ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಬಹುಮತದಿಂದ ಆಯ್ಕೆಯಾದರು. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಮರಾಠಿಗರಾದ ಮಂಗೇಶ ಪವಾರ 41ನೇ ವಾರ್ಡ್ ಸದಸ್ಯರಾಗಿದ್ದು, ವೃತ್ತಿಯಲ್ಲಿ ನೇಕಾರಿಕೆ ಮಾಡುತ್ತಾರೆ. ಇನ್ನು …
Read More »Daily Archives: ಮಾರ್ಚ್ 15, 2025
“ಸರ್ಕಾರಿ ನೌಕರರು ಮಧ್ಯಾಹ್ನ 12 ರಿಂದ 3ರ ವರೆಗೆ ಕ್ಷೇತ್ರ ಭೇಟಿ ಮಾಡಬಾರದು.:ದಿನೇಶ್ ಗುಂಡೂರಾವ್
ರಾಯಚೂರು : “ಬೇಸಿಗೆ ಬಿಸಿಲಿನ ತಾಪ ಹೆಚ್ಚಳ ಹಿನ್ನೆಲೆ ಸರ್ಕಾರಿ ನೌಕರರ ಕೆಲಸದ ಸಮಯ ಬದಲಾವಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದ್ದು, ಬಿಸಿಲು ಇರುವುದರಿಂದ ಮಧ್ಯಾಹ್ನದ ಹೊತ್ತು ಕ್ಷೇತ್ರ ಭೇಟಿ ಮಾಡುವುದನ್ನು ಬಿಡಬೇಕು” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲೆಯ ಮಾನವಿ ಪಟ್ಟಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ನೌಕರರು ಮಧ್ಯಾಹ್ನ 12 ರಿಂದ …
Read More »ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ ಪಿಎಂಶ್ರೀ ಶಾಲೆಯನ್ನಾಗಿ ಪರಿವರ್ತನೆಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ದೇಶದಲ್ಲಿನ ಗ್ರಾಮೀಣ ಪ್ರದೇಶದ ಶಾಲೆಗಳನ್ನು ಕೇಂದ್ರೀಯ ಶಾಲೆಗಳ ರೀತಿಯಲ್ಲಿ ಸ್ಥಾಪಿಸಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಪಿಎಂಶ್ರೀ ಹೆಸರಿನ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮೂಡಲಗಿ ವಲಯದಲ್ಲಿ ಒಟ್ಟು …
Read More »ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ,
ಧಾರವಾಡ ಕಲಘಟಗಿ ರಸ್ತೆಯ ನುಗ್ಗಿಕೇರಿ ಬಳಿ ಸರಣಿ ಅಪಘಾತ, ಹಲವರಿಗೆ ಗಾಯ…. ಅಪಘಾತದಲ್ಲಿ ಕಾರ್ ಅಟೋ ಬೈಕ್‌ಗೆ ಡ್ಯಾಮೇಜ್ ಅಟೋ ಬೈಕ್ ಹಾಗೂ ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಅಟೋ ಚಾಲಕರಿಗೆ ಗಾಯವಾಗಿ ಕಾರ್‌ನಲ್ಲಿದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡ ಹೊರವಲಯದ ಕಲಘಟಗಿ ರಸ್ತೆ ನುಗ್ಗಿಕೇರಿಯಲ್ಲಿ ನಡೆದಿದೆ. ಅಟೋ ಮತ್ತು ಬೈಕ್ ನಡುವೆ ಮೊದಲು ಅಪಘಾತ ನಡೆದಿದ್ದು, ಈ ವೇಳೆ ಹಿಂಬದಿಯೇ ಬರುತ್ತಿದ್ದ ಕಾರ …
Read More »ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು*
ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ* *ಬೆಂಗಳೂರು:* ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, …
Read More »ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ
ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ ಬೆಳಗಾವಿಯ ರಾಮತೀರ್ಥ ನಗರದ ಸುರೇಶ ಯಾದವ ಪೌಡೇಶನ್ ಹಾಗೂ ರಾಮತೀರ್ಥ ನಗರದ ರಹವಾಸಿಗಳ ಸಂಯುಕ್ತ ಆಶ್ರಯದಲ್ಲಿ ಹೋಳಿ ಹಬ್ಬದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸುರೇಶ ಯಾದವ ಅವರು ಪೂರ್ವದಲ್ಲಿ ತಾರಕಾಸುರನೆಂಭ ರಾಕ್ಷಸನಿದ್ದನು ಆತ ದುರಹಂಕಾರಿಯು ಹಾಗೂ ಕ್ರೂರಿಯು ಆಗಿದ್ದನು. ತಾರಕಾಸುರ ತನಗೆ ಸಾವು ಬಾರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ. …
Read More »ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ …
Read More »ವೀರಣ್ಣ ಗುಡಗನಟ್ಟಿ ನಿಧನ
ವೀರಣ್ಣ ಗುಡಗನಟ್ಟಿ ನಿಧನ ಬೆಳಗಾವಿ- ಬೆಳಗಾವಿಯ ಆಂಜನೇಯ ನಗರದ ನಿವಾಸಿ ವೀರಣ್ಣ ಬ ಗುಡಗನಟ್ಟಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ಸದಾಶಿವ ನಗರದ ರುದ್ರಭೂಮಿಯಲ್ಲಿ ನಡೆದಿದೆ. ವೀರಣ್ಣ ಬ ಗುಡಗನಟ್ಟಿ ಅವರು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ಹಿರಿಯ ಸಹೋದರರಾಗಿದ್ದು ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ನಿಧನರಾದರು.
Read More »