Breaking News

Monthly Archives: ಫೆಬ್ರವರಿ 2025

ಕಾಮದ ತೀಟೆಗೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಎರಡು ಮಕ್ಕಳು ಅನಾಥ

ಬೆಂಗಳೂರು, (ಫೆಬ್ರವರಿ 26): ಇಂದು ಮಹಾಶಿವರಾತ್ರಿ. ಎಲ್ಲರ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದ್ರೆ, ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯ ಕಾಳಿಕಾ ನಗರದ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು. ಈ ಫೋಟೊದಲ್ಲಿರುವ ದಂಪತಿ ಮಧ್ಯೆ ಮಾತ್ರ ಹಬ್ಬದ ದಿನ ಬೆಳಗ್ಗೆಯೇ ಜಗಳ ಶುರು ಆಗಿತ್ತು .ಆದ್ರೆ ಜಗಳ ಕೊನೆಯಾಗಿದ್ದು ಮಾತ್ರ ದಂಪತಿಯ ಸಾವಿನಲ್ಲಿ. ತನ್ನ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ತಾನೂ ಸಹ ಆಕೆಯ ಸೀರೆಯಿಂದ …

Read More »

ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತ

ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ …

Read More »

ಮೇಕೆದಾಟು ಯೋಜನೆ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವು ಸ್ಪಷ್ಟಪಡಿಸಲಿ- ಡಿಕೆಶಿ

ಬೆಂಗಳೂರು: ಮೇಕೆದಾಟು ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಲು ಮನವಿ ಮಾಡಿದ್ದೇವೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆದ ಅವರು, ಇಂದು ಸುದ್ದಿಗೋಷ್ಠಿ ಕರೆದು ಈ ಬಗ್ಗೆ ಮಾಹಿತಿ ಹಂಚಿಕೊಂಡರು. ರಾಜಕೀಯ ವಿಚಾರವಾಗಿ ಏನೇ ಇರಲಿ, ಕೇಂದ್ರ ನೀರಾವರಿ ಸಚಿವರು ನ್ಯಾಯದ ಸ್ಥಾನದಲ್ಲಿದ್ದುಕೊಂಡು ನಿರ್ಧಾರ ತಿಳಿಸಬೇಕಿದೆ ಎಂದರು. ಮಹಾದಾಯಿ, …

Read More »

ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ನಿಷೇಧಿಸಿದರೆ ನ್ಯಾಯಾಂಗ ನಿಂದನೆ ಕೇಸ್​: ಸರ್ಕಾರಕ್ಕೆ ಮುಸ್ಲಿಂ​ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ನಿರಾಕರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಕರ್ನಾಟಕದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ ಬುಧವಾರ ಎಚ್ಚರಿಸಿತು. ಪರೀಕ್ಷೆಯ ವೇಳೆ ಹಿಜಾಬ್ ನಿಷೇಧ ಮುಂದುವರಿಯಲಿದೆ ಎಂಬ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ಟೀಕಿಸಿರುವ ಒಕ್ಕೂಟದ ಅಧ್ಯಕ್ಷ ಸಿ.ಆರ್.ಮುಹಮ್ಮದ್ ಇಮ್ತಿಯಾಜ್, “ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ನಿಷೇಧಿಸುವ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ …

Read More »

ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಬಂಗಾರ ದೋಚಿದ ಮೂವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ,‌ ಬಂಗಾರ ದೋಚಿದ್ದ ಮೂವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. 2020ರಲ್ಲಿ ಸಾಗರ ತಾಲೂಕು ಸಿರಿವಂತೆ ಗ್ರಾಮದ 44 ವರ್ಷದ ಮಹಿಳೆಯ ಕತ್ತು ಕೊಯ್ದ ದುಷ್ಕರ್ಮಿಗಳು, ಆಕೆಯ ಬಳಿ ಇದ್ದ ಚಿನ್ನಾಭರಣ ದೋಚಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ …

Read More »

ರೈತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರ ಬಂಧನ

ಹಾವೇರಿ: ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತರ್(38), ಪಾರೂಕ್ (23) ಮತ್ತು ಅಕ್ರಂ ಅಲಿ (25) ಎಂದು ಗುರುತಿಸಲಾಗಿದೆ. ಬಂಧಿತರಿಂದ 7 ಲಕ್ಷ 50 ಸಾವಿರ ರೂ ಮೌಲ್ಯದ ಮೂರು ಎತ್ತು‌ಗಳು ಮತ್ತು ಬೊಲೆರೋ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ‌ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.22 ರಂದು …

Read More »

ಪತ್ನಿಗೆ ಚಾಕು ಇರಿದು ಪರಾರಿಯಾದ ಪತಿ

ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ಬೇಸತ್ತು ಹಿರಿಯರ ಸಮ್ಮುಖದಲ್ಲಿ ದೂರವಾಗಿದ್ದ ಪತ್ನಿಗೆ ಚೂರಿ‌ ಇರಿದು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ. ಕುಡುಕ ಗಂಡನ ಕಾಟಕ್ಕೆ ಬೇಸತ್ತು ಪತ್ನಿ ದೂರವಾಗಿ ತವರು ಮನೆಯಲ್ಲಿ ವಾಸವಾಗಿದ್ದರು. ತವರು ಮನೆಯವರ ಜೊತೆಗೆ ಸಂತೆಗೆಂದು ಪಾಶ್ಚಾಪುರಕ್ಕೆ ಬಂದಿದ್ದ ವೇಳೆ ಮತ್ತೊಂದು ವಾಹನದಲ್ಲಿ ಬಂದ ಪತಿ ಹಾಲಪ್ಪ, ಪತ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಪತ್ನಿಗೆ ಹಿಂದಿನಿಂದ ಬಂದು …

Read More »

ಹುಬ್ಬಳ್ಳಿಯಲ್ಲಿ ಇಂದು ಸಿದ್ಧಾರೂಢ ಸ್ವಾಮೀಜಿ ರಥೋತ್ಸವ,

ಹುಬ್ಬಳ್ಳಿ: ಮಹಾಶಿವರಾತ್ರಿ ಪ್ರಯಕ್ತ ಇಂದು ಸಂಜೆ 5 ಗಂಟೆಗೆ ನೆರವೇರಲಿರುವ ಸಿದ್ಧಾರೂಢ ಸ್ವಾಮೀಜಿಗಳ ಅದ್ಧೂರಿ ರಥೋತ್ಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಥೋತ್ಸವಕ್ಕೆ ಸಾಕ್ಷಿಯಾಗಲು ಸಹಸ್ರಾರು ಭಕ್ತರು ವಿವಿಧೆಡೆಯಿಂದ ಹುಬ್ಬಳ್ಳಿಯತ್ತ ಆಗಮಿಸುತ್ತಿದ್ದಾರೆ. ರಥೋತ್ಸವಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷ ಬಸ್: ಸಿದ್ಧಾರೂಢ ಸ್ವಾಮೀಜಿಯ ರಥೋತ್ಸವ ಸಂಜೆ ವೇಳೆ ನಡೆಯಲಿದೆ. ಆದ್ದರಿಂದ ರಥೋತ್ಸವದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತರು ಹಾಗೂ ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ರಾತ್ರಿ ಹುಬ್ಬಳ್ಳಿಯಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ …

Read More »

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಘಟಪ್ರಭಾ- ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ …

Read More »

ಎಸ್ ಬಿಐ ಎಟಿಎಂ ಕಳ್ಳತನ ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಎಸ್ ಬಿಐ ಎಟಿಎಂ ಕಳ್ಳತನವಾಗಿದೆ. ಇದರಲ್ಲಿ 75,600 ರೂ. ಕಳ್ಳತನವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಬುಧವಾರ ಸಾಂಬ್ರಾ ಗ್ರಾಮದಲ್ಲಿ ಎಟಿಎಂ ಕಳ್ಳತನವಾದ ಜಾಗವನ್ನು ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿ ಮೂವರು ಕಳ್ಳತನ ಮಾಡಿರುವ ದೃಶ್ಯ ಸೆರೆಯಾಗಿದೆ. ಇದೇ ರೀತಿ ಕೆಲ …

Read More »