Breaking News

Monthly Archives: ಮಾರ್ಚ್ 2025

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌‌ನಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌‌ನಿಂದ ಪ್ರತಿಭಟನೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ ಪಕ್ಷದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಜೆಡಿಎಸ್‌ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯಪುರ ದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಹಣವಿಲ್ಲದೆ …

Read More »

ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್: ಡಿಜಿಟಲ್ ಮೀಟರ್​ಗೆ ಹಣ ಭರಿಸಿದ್ರೆ ಮಾತ್ರ ವಿದ್ಯುತ್ ಪೂರೈಕೆ

ದಾವಣಗೆರೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಆಯಾಯ ವಿದ್ಯುತ್ ಕಂಪನಿಗಳು ಇದೀಗ ಹೊಸ ಡಿಜಿಟಲ್ ವಿದ್ಯುತ್ ಮೀಟರ್ ಜಾರಿ ಮಾಡಲು ಮುಂದಾಗಿವೆ. ಈ ಮೀಟರ್ ಹಳೇ ಮೀಟರ್​ಗಿಂತ ಸ್ವಲ್ಪ ಡಿಫರೆಂಟ್ ಎಂಬಂತೆ ಹಣ ಭರಿಸಿದ್ರೆ ಮಾತ್ರ ಜನರಿಗೆ ವಿದ್ಯುತ್ ಲಭ್ಯವಾಗಲಿದೆ. ಮೊಬೈಲ್​ಗೆ ಯಾವ ರೀತಿ ಹಣ ಭರಿಸುತ್ತೇವೋ ಅದೇ ರೀತಿ ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್ ಮಾದರಿಯಲ್ಲಿ ಹಣ ಭರಿಸಿದ್ರೆ ಮಾತ್ರ ವಿದ್ಯುತ್ ಪೂರೈಕೆ ಆಗಲಿದೆ. ಈಗಾಗಲೇ ಡಿಜಿಟಲ್ …

Read More »

ಸಂಚಾರಿ‌ ನಿಯಮ ಉಲ್ಲಂಘಿಸಿದವರಿಂದ 1,01,23,100 ರೂಪಾಯಿ ದಂಡ ವಸೂಲಿ

ಹುಬ್ಬಳ್ಳಿ: ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ದೊಡ್ಡ ಮಟ್ಟದ ದಂಡ ವಿಧಿಸಲಾಗುತ್ತಿದೆ. ಆದ್ರೂ ಕೂಡಾ ವಾಹನ ಸವಾರರು ಎಚ್ಚೆತ್ತುಕೊಳ್ಳುತ್ತಿಲ್ಲ. ಒಂದಿಲ್ಲೊಂದು ಕಾರಣದಿಂದ ನಿಯಮ ಉಲ್ಲಂಘಿಸುವ ಸವಾರರಿಂದ ಎರಡು ತಿಂಗಳಲ್ಲಿ ಕೋಟಿಗಟ್ಟಲೆ ದಂಡವನ್ನು ಹುಬ್ಬಳ್ಳಿ-ಧಾರವಾಡ ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ. ಕಳೆದ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಅವಳಿ ನಗರದ ಪೊಲೀಸರು, ಸಂಚಾರಿ‌ ನಿಯಮ ಉಲ್ಲಂಘನೆಯಿಂದ 1,01,23,100 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ಯ ಸೇವಿಸಿ ವಾಹನ ಚಾಲನೆ, ಏಕಮುಖ ಸಂಚಾರ …

Read More »

ಕೇಂದ್ರ ಸರ್ಕಾರವು ಬದ್ಧತೆ ತೋರಿದರೆ ರಾಜ್ಯದಲ್ಲಿ ವಯೋ ವಂದನ ಯೋಜನೆಯನ್ನು ಜಾರಿಗೊಳಿಸುತ್ತೇವೆ.:ದಿನೇಶ್ ಗುಂಡೂರಾವ್

ಬೆಂಗಳೂರು: ಹಣ ರಾಜ್ಯ ಸರ್ಕಾರದ್ದು, ಹೆಸರು ಕೇಂದ್ರ ಸರ್ಕಾರದ್ದು ಎಂದಾದರೆ ಆರೋಗ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ತಿಳಿಸಿದರು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಯುಷ್ಮಾನ್ ಭಾರತ – ಕರ್ನಾಟಕ ಯೋಜನೆಯ ಕೇಂದ್ರದ ಪಾಲು ಹೆಸರಿಗಷ್ಟೇ ಎಂಬಂತಾಗಿದೆ. ಕರ್ನಾಟಕವು ಶೇ.75ರಷ್ಟು ಪಾಲನ್ನು ಕೊಡುತ್ತಿದ್ದರೆ ಕೇಂದ್ರ ಕೇವಲ ಶೇ.25ರಷ್ಟನ್ನು ಮಾತ್ರ ಭರಿಸುತ್ತಿದೆ. ಕೇಂದ್ರವು ತನ್ನ ಪಾಲಿನ ಶೇ.60ರಷ್ಟು …

Read More »

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮಸೂದೆ ಮಂಡನೆ

ಬೆಂಗಳೂರು: ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು …

Read More »

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿ

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ (KPSC) ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ (Karnataka Govt) ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ (KPSC Act) ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ. ಪಿಎಸ್ಸಿ ತಿದ್ದುಪಡಿ …

Read More »

7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕೋಲಾರದಲ್ಲಿರುವ ಬೆಸ್ಕಾಂ ಎಇಇ …

Read More »

ನೇಪಾಳ ಮೂಲದ ಆರೋಪಿ ಬಂಧನ

ಬೆಂಗಳೂರು: ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿಯನ್ನು ಅರಸೀಕೆರೆ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಮೌಸಮ್ ಪಹಡಿ (25) ಬಂಧಿತ ಆರೋಪಿ. ಫೆಬ್ರವರಿ 13ರಂದು ಹಾಸನದ ರೈಲ್ವೆ ಜಂಕ್ಷನ್‌ ಸಮೀಪದ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್‌ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಸಕಲೇಶಪುರದಲ್ಲಿ ರಸ್ತೆ ಕಾಮಗಾರಿ ಕೆಲಸದಲ್ಲಿದ್ದ ಆರೋಪಿ, ಫೆಬ್ರವರಿ 13ರಂದು ನೇಪಾಳಕ್ಕೆ ತೆರಳಲು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ. ಹಾಸನದ ರೈಲ್ವೆ ಜಂಕ್ಷನ್ ಸಮೀಪದ ಶೆಡ್‌ ಬಳಿ …

Read More »

ಗ್ರಾಮ ಆಡಳಿತ ಅಧಿಕಾರಿಗಳಿಗೆ 4 ಸಾವಿರ ಲ್ಯಾಪ್​ಟಾಪ್ ನೀಡಲು ಕಾರ್ಯಾದೇಶ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸ ಸುಗಮಗೊಳಿಸಲು 4 ಸಾವಿರ ಲ್ಯಾಪ್​ಟಾಪ್ ನೀಡಲು ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಸಾವಿರ ಲ್ಯಾಪ್​ಟಾಪ್ ನೀಡಲು ಸರ್ಕಾರ ಅನುಮೋದಿಸಿದ್ದು, ಇನ್ನು 6 ತಿಂಗಳಲ್ಲಿ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಛಾವಾಡಿಗಳು ಶಿಥಿಲಗೊಂಡಿದ್ದು, ಅವುಗಳ ಪುನರ್ ನಿರ್ಮಾಣಕ್ಕೆ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ಥಳಾವಕಾಶ ಕಲ್ಪಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಜೊತೆ ಮಾತುಕತೆ ನಡೆಸಲಾಗುವುದು. …

Read More »

ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗಕ್ಕೆ ಪ್ರವೇಶ ದೊರೆತಂತಾಗಿದೆ.

ಶಿವಮೊಗ್ಗ ಪ್ರವೇಶಕ್ಕೆ ಡಿಸಿ ಹಾಗೂ ಎಸ್ಪಿ ಹಾಕಿದ್ದ ನಿರ್ಬಂಧವನ್ನು ನ್ಯಾಯಾಲಯವು ತೆರವುಗೊಳಿಸಿದ್ದು, ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗಕ್ಕೆ ಪ್ರವೇಶ ದೊರೆತಂತಾಗಿದೆ. ಇನ್ನು ನಿರ್ಬಂಧ ಹೇರಿದ ಡಿ.ಸಿ. ಮತ್ತು ಎಸ್ಪಿ ಅವರ ನೀತಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ನಗರಕ್ಕೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಛೀಮಾರಿ ಹಾಕಿದರು. ರಾಜ್ಯದಲ್ಲಿ ನಡೆಯುತ್ತಿರುವ ಲವ್ ಜಿಹಾದ್’ಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಪುಸ್ತಕ …

Read More »