ಉಡುಪಿ: ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕ್ಕೆ ಕಟ್ಟಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಬೋಟ್ನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ ಮಹಿಳೆ ದುಬಾರಿ ಬೆಲೆಯ ಸಿಗಡಿ ಮೀನನ್ನು ಕದ್ದಿದ್ದಾಳೆ ಎಂದು ಆರೋಪಿಸಲಾಗಿದೆ. ಮೀನು ಕದ್ದದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಆ ಮಹಿಳೆ ವಿಜಯನಗರ ಜಿಲ್ಲೆಯವರಾಗಿದ್ದು, ಅವರನ್ನು ಮರಕ್ಕೆ ಕಟ್ಟಿ ಹಾಕಿ …
Read More »Daily Archives: ಮಾರ್ಚ್ 19, 2025
ಸಂಕಷ್ಟದಲ್ಲಿ ಮೆಣಸಿನಕಾಯಿ ಬೆಳೆಗಾರರು
ಬೆಂಗಳೂರು: ಬಳ್ಳಾರಿ ಜಿಲ್ಲೆಯ ಮೆಣಸಿನಕಾಯಿ ಬೆಳೆಗಾರರು ಹಿಂದೆಂದೂ ಇಲ್ಲದಂತಹ ಸಂಕಷ್ಟದಲ್ಲಿ ಸಿಲುಕಿದ್ದು, ಕೇಂದ್ರ ಸರ್ಕಾರ ತಾರತಮ್ಯದ ಧೋರಣೆಯಿಂದಾಗಿ ಸರಣಿ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶಕ್ಕೆ ಸಿಲುಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಪಕ್ಕದ ಆಂಧ್ರಪ್ರದೇಶದ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಬಂದಿದೆ. ಬಳ್ಳಾರಿ ಜಿಲ್ಲೆಯ …
Read More »ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ಪೊಲೀಸರಿಂದಲೇ ಹಿಟ್ ಆ್ಯಂಡ್ ರನ್
ಪೊಲೀಸ್ ಜೀಪ್ ಡಿಕ್ಕಿಯಿಂದ (accident) ದ್ವಿಚಕ್ರವಾಹನದ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್ನ್ನು ಅಮಾನತು (suspended) ಮಾಡಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಆದೇಶ ಹೊರಡಿಸಿದ್ದಾರೆ. ಸಿಂಗಟಗೆರೆ ಠಾಣೆಗೆ ಸೇರಿದ ಜೀಪ್ ಡಿಕ್ಕಿಯಿಂದ ಗಂಗಾಧರ್(49) ಎಂಬುವವರು ಸಾವನ್ನಪ್ಪಿದ್ದರು. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ದ್ಯ ಪೊಲೀಸರು ಚಾಲಕ ಶಿವಕುಮಾರ್ ಬಂಧಿಸಿ ಜೀಪ್ ವಶಕ್ಕೆ ಪಡೆದಿದ್ದಾರೆ. ಅಪಘಾತ ವೇಳೆ …
Read More »RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ :ಸಿದ್ದರಾಮಯ್ಯ
ಬೆಂಗಳೂರು, (ಮಾರ್ಚ್ 19): ಆರ್‌ಎಸ್‌ಎಸ್‌ನಿಂದಲೇ (RSS) ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ (BJP) ಸಿಡಿದೆದಿದ್ದು, ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಸಾಲದಕ್ಕೆ ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ದಾಖಲಿಸಲಾಗಿದೆ. ಕಿರಣ್.ಎಸ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದು, ಬಿಎನ್ಎಸ್ ಸೆಕ್ಷನ್ 299,352,356(2)ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ. ಆರ್ಎಸ್ಎಸ್ ಬಗ್ಗೆ ಸಿಎಂ …
Read More »ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ
ದೇವರಿಗೆ ಪೂಜೆ ಸಲ್ಲಿಸಲು ತೆಂಗಿನ ಕಾಯಿಯನ್ನು ಕಲ್ಲಿನಿಂದಲೋ, ಮಚ್ಚಿನಿಂದಲೋ ಒಡೆಯುವುದು ಸಾಮಾನ್ಯ. ಆದರೆ ಈ ಗ್ರಾಮದಲ್ಲಿ ನಡೆಯುವ ಮುದುಕಮಾರಮ್ಮ ಹಬ್ಬದಲ್ಲಿ ತೆಂಗಿನ ಕಾಯಿಗಳನ್ನು ಹರಕೆ ಹೊತ್ತ ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ದತಿ ಇದೆ. ತೆಂಗಿನ ಕಾಯಿಗಳನ್ನ ತಲೆ ಮೇಲೆ ಒಡೆದರೂ ಅವರ ತಲೆಗೆ ನೋವಾಗಲಿ ಒಂದು ಹನಿ ರಕ್ತವಾಗಲಿ ಬರುವುದಿಲ್ಲ. ಈ ವಿಶಿಷ್ಟ ಹಬ್ಬದ ಕುರಿತು ಒಂದು ವರದಿ ಇಲ್ಲಿದೆ. ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ …
Read More »ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ
ಚಿಕ್ಕಮಗಳೂರು, (ಮಾರ್ಚ್ 19): ಅಮ್ಮನಿಗೆ ಬೈದಿದ್ದಕ್ಕೆ ತನ್ನ ಮಾವನನ್ನೇ ಕೊಂದಿರುವ (Murder) ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಂಚನಹಳ್ಳಿ ಸಾಹುಕಾರ ಎಂದೇ ಖ್ಯಾತಿ ಪಡೆದಿದ್ದ ಗಂಗಾಧರೇಗೌಡ ಅವರ ಮಗ ಸಿದ್ದರಾಮೇಗೌಡ ಅವರನ್ನು ಮಾರ್ಚ್ 15 ರ ಬೆಳಗ್ಗೆ ಹೆಣವಾಗಿ ಬಿದ್ದಿದ್ದ, ಸಿದ್ದರಾಮೇಗೌಡನ ಕುತ್ತಿಗೆ ಸುತ್ತ ರಕ್ತದ ಕಲೆಯಿದ್ದು, ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪಂಚನಹಳ್ಳಿ ಗ್ರಾಮವನ್ನೇ ಬೆಚ್ಚಿ ಬೀಳುವಂತೆ …
Read More »ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ
ಚಿಕ್ಕಮಗಳೂರು, ಮಾರ್ಚ್ 19: ನಾಪತ್ತೆಯಾಗಿದ್ದ (Missing) 10ನೇ ತರಗತಿ ವಿದ್ಯಾರ್ಥಿ (student) ನದಿಯಲ್ಲಿ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿರುವ ಶ್ರೇಯಸ್, ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕಳಸ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ಶ್ರೇಯಸ್ ವಾಸವಿದ್ದ. ನಾಪತ್ತೆಯಾಗಿದ್ದ ಆತನಿಗಾಗಿ ಪೊಲೀಸರು ಹುಡುಕಾಟ …
Read More »ರಾಜ್ಯಪಾಲರಿಂದ ಡಿಕೆ ಶಿವಕುಮಾರ್ಗೆ ಮತ್ತೊಂದು ಶಾಕ್
ಬೆಂಗಳೂರು, (ಮಾರ್ಚ್ 19): ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ವಿಧೇಯಕ (greater bengaluru …
Read More »7 ವರ್ಷದ ಬಾಲಕಿ ಮೇಲೆ ಬಿಜೆಪಿ ಯುವ ಮುಖಂಡನಿಂದ ಅತ್ಯಾಚಾರ
ಬಿಜೆಪಿ ಯುವ ಮುಖಂಡನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಸಿರಗುಪ್ಪದ ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ದೇವು ನಾಯಕ್ ವಿರುದ್ಧ ಸಿರಿಗೆರೆ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿ ದೇವು ನಾಯಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
Read More »ಬೆಳ್ಳಂ ಬೆಳಿಗ್ಗೆ 3ರಿಂದ 4 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿ
ಬೆಳಗಾವಿ : ಬೆಳ್ಳಂ ಬೆಳಿಗ್ಗೆ 3ರಿಂದ 4 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿಯಾದ ಘಟನೆ ಗೋಕಾಕ ಪಟ್ಟಣದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ವಿದ್ಯಾನಗರದಲ್ಲಿನ ವ್ಯಾಪಾರಸ್ಥ ಶ್ರೀರಾಮ ಚೌದರಿಯವರ ಮನೆಯಲ್ಲಿಟ್ಟಿದ್ದ 700 ಗ್ರಾಂ ಚಿನ್ನ ಕಳ್ಳತನ ಆಗಿದ್ದು ಸುದ್ದಿ ತಿಳಿದ ನಗರ ಠಾಣೆಯ CPI ಸುರೇಶಬಾಬು ಬಂಡಿವಡ್ಡರ ಮತ್ತು ನಗರ ಪಿ,ಎಸ್,ಐ, ಕೆ.ವಾಲಿಕಾರ ಇವರು ಸ್ಥಳಕ್ಕೆ …
Read More »