ಮೈಸೂರು : ರಾಜ್ಯಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷಗಳು ಹಿತವಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹರಿಹಾಯ್ದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮೂರೂ ಪಕ್ಷಗಳು ಲದ್ದಿ ಇದ್ದ ಹಾಗೆ, ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. ಅಧಿವೇಶನದಲ್ಲಿ ಯಾರಿಗೋಸ್ಕರ ಹೊಡೆದಾಟ ಮಾಡಿದರು ಎಂದು ಪ್ರಶ್ನಿಸಿದರು. ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ …
Read More »Daily Archives: ಮಾರ್ಚ್ 23, 2025
ಬಿ ಕೆ ಹರಿಪ್ರಸಾದ್ ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ : ಬಿ ವೈ ವಿಜಯೇಂದ್ರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ನೀವು ಅನ್ನೋದು ಜನರಿಗೆ ಗೊತ್ತಿದೆ ಎಂದು ಬಿ ಕೆ ಹರಿಪ್ರಸಾದ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ”ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿ. ಕೆ. ಹರಿಪ್ರಸಾದ್ರವರೇ, ಸ್ವಾತಂತ್ರ್ಯ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ …
Read More »ಹನಿಟ್ರ್ಯಾಪ್ ಮಾಡೋದು ಕೆಳಮಟ್ಟದ ರಾಜಕಾರಣ: ಶಾಸಕ ವಿನಯ್ ಕುಲಕರ್ಣಿ
ಧಾರವಾಡ: “ಹನಿಟ್ರ್ಯಾಪ್ ಮಾಡೋದು ಕೆಳಮಟ್ಟದ ರಾಜಕಾರಣವಾಗಿದೆ” ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಧಾರವಾಡ ಹೊರವಲಯದ ಕಿತ್ತೂರಿನಲ್ಲಿ ಮಾತನಾಡಿದ ಅವರು, “ನಮ್ಮನ್ನು ಜನ ಸಾಮಾನ್ಯರು ನೋಡುತ್ತಿದ್ದಾರೆ. ಹನಿಟ್ರ್ಯಾಪ್ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ರಾಜಕಾರಣದಲ್ಲಿ ಮಹಿಳೆಯರನ್ನು ಮುಂದೆ ಬಿಟ್ಟು ಇಂತಹ ಕೆಲಸಗಳು ನಡೆಯುತ್ತಿವೆ. ಹನಿಟ್ರ್ಯಾಪ್ ಮಾಡೋದರ ಬಗ್ಗೆ ಸದನದಲ್ಲಿ ಚರ್ಚೆ ಆಗಿದೆ. ಇದಕ್ಕೆ ಕಾಯ್ದೆ, ತಿದ್ದುಪಡಿ ಆಗಬೇಕು” ಎಂದು ಆಗ್ರಹಿಸಿದರು. “ಪತ್ನಿ ಶಿವಲೀಲಾ ಕುಲಕರ್ಣಿ ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪದ ಬಗ್ಗೆ …
Read More »ನೇಜಾರಿನ ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಅರ್ಜಿ ತಿರಸ್ಕರಿಸಿದ ಕೋರ್ಟ್
ಉಡುಪಿ: ಜಿಲ್ಲೆಯ ಹಂಪನಕಟ್ಟೆ ಸಮೀಪದ ನೇಜಾರಿನಲ್ಲಿ 2023ರಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಕೋರಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ …
Read More »ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ
ನವದೆಹಲಿ/ ಹುಬ್ಬಳ್ಳಿ: ರಾಜ್ಯದ ರಾಜಧಾನಿಗೆ ವಾಣಿಜ್ಯ ನಗರಿಯಾದ ಹುಬ್ಬಳ್ಳಿಯಿಂದ ಈಗ ಮತ್ತೊಂದು ವಿಮಾನಯಾನ ಶೀಘ್ರದಲ್ಲಿಯೇ (ಮಾರ್ಚ್ 30ರಿಂದ) ಆರಂಭವಾಗಲಿದೆ. ಇದರೊಂದಿಗೆ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ ಸಂಚಾರ ಮಾಡಲಿವೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ: ಬೆಂಗಳೂರು- ಹುಬ್ಬಳ್ಳಿ …
Read More »350 ಅಡಿಯ ಕಾರಿಂಜಬೆಟ್ಟ ನೋಡ ನೋಡುತ್ತಿದ್ದಂತೆ ಏರಿದ ಜ್ಯೋತಿರಾಜ್
ಬಂಟ್ವಾಳ(ದಕ್ಷಿಣ ಕನ್ನಡ): ಜಿಲ್ಲೆಯ ಕಾರಿಂಜ ಬೆಟ್ಟವು ರಾಜ್ಯದ ಅತಿ ಎತ್ತರದ ಬೆಟ್ಟಗಳಲ್ಲೊಂದು. ಈ ಬೆಟ್ಟವನ್ನು ಭಾನುವಾರ ಬೆಳಗ್ಗೆ ಕರ್ನಾಟಕದ ಸ್ಪೈಡರ್ಮ್ಯಾನ್ ಎಂದೇ ಹೆಸರುವಾಸಿಗಿರುವ ಚಿತ್ರದುರ್ಗದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರು ಕೆಲವೇ ನಿಮಿಷಗಳಲ್ಲಿ ಏರುವ ಮೂಲಕ ಗಮನ ಸೆಳೆದರು. ಮೊದಲ ಬಾರಿಗೆ ಈ ಬೆಟ್ಟವನ್ನೇರಿದ ಜ್ಯೋತಿರಾಜ್ ಸಾಹಸಕ್ಕೆ ನೆರೆದಿದ್ದ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಭಾನುವಾರ ಬೆಳಗ್ಗೆ 10 ಗಂಟೆಗೆ ಪುರಾಣ ಪ್ರಸಿದ್ಧ ಕಾರಿಂಜೇಶ್ವರನ ಬೆಟ್ಟದ ಮೇಲೆ ಹತ್ತಲು ಆರಂಭಿಸಿದ ಜ್ಯೋತಿರಾಜ್, ಸುಡುವ …
Read More »ಸ್ಪೀಕರ್ ತೀರ್ಮಾನ ಕಾನೂನಾತ್ಮಕ, ಬದಲಾವಣೆ ಮಾಡಬಾರದು: ಮಧು ಬಂಗಾರಪ್ಪ
ಶಿವಮೊಗ್ಗ: “ಸದನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಕಾನೂನಾತ್ಮಕವಾಗಿ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಅವರು ತಮ್ಮ ತೀರ್ಮಾನದಿಂದ ಹಿಂದೆ ಸರಿಯಬಾರದು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಮತ್ತು ಹಾಯ್ಹೊಳೆ ಕರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು. ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಂ ನಿರ್ಮಾಣವಾಗಿ 45 ವರ್ಷವಾಗಿದೆ. ಹಿಂದೆ ನೋಡಿದಾಗ ನೀರು ಸಾಕಷ್ಟು ಪೋಲಾಗಿ ಹೋಗುತ್ತಿತ್ತು. ಇದರ ರಿಪೇರಿ …
Read More »ಏಪ್ರಿಲ್ನಿಂದ ಗೃಹ ಆರೋಗ್ಯ ಯೋಜನೆ ಜಾರಿ : ಮನೆ ಬಾಗಿಲಿಗೆ ಬಂದು ಬಿಪಿ, ಶುಗರ್, ಕ್ಯಾನ್ಸರ್ ತಪಾಸಣೆ
ಬೆಳಗಾವಿ : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸವದತ್ತಿ ತಾಲೂಕಿನಲ್ಲಿ ಇಂದು ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ನಮ್ಮ …
Read More »ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ಮಠದ ಹುಂಡಿಯಲ್ಲಿ ಈ ಬಾರಿ 3.39 ಕೋಟಿ ರೂ ಹಣ ಮತ್ತು 1.28 ಕೆಜಿ ಬೆಳ್ಳಿ, 37 ಗ್ರಾಂ ಚಿನ್ನಾಭರಣಗಳು ಸಂಗ್ರಹವಾಗಿವೆ.
ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ತುಂಗಾತೀರದಲ್ಲಿ ನೆಲೆಸಿರುವ ರಾಯರ ಮಠಕ್ಕೆ ರಾಜ್ಯ, ಅಂತಾರಾಜ್ಯ, ದೇಶ-ವಿದೇಶಗಳಿಂದ ಭಕ್ತರು ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಯ ಮೂಲ ಬೃಂದಾವನದ ದರ್ಶನ ಪಡೆಯುತ್ತಾರೆ. ಈ ತಿಂಗಳಲ್ಲಿ ರಾಯರ ಉತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದು, ಕಾಣಿಕೆಯಾಗಿ ಕೋಟಿಗಟ್ಟಲೆ ರೂಪಾಯಿ ಮತ್ತು ಚಿನ್ನಾಭರಣವನ್ನು ಸಮರ್ಪಿಸಿದ್ದಾರೆ. ₹3.39 ಕೋಟಿ …
Read More »ಹನಿಟ್ರ್ಯಾಪ್ ಸದ್ದು ಮಧ್ಯೆ ಕುತೂಹಲ ಕೆರಳಿಸಿದ ಉಭಯ ನಾಯಕರ ಭೇಟಿ
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಲ್ಲಿಕಾರ್ಜುನ ಖರ್ಗೆ, ಅವರ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು. ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು. ಹನಿಟ್ರ್ಯಾಪ್ ಕುರಿತು ಈಗಾಗಲೇ ಸದನದಲ್ಲೇ ಸಚಿವ ರಾಜಣ್ಣ ಹೇಳಿಕೆ …
Read More »