ಬೆಂಗಳೂರು: ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಯನ್ನು ಅರಸೀಕೆರೆ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಮೌಸಮ್ ಪಹಡಿ (25) ಬಂಧಿತ ಆರೋಪಿ. ಫೆಬ್ರವರಿ 13ರಂದು ಹಾಸನದ ರೈಲ್ವೆ ಜಂಕ್ಷನ್ ಸಮೀಪದ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಸಕಲೇಶಪುರದಲ್ಲಿ ರಸ್ತೆ ಕಾಮಗಾರಿ ಕೆಲಸದಲ್ಲಿದ್ದ ಆರೋಪಿ, ಫೆಬ್ರವರಿ 13ರಂದು ನೇಪಾಳಕ್ಕೆ ತೆರಳಲು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ. ಹಾಸನದ ರೈಲ್ವೆ ಜಂಕ್ಷನ್ ಸಮೀಪದ ಶೆಡ್ ಬಳಿ …
Read More »Daily Archives: ಮಾರ್ಚ್ 5, 2025
ಗ್ರಾಮ ಆಡಳಿತ ಅಧಿಕಾರಿಗಳಿಗೆ 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸ ಸುಗಮಗೊಳಿಸಲು 4 ಸಾವಿರ ಲ್ಯಾಪ್ಟಾಪ್ ನೀಡಲು ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಸಾವಿರ ಲ್ಯಾಪ್ಟಾಪ್ ನೀಡಲು ಸರ್ಕಾರ ಅನುಮೋದಿಸಿದ್ದು, ಇನ್ನು 6 ತಿಂಗಳಲ್ಲಿ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಛಾವಾಡಿಗಳು ಶಿಥಿಲಗೊಂಡಿದ್ದು, ಅವುಗಳ ಪುನರ್ ನಿರ್ಮಾಣಕ್ಕೆ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು. …
Read More »ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗಕ್ಕೆ ಪ್ರವೇಶ ದೊರೆತಂತಾಗಿದೆ.
ಶಿವಮೊಗ್ಗ ಪ್ರವೇಶಕ್ಕೆ ಡಿಸಿ ಹಾಗೂ ಎಸ್ಪಿ ಹಾಕಿದ್ದ ನಿರ್ಬಂಧವನ್ನು ನ್ಯಾಯಾಲಯವು ತೆರವುಗೊಳಿಸಿದ್ದು, ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗಕ್ಕೆ ಪ್ರವೇಶ ದೊರೆತಂತಾಗಿದೆ. ಇನ್ನು ನಿರ್ಬಂಧ ಹೇರಿದ ಡಿ.ಸಿ. ಮತ್ತು ಎಸ್ಪಿ ಅವರ ನೀತಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಛೀಮಾರಿ ಹಾಕಿದರು. ರಾಜ್ಯದಲ್ಲಿ ನಡೆಯುತ್ತಿರುವ ಲವ್ ಜಿಹಾದ್’ಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಪುಸ್ತಕ …
Read More »ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ
ಗುತ್ತಿಗೆದಾರರಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಗುತ್ತಿಗೆದಾರ ಬಾಕಿ ಬಿಲ್ಲನ್ನು ಶೀಘ್ರ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಸದನದಲ್ಲಿ ಸಚಿವರನ್ನು ಆಗ್ರಹಿಸಿದರು ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಪ್ರಶ್ನೆ ಮಾಡಿದ ಅವರು 2024-25 ಸಾಲಿನಲ್ಲಿ ಇಲಾಖೆಯಿಂದ ಮೀಸಲಿಟ್ಟ ಅನುದಾನ10 ಸಾವಿರದ23 ಕೋಟಿ ಎಂದು ತೋರಿಸಲಾಗಿದೆ 25 ಫೆಬ್ರುವರಿವರೆಗೆ ಬಿಡುಗಡೆಯಾದ ಹಣ ಎಷ್ಟು ಬಾಕಿ …
Read More »ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹದ ಅನುದಾನಕ್ಕೆ ಸಲ್ಲಿಸಿದ ಅರ್ಜಿ ರದ್ಧಾಗುತ್ತಿರುವುದೇಕೆ; ಶಾಸಕ ಮಹೇಶ್ ಟೆಂಗಿನಕಾಯಿ
ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹದ ಅನುದಾನಕ್ಕೆ ಸಲ್ಲಿಸಿದ ಅರ್ಜಿ ರದ್ಧಾಗುತ್ತಿರುವುದೇಕೆ; ಶಾಸಕ ಮಹೇಶ್ ಟೆಂಗಿನಕಾಯಿ ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ಅನುದಾನವನ್ನು ಪಡೆಯಲು ಸಲ್ಲಿಸುವ ಹಲವಾರು ಅರ್ಜಿಗಳು ವಿಳಂಬವಾಗುತ್ತಿರುವುದೇಕೆ? ಸರ್ಕಾರದ ಬಳಿ ಅನುದಾನದ ಕೊರತೆಯಿದೆಯೇ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ನಿಜವಾದ ಕಟ್ಟಡ ಕಾರ್ಮಿಕರನ್ನು ಪರಿಶೀಲಿಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು. …
Read More »ಸಣ್ಣ ಮಾತು ಬೆಳೆದು ಜಗಳವಾಯ್ತು ಕೊನೆಗೆ ಬಡಪಾಯಿ ಜೀವ ಬಲಿಯಾತ್ತು
ಸಣ್ಣ ಮಾತು ಬೆಳೆದು ಜಗಳವಾಯ್ತು ಕೊನೆಗೆ ಬಡಪಾಯಿ ಜೀವ ಬಲಿಯಾತ್ತು ಇದು ಮಾನ್ವಿ ತಾಲೂಕಿನ ಮಲ್ಲಿನಮಡುಗು ಗ್ರಾಮದಲ್ಲಿ ನಡೆದ ಘಟನೆ ಇದು ಗ್ರಾಮದ ಒಂದೇ ಸಮುದಾಯ ಜನರ ನಡುವೇ ಈ ಘಟನೆ ನಡೆದಿದೆ ದಾರಿಯ ವಿಚಾರವಾಗಿ ಜಗಳ ಇಡೀ ಊರೇ ಆಯ್ತು ರಣರಂಗ 15 ಕ್ಕು ಹೆಚ್ಚು ಜನರಿಗೆ ಗಾಯ, ಮಾನ್ವಿ ಆಸ್ಪತ್ರೆಯಲ್ಲಿ ದಾಖಲು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಊರಿನ ಹಿರಿಯರ ಸಮ್ಮುಖದಲ್ಲಿ ಬಗೆಹರಿಯ ಬೇಕಾದ ಸಣ್ಣ …
Read More »ಬಳ್ಳಾರಿಯಲ್ಲಿ ಹಕ್ಕಿಜ್ವರ ಭೀತಿ
ಬಳ್ಳಾರಿ : ಜಿಲ್ಲೆಯಲ್ಲಿ ಹಕ್ಕಿಜ್ವರ ಪತ್ತೆ ಹಿನ್ನೆಲೆ ಜಿಲ್ಲಾಡಳಿತವು ಆಂಧ್ರ ಪ್ರದೇಶದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲರ್ಟ್ ಆಗಿರುವ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ 5 ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿದೆ. ಪ್ರಮುಖವಾಗಿ ಆಂಧ್ರಪ್ರದೇಶದ ಅನಂತಪುರ ಹಾಗೂ ಗುಂತಕಲ್ ಭಾಗದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಆಂಧ್ರ ಗಡಿಗೆ ಹೊಂದಿಕೊಂಡಿರುವ ಪಿಡಿಹಳ್ಳಿ ಗ್ರಾಮದಲ್ಲೂ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪಿಡಿಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ, ಕೋಳಿಗಳ ಆರೋಗ್ಯ ಪರಿಶೀಲನೆ …
Read More »ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿನ ಕೃಷ್ಣಾ ನದಿ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ. ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು …
Read More »ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.
ಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೆರವೇರಿಸಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು.
Read More »ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್.
ಬೆಂಗಳೂರು : “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ …
Read More »