ಮಾರ್ಚ್ 22ರಂದು ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ಗೆ ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಬೆಂಬಲ ನೀಡಿದೆ. ಈ ಕುರಿತು ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಪ್ರತಿಕ್ರಿಯಿಸಿ, ಎಲ್ಲಾ ಆಟೋ ರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್‌ಗೆ ಬೆಂಬಲ ಕೊಡುತ್ತೇವೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
Read More »Daily Archives: ಮಾರ್ಚ್ 19, 2025
ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸುವಂತೆ ವಾಟಾಳ್ ನಾಗರಾಜ್ ಕರೆ
ಮೈಸೂರು : ಮಾ. 22ರಂದು ಕನ್ನಡಪರ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಎಲ್ಲರೂ ಬೆಂಬಲ ನೀಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ನಗರದಲ್ಲಿಂದು ಈಟಿವಿ ಭಾರತದ ಜೊತೆ ಮಾತನಾಡಿದ ಅವರು ಈ ಬಂದ್ ಏಕೆ ಎಂಬ ಕುರಿತು ಮಾಹಿತಿ ನೀಡಿದರು. ಬೆಳಗಾವಿಯ ಕೆಲವೆಡೆ ಕನ್ನಡಿಗನ ಮೇಲೆ ಮರಾಠಿಗರ ದಬ್ಬಾಳಿಕೆ ಹೆಚ್ಚಾಗಿದ್ದು, ಇದನ್ನ ಖಂಡಿಸಿ ಮಾ. …
Read More »ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಂಗಡಿಯಲ್ಲಿದ್ದ ಸುಮಾರು ಒಂದು ಕೋಟಿ ಮೊತ್ತದ ವಸ್ತು ಹಾನಿ
ಗಂಗಾವತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಲ್ಲಿನ ವಾಣಿಜ್ಯ ಮಳಿಗೆಯೊಂದಕ್ಕೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಮೊತ್ತದ ವಸ್ತುಗಳು ನಾಶವಾದ ಘಟನೆ ಇಲ್ಲಿನ ಕೊಪ್ಪಳ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು.ಮಾರಾಟ ಮತ್ತು …
Read More »ಮಾರಕಾಸ್ತ್ರ ಝಳಪಿಸುತ್ತಾ ಬೈಕ್ ವ್ಹೀಲಿಂಗ್: ಆರೋಪಿಗಳ ಬಂಧಿಸಿದ ಪೊಲೀಸರು
ಬೆಂಗಳೂರು : ಮಾರಕಾಸ್ತ್ರ ಝಳಪಿಸುತ್ತಾ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳು. ಮಾರ್ಚ್ 15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಗೆ ಉಜ್ಜುತ್ತಾ, ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ …
Read More »ಜಿಲ್ಲಾ ಹೆಸರು ಮರುನಾಮಕರಣಕ್ಕೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ
ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರದ ನಿರಾಕರಿಸಿದೆ. ಉನ್ನತ ಮೂಲಗಳ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಮರುನಾಮಕರಣ ಮಾಡಲು ಕೋರಿ ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ. ಆದ್ರೆ, ಯಾವ ಕಾರಣದಿಂದ ನಿರಾಕರಿಸಲಾಗಿದೆ ಎಂಬುದನ್ನು ತಿಳಿಸಿಲ್ಲ. ಆದರೆ, ಮೂಲಗಳು …
Read More »ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಹಿರಿಯ ಪೊಲೀಸ್ ಅಧಿಕಾರಿಗಳು
ಬೆಳಗಾವಿ : ಚಳಿಗಾಲ ಅಧಿವೇಶನ ವೇಳೆ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಬಂಧನ ಮಾಡಿದ್ದ ಬೆಳಗಾವಿ ಡಿಸಿಪಿ ಮತ್ತು ಎಸಿಪಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಧಾನ ಪರಿಷತ್ನಲ್ಲಿ ಅಶ್ಲೀಲ ಪದ ಬಳಕೆ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ …
Read More »ರಾಯಚೂರಿನಲ್ಲಿ ಭೀಕರ ಅಪಘಾತ
ರಾಯಚೂರು: ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ರಾಯಚೂರಿನಲ್ಲಿ ನಡೆಯಿತು. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‌ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶ ನಿವಾಸಿ ಸುರೇಶ್(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಅವರ ಕಾಲು ಮುರಿದಿದೆ. ರಸ್ತೆಯಲ್ಲಿ …
Read More »ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಖತರ್ನಾಕ ಕಳ್ಳಿಯರ ಗ್ಯಾಂಗ್ ಅರೆಸ್ಟ್..!!! 12 ಲಕ್ಷ 70 ಸಾವಿರ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ…. ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್’ನ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಮಾರ್ಕೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ನಗರದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನದ ಒಡವೆಗಳನ್ನು ಕದಿಯುತ್ತಿದ್ದ ನಗರದ ವಡ್ಡರವಾಡಿ ನಿವಾಸಿ ಅನೀತಾ ಚೌಗಲೆ (58) ನಿಶಾ ಲೊಂಡೆ (25) ಮತ್ತು ಗಿಡ್ಡಿ …
Read More »ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ವಾಪಸ ಆದ ಸುನಿತಾ ಮತ್ತು ಬುಚ್
ಅಂತರಿಕ್ಷ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಕೊನೆಗೂ ತಮ್ಮ ಸುಧೀರ್ಘ ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ಮರಳಿದ್ದಾರೆ. ಕೇವಲ 9 ದಿನಗಳ ಬಾಹ್ಯಾಕಾಶ ಪಯಣಕ್ಕಾಗಿ ಹೊರಟಿದ್ದ ಸುನಿತಾ ಮತ್ತು ಬುಚ್ ತಾಂತ್ರಿಕ ತೊಂದರೆಯಿಂದಾಗಿ 9 ತಿಂಗಳ ಕಾಲ ಅಂತರಿಕ್ಷದಲ್ಲೇ ಉಳಿಯುವಂತಾಗಿತ್ತು. ಕೃಶ ಶರೀರವಾಗಿರುವ ಬುಚ್ ಮತ್ತು ಸುನೀತಾ ಭೂಮಿಗೆ ಬಂದೊಡನೆ ಎಲ್ಲರತ್ತಾ ಕೈಬೀಸಿ ನಗುಬೀರಿದರು. ಇನ್ನು ಮುಂದಿನ 45 ದಿನ ಅವರಿಗೆ ಆರೈಕೆ ನೀಡಲಾಗುತ್ತಿದ್ದು ಬೆಚ್ಚಗಿನ ಉಡುಗೆ …
Read More »ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಬೆಂಗಳೂರು : ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ 1ರ ಬಳಿಯ ಕಾಂಪೌಂಡ್ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಹತ್ಯೆಗೈದು, ಬಳಿಕ ಬೆಂಕಿ ಇಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಬೆಳಗ್ಗೆ ಮೃತದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »