ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು. ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ಯ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ಕೆಟ್ಟ ಚಟಗಳನ್ನು ತ್ಯಜಿಸಿ …
Read More »Daily Archives: ಮಾರ್ಚ್ 4, 2025
ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ
ಚಾಮರಾಜನಗರ, ಮಾರ್ಚ್ 04: ಗುಂಡ್ಲುಪೇಟೆ (Gundlupete) ತಾಲೂಕಿನ ಬಂಡೀಪುರಕ್ಕೆ (Bandipur) ತೆರಳಿದಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ (ಮಾ.02) ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ (ಮಾ.03) ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲೇ ಇವೆ. ರೆಸಾರ್ಟ್‌ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ …
Read More »ಕಾರಿನ ಗಾಜಿಗೆ ಆಟೋ ಚಾಲಕನಿಂದ ಯದ್ವಾತದ್ವಾ ಗುದ್ದು: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್
ಬೆಂಗಳೂರು, ಮಾರ್ಚ್ 4: ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ರಸ್ತೆಯಲ್ಲಿ ಕೋಪದಿಂದ ಕಿರುಚಾಡುತ್ತಾ ಕಾರಿನ ಗಾಜಿನ ಮೇಲೆ ಯದ್ವಾತದ್ವಾ ಗುದ್ದಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋ ಗಮನಿಸಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದು, ರೋಡ್ರೇಜ್ ಪ್ರಕರಣಗಳಿಗೆ ನಗರದಲ್ಲಿ ಆಸ್ಪದ ನೀಡುವುದಿಲ್ಲ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ಜತೆಗೆ, ಆಟೊ ಚಾಲಕನ ದುಂಡಾವರ್ತನೆಯ ಹಾಗೂ ಆತನನ್ನು ಬಂಧಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.ಆಟಫ ಚಾಲಕನ ವರ್ತನೆಗೆ ಸಾಮಾಜಿಕ ಮಾಧ್ಯಮದಲ್ಲಿಯೂ ವ್ಯಾಪಕ …
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಏರಿಕೆ, ಸಾರ್ವಜನಿಕರ ಆಕ್ರೋಶ
ಹುಬ್ಬಳ್ಳಿ, ಮಾರ್ಚ್ 04: ಹುಬ್ಬಳ್ಳಿಯ (Hubballi) ಕಿಮ್ಸ್ (KIMS) ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ …
Read More »ಕೊಪ್ಪಳ ಜನರ ಹೋರಾಟಕ್ಕೆ ಸಂದ ಜಯ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ
ಕೊಪ್ಪಳ, (ಮಾರ್ಚ್ 04): ನಗರದಲ್ಲಿ ಬಲ್ಟೋಟ ಸ್ಟೀಲ್ ಪ್ಯಾಕ್ಟರಿಗೆ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು. ಈಗಾಗಲೇ ಕೊಪ್ಪಳ ಬಂದ್ ಕೂಡಾ ನಡೆಸಿದ್ದಾರೆ. ಸ್ವತ ಗವಿಮಠದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಪ್ಯಾಕ್ಟರಿ ಆರಂಭವಾಗಬಾರದು ಎಂದು ಬೀದಿಗಳಿದು ಹೋರಾಟ ಮಾಡಿದ್ದಾರೆ. ಈ ಸಂಬಂಧ ಇಂದು(ಮಾರ್ಚ್ 04) ಜನಪ್ರತಿನಿಧಿಗಳು ಮತ್ತು ಹೋರಾಟಗಾರರ ನಿಯೋಗ, ಸಿಎಂ ಭೇಟಿ ಮಾಡಿದ್ದು, ಕೂಡಲೇ ಫ್ಯಾಕ್ಟರಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲಾ ಜನರು …
Read More »21 ಕೋಟಿಯಿಂದ 3.71 ಲಕ್ಷ ಕೋಟಿವರೆಗಿನ ಬಜೆಟ್ ಇತಿಹಾಸ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇದೇ ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯದ ಬಜೆಟ್ ಇತಿಹಾಸ 21 ಕೋಟಿ ರೂ. ನಿಂದ ಆರಂಭವಾಗಿ ಇದೀಗ 3.71 ಲಕ್ಷ ಕೋಟಿ ರೂ.ಗೆ ತಲುಪಿದೆ. ರಾಜ್ಯ ಬಜೆಟ್ ಮೈಲಿಗಲ್ಲುಗಳ ವಿಶೇಷ ವರದಿ ಇಲ್ಲಿದೆ. ಕರ್ನಾಟಕ ದೇಶದ ಮಂಚೂಣಿಯಲ್ಲಿನ ಪ್ರಗತಿಶೀಲ ರಾಜ್ಯ. ಆರ್ಥಿಕವಾಗಿ ಸದೃಢವಾಗುವ ಮೂಲಕ ಕರ್ನಾಟಕ ದೇಶದ ಅಭಿವೃದ್ಧಿಶೀಲ ರಾಜ್ಯಗಳಲ್ಲಿ ಅಗ್ರಗಣ್ಯವಾಗಿದೆ. …
Read More »ಬಿ ಖಾತಾ ಅಭಿಯಾನದಿಂದಾಗಿ 55 ಲಕ್ಷ ಮನೆ ಮಾಲೀಕರಿಗೆ ಲಾಭ : ಸಚಿವ ಬೈರತಿ ಸುರೇಶ್
ಬೆಂಗಳೂರು : ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆಗೆ ಒಳಪಡಿಸಿ ಬಿ ಖಾತಾ ನೀಡುವ ಅಭಿಯಾನದಿಂದಾಗಿ ರಾಜ್ಯದ 55 ಲಕ್ಷ ಮನೆಗಳ ಮಾಲೀಕರಿಗೆ ಉಪಯೋಗವಾಗಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಅಕ್ರಮ ಹಾಗೂ ಕಾನೂನುಬಾಹಿರ ನಿವೇಶನ ಅಥವಾ ಜಮೀನು ಹೊಂದಿರುವ ಮಾಲೀಕರಿಗೆ ಬಿ ಖಾತಾ ನೀಡಲು ಇ-ಆಸ್ತಿ ತಂತ್ರಾಂಶದಲ್ಲಿ ಅನುವು ಮಾಡಿಕೊಡಲಾಗಿದೆ. ಹಲವು ವರ್ಷಗಳಿಂದ ಭೂಮಿ ಹೊಂದಿದ್ದರೂ ದಾಖಲಾತಿ ಇಲ್ಲದ ಕಾರಣ ಸರ್ಕಾರಕ್ಕೆ ತೆರಿಗೆ ನಷ್ಟವಾಗುತಿತ್ತು. ಅಂತಹ ಭೂ …
Read More »ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯಕ್ಕೆ ತುತ್ತಾಗಿ ಸಾವು: ಗಣ್ಯರ ಸಂತಾಪ
ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯಕ್ಕೆ ತುತ್ತಾಗಿ ಸಾವು: ಗಣ್ಯರ ಸಂತಾಪ ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿಯಲ್ಲಿ ನಡೆದಿದೆ. ಮಲ್ಲು ಪೂಜಾರಿ ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದಲ್ಲಿ ಬಿಎಸ್ಎಫ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲು ಕಳೆದ ವಾರ ರಜೆ ನಿಮಿತ್ತ ಸ್ವಗ್ರಾಮ ಬೊಮ್ಮನಜೋಗಿಗೆ ಆಗಮಿಸಿದ್ದ. ಆದ್ರೆ ಅಚಾನಕ್ಕಾಗಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಸೊಲ್ಲಾಪುರ ಆಸ್ಪತ್ರೆಗೆ ದಾಖಲಾಗಿದ್ದ. ಇಂದು …
Read More »ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ; ಕೃಷಿ ಪಂಪ್ ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್ ಪೂರೈಕೆ – ಸಚಿವ ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಸಮಸ್ಯೆಯೂ ಇಲ್ಲ. ಕೃಷಿ ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಇಂದು ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್ ಕಡಿತದ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಂಪ್ ಸೆಟ್‌ಗಳಿಗೆ ಇಡೀ ರಾಜ್ಯದಲ್ಲಿ ಪವರ್ ಕಟ್ ಇಲ್ಲ. 7 ಗಂಟೆ ವಿದ್ಯುತ್ ನೀಡುತ್ತಿದ್ದೇವೆ. ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಕಡಿತವಾಗಬಹುದು. ಇತ್ತೀಚೆಗೆ ಎಸ್ಕಾಂಗಳ …
Read More »ಖಾಸಗಿ ಬಡಾವಣೆಗಳ ಅನುಮೋದನೆಗೆ ಸರ್ಕಾರದ ಸಹಮತಿ ಅಗತ್ಯ: ಸಚಿವ ಬೈರತಿ ಸುರೇಶ್
ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ಅನುಮೋದನೆಗೆ ಇನ್ನು ಮುಂದೆ ಸರ್ಕಾರದ ಸಹಮತಿ ಪಡೆಯಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಸೂಚಿಸಿದ್ದಾರೆ. “ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು/ಯೋಜನಾ ಪ್ರಾಧಿಕಾರಗಳು ಸಾಧಿಸಿರುವ ಪ್ರಗತಿ ಕುರಿತಂತೆ ವಿಕಾಸಸೌಧದಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಸಿದ ಸಚಿವರು, ಖಾಸಗಿಯವರು ಭೂಮಿಯನ್ನು ಹೊಂದಿಸಿ/ಖರೀದಿಸಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರುವಾಗ ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅದು …
Read More »