ಎನ್ ಎಸ್ ಎಸ್ ದಿಂದ ಸೇವಾಮನೋಭಾವ ಅಭಿವೃದ್ದಿ ಅಥಣಿ : ಎನ್ ಎಸ್ ಎಸ್ ಶಿಬಿರದಿಂದ ಸೇವಾ ಮನೋಭಾವನೆ ಮತ್ತು ಸಹಭಾಗಿತ್ವ ಬೆಳೆಯುತ್ತದೆ ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ ಶಿಬಿರಗಳು ಉತ್ತಮ ವೇದಿಕೆ ಎಂದು ಜೆ ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ರಾಮ ಕುಲಕರ್ಣಿ ಅವರು ಹೇಳಿದರು. ಅವರು ಗುಂಡೇವಾಡಿ ಗ್ರಾಮದಲ್ಲಿ ಕೆ ಎ ಲೋಕಾಪೂರ ಪದವಿ ಮಹಾವಿದ್ಯಾಲಯದದ ಎನ್.ಎಸ್.ಎಸ್ ಘಟಕದ ವತಿಯಿಂದ ದತ್ತುಗ್ರಾಮ ಗುಂಡೇವಾಡಿಯಲ್ಲಿ ಹಮ್ಮಿಕೊಂಡ ಎನ್ …
Read More »Daily Archives: ಮಾರ್ಚ್ 25, 2025
ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ…
ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ… ‘ಸಹಾಯಕ್ಕಿಂತ ಸಂಕಷ್ಟ’ ಹೆಚ್ಚಾದಿತು….ಆತಂಕ ವ್ಯಕ್ತಪಡಿಸಿದ ಸ್ಥಳೀಯರು… ಬೆಳಗಾವಿಯಲ್ಲಿ ಈಗ ಮತ್ತೊಂದು ರೇಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೇ, ಬೆಳಗಾವಿಯ ಸೆಕೆಂಡ್ ಗೇಟ್’ನ ರಹಿವಾಸಿಗಳು ಇಕ್ಕಟ್ಟಿನ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸಿದರೇ, ಸಹಾಯಕ್ಕಿಂತ ಸಂಕಷ್ಟ ಹೆಚ್ಚಾಗಿಲಿದೆ ಎನ್ನುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೆಕೆಂಡ್ ರೇಲ್ವೆ ಗೇಟ್’ನಲ್ಲಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೇ, ಇಲ್ಲಿನ ರಹಿವಾಸಿಗಳು ಮೇಲ್ಸೇತುವೆ ನಿರ್ಮಾಣದಿಂದ …
Read More »ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ,ಈ ನಗರ ಈಗ ಹೈ ಅಲರ್ಟ್..
ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ, ಏನು ಬೇಕು ಅದನ್ನ ಮಾಡೋ ಹಾಗಿಲ್ಲ…ಈ ನಗರ ಈಗ ಹೈ ಅಲರ್ಟ್.. ಮಂಗಳೂರು ಕೇಸ್ ಬೆನ್ನಲ್ಲೆ ಹೈ ಅಲರ್ಟ್ ಆಗಿರೋ ಬಾಗಲಕೋಟೆ ಪೋಲಿಸ್.. ಹೈ ಡೆಪ್ನಿಷನ್ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬಾಗಲಕೋಟೆ ನಗರ. ಬ್ಯಾಂಕ್, ಎಟಿಎಂಗಳಿಂದ ಹಣ ರವಾನೆ ಮಾಡೋದಾದ್ರೆ ಪೋಲಿಸರು ಹೈ ಅಲರ್ಟ್ ಅಪರಾಧಿ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಾಗಲಕೋಟೆ, ನವನಗರ ಸೇರಿ ನಗರದಾದ್ಯಂತ 393 ಹೈಡೆಪ್ನಿಷನ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ದೂರದವರೆಗಿನ …
Read More »ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್
ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …
Read More »ನನಗೆ ಯಾರೂ ಜಾತಿ ನಿಂದನೆ ಮಾಡಿಲ್ಲ ಕೇಸ್ ವಾಪಸ್ ಪಡೆಯಿರಿ ಎಂದು ಮೀನು ಕದ್ದ ಆರೋಪ ಸಂಬಂಧ ಹಲ್ಲೆಗೊಳಗಾದ ಮಹಿಳೆಯು ಜಿಲ್ಲಾಧಿಕಾರಿಗಳಿಗೆ ಮನವಿ
ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ ಸಂಬಂಧ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಸಂಬಂಧ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಾಪಸ್ ಪಡೆಯುವಂತೆ ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆಯು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ತಮ್ಮ ಸಮುದಾಯದ ಜನರ ಜೊತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲ್ಲೆಗೊಳಗಾದ ಮಹಿಳೆಯು, ರಾಜಿ ಮಾಡಿಕೊಂಡಿದ್ದೇವೆ. ಈ ಪ್ರಕರಣ ಹಿಂಪಡೆಯಿರಿ ಎಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮೀನು ಕದ್ದ ಸಂಬಂಧ ಅದೇ ದಿನ …
Read More »ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ
ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹೆಸರಿನಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಗುಂಡುಮಿ (41), ಮೋನೀಷ್ ಕೆ.ಜೆ (36) ಹಾಗೂ ರಾಜಶೇಖರ (41) ಬಂಧಿತ ಆರೋಪಿಗಳು. ಕತ್ರಿಗುಪ್ಪೆಯ ರಾಮ್ ರಾವ್ ಲೇಔಟ್‌ನಲ್ಲಿರುವ ಅಕಾಡೆಮಿಯೊಂದರಲ್ಲಿ ಪಿಯುಸಿಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಯಾವುದೇ ಪರೀಕ್ಷೆ ಬರೆಯದೆಯೇ ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ …
Read More »ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ಎಕ್ಸ್ಪ್ರೆಸ್ ರೈಲು
ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ. ಬೆಂಗಳೂರು – ಬೆಳಗಾವಿ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06511 – ಎಸ್ಎಂವಿಟಿ ಬೆಂಗಳೂರು – ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು: ಮಾರ್ಚ್ 28, 2025 ರಂದು …
Read More »ವಾರಕ್ಕೊಮ್ಮೆ ನೀರು ಪೂರೈಕೆ – ನಾಗರಿಕರಿಗೆ ಸಂಕಷ್ಟದ ಬರೆ
ಬಳ್ಳಾರಿ : ನಗರದಲ್ಲಿ ಬಿರು ಬೇಸಿಗೆಯ ದಿನಗಳು ಪ್ರಾರಂಭವಾದ ಬೆನ್ನಲ್ಲಿಯೇ, ಮಹಾನಗರಪಾಲಿಕೆ ಹಾಗೂ ಜಲ ಮಂಡಳಿ ಅಧಿಕಾರಿಗಳು ನಾಗರಿಕರಿಗೆ ಶಾಕ್ ನೀಡಿದ್ದು, ಇನ್ನು ಮುಂದೆ ವಾರಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಉತ್ತಮ ಮಳೆಯಾಗಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹವೂ ತೃಪ್ತಿಕರವಾಗಿತ್ತು. ಟಿ. ಬಿ ಡ್ಯಾಂನ ‘ಕ್ರಸ್ಟ್ಗೇಟ್’ಗಳಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋದರೂ ಮತ್ತೆ ಡ್ಯಾಮ್ ಭರ್ತಿಯಾಗಿತ್ತು. ಉತ್ತಮವಾದ ಮಳೆಯಾದ ಕಾರಣ ಡ್ಯಾಂನಲ್ಲಿ ಸಾಕಷ್ಟು …
Read More »ರಾಜ್ಯೋತ್ಸವ ಪ್ರಶಸ್ತಿ: ಅರ್ಜಿ ಬೇಡ, ಸರ್ಕಾರದಿಂದಲೇ ಅರ್ಹರ ಆಯ್ಕೆಗೆ ಚಿಂತನೆ – ಸಚಿವ ತಂಗಡಗಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿಗಳನ್ನು ಅರ್ಜಿಗಳಿಂದ ಮುಕ್ತಗೊಳಿಸಿ ಸರ್ಕಾರದಿಂದಲೇ ನೇರವಾಗಿ ಅರ್ಹ ಸಾಧಕರನ್ನು ಆಯ್ಕೆ ಮಾಡುವ ಪದ್ಧತಿಯನ್ನು ಜಾರಿಗೆ ತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ. “ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ …
Read More »ಮನೆ ಬಾಗಿಲಿಗೆ ಆಸ್ತಿ ದಾಖಲೆ, ಅಕ್ರಮ ಕಟ್ಟಡ ನಿರ್ಮಾಣ ತಡೆಗೆ ‘ಎಐ’ ತಂತ್ರಜ್ಞಾನ ಬಳಕೆ: ಡಿಸಿಎಂ
ಬೆಂಗಳೂರು: ”ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ ಮಾಡಲಾಗುವುದು. ಅಲ್ಲದೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐʼ ತಂತ್ರಜ್ಞಾನದ ಬಳಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜೊತೆ ವಿಕಾಸಸೌಧದಲ್ಲಿ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಎಂ, ”ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 …
Read More »