ಬೆಳಗಾವಿ : ಟ್ರೇಲರ್ನಲ್ಲಿ ಬೆಳಗಾವಿ ಮಹಾರಾಷ್ಟ್ರದ್ದು ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು “ಫಾಲೋವರ್” ಮರಾಠಿ ಚಿತ್ರ ವಿರುದ್ಧ ಸಿಡಿದೆದ್ದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಸಿನಿಮಾ ಪ್ರದರ್ಶನ ರದ್ದು ಪಡಿಸಲಾಗಿದೆ. ಗಡಿ ವಿವಾದದ ಬಗ್ಗೆ ಬೆಳಕು ಚೆಲ್ಲುವ ಚಿತ್ರ ಇದಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಕಾರ್ಯಕರ್ತರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಫಾಲೋವರ್ ಚಿತ್ರಪ್ರದರ್ಶನವನ್ನು ಟಾಕೀಸ್ …
Read More »Daily Archives: ಮಾರ್ಚ್ 22, 2025
ಕರ್ನಾಟಕ ಬಂದ್: ಕೆಲವು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
ಬೆಂಗಳೂರು : ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್ಗೆ ಕರೆ ಕೊಟ್ಟಿದ್ದು, ಕೆಲವು ಜಿಲ್ಲೆಗಳು ನೀರಸ ಪ್ರತಿಕ್ರಿಯೆ ತೋರಿದೆ. ಗಣಿ ನಾಡು ಬಳ್ಳಾರಿಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟಿನಿಂದ ಹಿಡಿದು ಎಲ್ಲವೂ ತೆರೆದಿದೆ. ಬಸ್, ಆಟೋ ಸಂಚಾರವಿದ್ದು ಬಳ್ಳಾರಿ ಮಂದಿ ಬಂದ್ಗೆ ಬೆಂಬಲ ನೀಡಿಲ್ಲ. ಆದರೆ ಬೆಳಗ್ಗೆ ಹತ್ತು ಗಂಟೆಗೆ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನೈತಿಕ ಬೆಂಬಲ ಕೊಡಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆ ಬಳ್ಳಾರಿ ರಾಯಲ್ ವೃತ್ತದಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ. …
Read More »