Breaking News

Daily Archives: ಮಾರ್ಚ್ 10, 2025

ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ

ಬೆಂಗಳೂರು, ಮಾರ್ಚ್​ 10: ಕುಂಭಮೇಳ (Kumbh Mela) ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ.  ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ. ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ …

Read More »

ರೆಸಾರ್ಟ್​​​, ಹೋಂ ಸ್ಟೇ ಮಾಲೀಕರೊಂದಿಗೆ ಎಸ್​ಪಿ ರಾಮ್ ಸರಣಿ ಸಭೆ

ಗಂಗಾವತಿ(ಕೊಪ್ಪಳ): ಇಸ್ರೇಲ್ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಓರ್ವನ ಕೊಲೆ ಪ್ರಕರಣ ನಡೆದ ಬೆನ್ನಲ್ಲೇ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಜೊತೆ ಭಾನುವಾರ ಸಂಜೆ ಇಲ್ಲಿನ ಡಿವೈಎಸ್​ಪಿ ಕಚೇರಿಯಲ್ಲಿ ಎಸ್​ಪಿ ರಾಮ್ ಎಲ್. ಅರಸಿದ್ದಿ ಪ್ರತ್ಯೇಕ ಸರಣಿ ಸಭೆಗಳನ್ನು ನಡೆಸಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಿದರು. ಎಸ್​ಪಿ ರಾಮ್ ಎಲ್. ಅರಸಿದ್ದಿ ಮಾತನಾಡಿ, “ವಿದೇಶಿಗರು ಬಂದಾಗ ಅವರ ಸಂಪೂರ್ಣ …

Read More »

ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ

ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು …

Read More »

ಹೊರಗಿನ‌ ಕೆಲಸಕ್ಕೆ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಬಳಕೆ ಜಮಖಂಡಿ ಜೈಲು ಅಧಿಕಾರಿಗಳಿಂದ ಕರ್ತವ್ಯ ಲೋಪ.?

ಹೊರಗಿನ‌ ಕೆಲಸಕ್ಕೆ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಬಳಕೆ ಜಮಖಂಡಿ ಜೈಲು ಅಧಿಕಾರಿಗಳಿಂದ ಕರ್ತವ್ಯ ಲೋಪ.? ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿರುವ ಜೈಲಿನ ವಿಚಾರಣಾ ಧೀನ ಕೈದಿಗಳನ್ನು ಜೈಲರ್ ಹಾಗೂ ಸಿಬ್ಬಂದಿಗಳೇ ಹೊರಗಡೆ ಕರೆದುಕೊಂಡು ಹೋಗಿ ಕೆಲಸಕ್ಕಾಗಿ ಬಳಸಿಕೊಂಡು ಕರ್ತವ್ಯ ಲೋಪ ಎಸಗಿರುವ ಘಟನೆ ಸಾರ್ವಜನಿಕರನ್ನು ಹುಬ್ಬೇರಿಸುವಂತೆ ಮಾಡಿದೆ ಅವರು ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಗಳಾದ ಈರಪ್ಪ ಪುನಾಣೆ,ನಾಗಪ್ಪ ಪುನಾಣೆ ಎಂಬ ಆರೋಪಿಗಳು …

Read More »

25 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡಿನ ಬಾಲಕಿ, ನೆರೆಮನೆ ವ್ಯಕ್ತಿ ಶವವಾಗಿ ಪತ್ತೆ

ಸುಳ್ಯ/ಕಾಸರಗೋಡು: ಕಳೆದ ಫೆ.12ರಂದು ಕಾಸರಗೋಡಿನ ಪೈವಳಿಗಾದಿಂದ ನಾಪತ್ತೆಯಾಗಿದ್ದ ಬಾಲಕಿ ಹಾಗೂ ನೆರೆಮನೆಯ ವ್ಯಕ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 15 ವರ್ಷದ ಬಾಲಕಿ ಮತ್ತು 42 ವರ್ಷದ ವ್ಯಕ್ತಿಯ ಶವ ಪೈವಳಿಗಾದ ಬಾಲಕಿಯ ಮನೆ ಸಮೀಪ, ಮಂಡೆಕ್ಕಾಪ್ ಮೈದಾನದ ಪಕ್ಕದ ಅಕೇಶಿಯಾ ಮರದಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ಮೊಬೈಲ್ ಫೋನ್‌ ಮತ್ತು ಚಾಕು ದೊರೆತಿದೆ. ಕೇರಳದ ಗಡಿ ಪ್ರದೇಶಗಳು ಸೇರಿದಂತೆ ವಿವಿಧ ಠಾಣೆಗಳ 52 ಸದಸ್ಯರ ಪೊಲೀಸ್ ತಂಡ ಹಾಗೂ …

Read More »

ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ –

ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. “ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. …

Read More »

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* *ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …

Read More »

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು;

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …

Read More »

ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ

ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. …

Read More »