ ಎಂಬವರು ಸಾರ್ವಜನಿಕ ಹಿತಾಸಕ್ತಿ …

Read More »

ಯತ್ನಾಳ್​ಗೆ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು, ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಮಧ್ಯಪ್ರವೇಶ ಮಾಡಿದೆ. ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ. ಪಕ್ಷದ ಶಿಸ್ತು ಪಾಲನೆ ಮಾಡದಿರುವ ಬಗ್ಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಯತ್ನಾಳ್, 72 ಗಂಟೆಯೊಳಗೆ ಉತ್ತರಿಸುವಂತೆ …

Read More »

ಅಮಾನತಾದ ಖಾನಾಪುರದ ತಹಶೀಲ್ದಾರ್‌ ಪ್ರಕಾಶ್​ ಗಾಯಕವಾಡ

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ, …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

ಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಸೋಮವಾರ ಆದೇಶಿಸಿದ್ದಾರೆ. ವಾರ್ಡ್ ನಂ.23ರ ಜಯಂತ ಜಾಧವ ಹಾಗೂ ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಆದೇಶಿಸಿದ್ದಾರೆ ತಿನಿಸು ಕಟ್ಟೆಗಳ ಹರಾಜಿನಲ್ಲಿ ಸದಸ್ಯ ಜಯಂತ ಜಾಧವ ಅವರು ತಮ್ಮ ಪತ್ನಿ ಸೋನಾಲಿ ಜಾಧವ …

Read More »

ಯುದ್ಧದಲ್ಲಿ ಸೈನಿಕ ಶಸ್ತ್ರವನ್ನು ಕೆಳಗಿಟ್ಟ ಎಂದ ಮಾತ್ರಕ್ಕೆ, ಯುದ್ಧ ನಿಲ್ಲಿಸಿದ ಎಂದರ್ಥವಲ್ಲ. ಆ ಶಸ್ತ್ರ ಬದಲು ಬೇರೆ ಶಸ್ತ್ರದ ಆಯ್ಕೆ

ಮೈಸೂರು: “ಮುಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಿಲ್ಲ. ಬದಲಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿ, ನಾನೇ ವಾದ ಮಾಡಿ, ಅದಷ್ಟು ಬೇಗ ಮುಡಾ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇನೆ. ಅದಕ್ಕೆ ಬೇಕಾದ ಎಲ್ಲ ಸಾಕ್ಷ್ಯಾಧಾರಗಳು ನನ್ನಲಿವೆ. ನಾನು ಎಂದಿಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ” ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮುಡಾ 50:50 …

Read More »

ಕೈ ಮುಗಿದು ಕೇಳುವೆ, ಪ್ರಧಾನಿ ಬದಲಿಸಿ: ಸಂತೋಷ್ ಲಾಡ್

ಹಾಸನ: ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ, 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ, ಆದರೆ ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ, ಹಾಗಾಗಿ ಬಿಜೆಪಿಯವರಿಗೆ ಕೈ ಮುಗಿದು ಕೇಳುವೆ, ದೇಶದ ಮಹಾರಾಜ ಎನಿಸಿಕೊಳ್ಳುವ ಪ್ರಧಾನಿ ಮೋದಿ ಅವರನ್ನು ಬದಲು ಮಾಡಿ, ಇದೇ ದೇಶಕ್ಕೆ ಸಿಗುವ ಪರಿಹಾರ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೋದಿ ಬಗ್ಗೆ ಲೇವಡಿ ಮಾಡಿದರು. ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ತಾಳಿಕೋಟಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ತಾಳಿಕೋಟಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಜಮಾದಾರ್ ಜುಬೇದಾ ಹುಸೇನ ಬಾಷಾ ಅಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ನಲ್ಲೇ ಗುರ್ತಿಸಿಕೊಂಡಿದ್ದ, ಪುರಸಭೆ ಸದಸ್ಯೆ ಕುಂಬಾರ್ ಭಾಗವ್ವ ಅವಮಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದ್ದಾರೆ. ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಫೆಬ್ರವರಿ 10 ರಂದು ದಿನಾಂಕ ನಿಗದಿ ಪಡಿಸಿತು. ಸರ್ಕಾರ …

Read More »