ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರೀಲ್ 5, 2025 ರಂದು ಡಾ. ಬಾಬು ಜಗಜೀವನ ರಾಮ ಹಾಗೂ ಏಪ್ರೀಲ್ 14, 2025 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 17, 2025 ರಂದು ಜಿಲ್ಲಾ ಪಂಚಾಯತ ಸಭಾಂಗಣ 1ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಿಲಾಗಿದೆ. …
Read More »Daily Archives: ಮಾರ್ಚ್ 16, 2025
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.
ಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆಸಲು ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಸಮಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಮಾ.15) ನಡೆದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬೆಳಗಾವಿ 518, …
Read More »ಕಾಲುವೆಗೆ ಬಿದ್ದು ಮೃತಪಟ್ಟ ನರೇಗಾ ಕೂಲಿಕಾರ ಹನುಮಂತಪ್ಪ ಬಾಗಪ್ಪ
ಗಂಗಾವತಿ (ಕೊಪ್ಪಳ) : ನರೇಗಾದ ಕೂಲಿಕಾರರೊಬ್ಬರು ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್ (ನಂಬರ್ 28ನೇ ಕಾಲುವೆ) ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಬಾಗಪ್ಪ ಅದಾಪುರ ಎಂದು ಗುರುತಿಸಲಾಗಿದೆ. ಬಡ ಕುಟುಂಬಕ್ಕೆ ಸೇರಿದ್ದ ಈ ವ್ಯಕ್ತಿ ಗ್ರಾಮ ಪಂಚಾಯಿತಿಗಳು ಅನುಷ್ಠಾನ ಮಾಡುವ ಕೇಂದ್ರ ಸರ್ಕಾರದ ನರೇಗಾ ಕೂಲಿ …
Read More »ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ವಿಡಿಯೋ ಮಾಡಿದ್ದ ಪ್ರಕರಣದ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಗಳೂರು : ಯುವತಿಯೊಂದಿಗಿದ್ದ ಎಂದು ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು, ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣ ಸಂಬಂಧ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಈ ಬಗ್ಗೆ ವಕೀಲ ಅರುಣ್ ಬಂಗೇರ ವಿವರಿಸಿದ್ದು, ಅತ್ತಾವರದ ಖಾಸಗಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಕಾರಿನಲ್ಲಿ ಹೋಗುತ್ತಿದ್ದ. ಆತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ …
Read More »ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಅನೇಕಲ್, ಮಾರ್ಚ್ 16: ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಸರ್ಜಾಪುರ (Sarjapur) ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಬರ್ಬರ ಹತ್ಯೆಯಾಗಿದೆ. ಬಿಹಾರ (Bihar) ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಇದೇ ಖುಷಿಯಲ್ಲಿ, ದೊಡ್ಡ ಕನ್ನಲ್ಲಿ ಬಳಿಅಪಾರ್ಟ್ಮೆಂಟ್ನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ತಮ್ಮದೇ ಊರಿನವರನ್ನು ಆರೋಪಿ ಸೋನಾ …
Read More »ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ
ಮಂಡ್ಯ, ಮಾರ್ಚ್ 16: ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ (Food Poisoning) ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಉದ್ಯಮಿಯೊಬ್ಬರು ಶುಕ್ರವಾರ ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಬಳಿ ಇರುವ ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ …
Read More »ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು, ಮಾರ್ಚ್ 16: ನಟಿ ರನ್ಯಾ ರಾವ್ (Ranya Rao) ವಿದೇಶಗಳಿಂದ ಚಿನ್ನ ಅಕ್ರಮ ಸಾಗಾಟ (Gold Smuggling) ಮಾಡಿರುವ ವಿಚಸರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವಾಗ್ದಾಳಿ ನಡೆಸಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ …
Read More »ಭಿಕ್ಷಾಟನೆ ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ!
ಕಲಬುರಗಿ, ಮಾರ್ಚ್ 16: ಕಲಬುರಗಿ (Kalaburagi) ನಗರದಲ್ಲಿ ಭಯಾನಕ ಮತ್ತು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ದೃಶ್ಯ ನಡೆದಿದೆ. ಮಂಗಳಮುಖಿಯೊಬ್ಬರನ್ನು (Transgender) ಆಕೆಯ ಸಹವರ್ತಿಗಳೇ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಶಿವಾನಿ, ಭವಾನಿ, ಮಾಲಾ, ಶಿಲಾ ಎಂಬ ಮಂಗಳಮುಖಿಯರು ಸೇರಿಕೊಂಡು ಅಂಕಿತಾ ಚವ್ಹಾಣ ಎಂಬ ಮತ್ತೊಬ್ಬ ಮಂಗಳ ಮುಖಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ. ತಮ್ಮ ಜೊತೆಯಲ್ಲೇ ನಿತ್ಯವೂ ಭಿಕ್ಷಾಟನೆ ಮಾಡುತ್ತಿದ್ದ ಅಂಕಿತಾ ಎಂಬವರ ಮೇಲೆ ಹಾಡಹಗಲೇ ಏಕಾಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಜನ …
Read More »ಕೆಜಿಎಫ್ನಲ್ಲಿವೆ ಸಾಕಷ್ಟು ಚಿನ್ನದ ನಿಕ್ಷೇಪಗಳು! ಸಂಶೋಧನೆಗಳಿಂದ ತಿಳಿದುಬಂತು ಅಚ್ಚರಿಯ ಅಂಶ
ಕೋಲಾರ, ಮಾರ್ಚ್ 16: ಅದು 24 ವರ್ಷಗಳ ಹಿಂದೆ, ಅಂದರೆ 2001 ಮಾರ್ಚ್ 1 ರಲ್ಲಿ ನಷ್ಟದ ನೆಪವೊಡ್ಡಿ ಕೇಂದ್ರ ಸರ್ಕಾರ ಕೋಲಾರ (Kolar) ಚಿನ್ನದ ಗಣಿಗೆ (Gold Mine) ಬೀಗ ಹಾಕಿತ್ತು. ಆದರೆ ಚಿನ್ನದ ಗಣಿಗೆ ಬೀಗ ಹಾಕುವ ಸಂದರ್ಭದಲ್ಲಿ ಚಿನ್ನದ ಗಣಿ ಕಾರ್ಮಿಕರ ವೇತನ ಬಾಕಿ, ನಿವೃತ್ತಿ ವೇತನ ಸೇರಿ 58 ಕೋಟಿ ರೂಪಾಯಿ ಬಾಕಿ ಇತ್ತು. ಹೀಗಿರುವಾಗಲೇ ಬೀದಿಗೆ ಬಿದ್ದ ಹಲವಾರು ಕಾರ್ಮಿಕ ಸಂಘಟನೆಗಳು ತಮಗಾದ ಅನ್ಯಾಯವನ್ನು ಪ್ರಶ್ನಿಸಿ ನ್ಯಾಯಾಲಯದ …
Read More »ಸ್ನೇಹಿತರಿಂದಲೇ ಗೆಳೆಯನ ಬರ್ಬರ ಹತ್ಯೆ: ತಲೆ ಮೇಲೆ ಕಲ್ಲೆತ್ತಿ ಹಾಕುವ ಭಯಾನಕ ದೃಶ್ಯ ಸೆರೆ
ಕಲಬುರಗಿ, ಮಾರ್ಚ್ 16: ಆತ ಎಂದಿನಂತೆ ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ. ರಾತ್ರಿ ಹತ್ತು ಗಂಟೆಗೆ ಆತನ ತಂದೆ ಕರೆ ಮಾಡಿ ಎಲ್ಲಿದ್ದಿಯಾ, ಎಷ್ಟೋತ್ತಿಗೆ ಮನೆಗೆ ಬರ್ತಿಯಾ ಅಂತಾ ವಿಚಾರಿಸಿದ್ದಾರೆ. ಸ್ನೇಹಿತರ (friends) ಜೊತೆ ಹೊರಗಡೆ ಇದ್ದೇನೆ. ಆದಷ್ಟು ಬೇಗ ಬರ್ತೆನೆ ಅಂತಾ ಹೇಳಿದ್ದಾ. ಆದರೆ ತಡರಾತ್ರಿಯಾದರೂ ಮಗ ಮನೆಗೆ ವಾಪಸ್ ಬಂದಿರಲಿಲ್ಲ. ಮಗನ ಬರುವಿಕೆಯ ದಾರಿ ಕಾಯ್ತಿದ್ದ ಹೆತ್ತವರು ಬಳಿಕ ನಿದ್ದೆಗೆ ಜಾರಿದ್ದಾರೆ. ಬೆಳಗಾಗುವಷ್ಟರಲ್ಲಿ ಮನೆಯಿಂದ ಐವತ್ತು ಅಡಿ ದೂರದಲ್ಲೆ ಮಗನನ್ನು ಬರ್ಬರವಾಗಿ …
Read More »