ಪಿಯು ಫಲಿತಾಂಶ: ವಿದ್ಯಾರ್ಥಿಗಳಿಗೆ ವಿಶ್ ಮಾಡಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ 65.37) ರಾಜ್ಯಕ್ಕೆ 26ನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ …
Read More »Daily Archives: ಏಪ್ರಿಲ್ 8, 2025
ವಿಧಾನಸೌಧ ವೀಕ್ಷಣೆಗೂ ಶುಲ್ಕ
ಬೆಂಗಳೂರು, ಏಪ್ರಿಲ್ 08: ರಾಷ್ಟ್ರಪತಿ ಭವನ (Rashtrapati Bhavan) ಮತ್ತು ಸಂಸತ್ ಭವನದ (Sansat Bhavan) ಮಾದರಿಯಲ್ಲಿ ವಿಧಾನಸೌಧ (Vidhansoudha) ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್ ಗೈಡ್ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆಗೆ …
Read More »ಲಕ್ಕಿ ಭಾಸ್ಕರ್ ಆಗಲು ಹೋದ ಬ್ಯಾಂಕ್ ಮ್ಯಾನೇಜರ್ನ ಅನ್ ಲಕ್ಕಿ ಕಥೆ!
ರಾಯಚೂರು, (ಏಪ್ರಿಲ್ 08): ಆತ ಐನಾತಿಗಳಲ್ಲೇ ಐನಾತಿ. ಲಕ್ಕಿ ಭಾಸ್ಕರ್ (Lucky Bhaskar) ಸಿನೆಮಾದಂತೆ ಕೋಟಿ ಕೋಟಿ ವಂಚಿಸಿದ್ದ ಬ್ಯಾಂಕ್ನ ಮ್ಯಾನೇಜರ್ ನನ್ನು ರಾಯಚೂರು ಪೊಲೀಸರು (Raichur Police) ಕೂಡ ಸಿನೆಮಾ ಸ್ಟೈಲ್ನಲ್ಲೇ ಹೆಡೆಮುರಿಕಟ್ಟಿದ್ದಾರೆ. ಅಷ್ಟೇ ಅಲ್ಲ ಆತನಿಗೆ ಸಪೋರ್ಟ್ ಮಾಡುತ್ತಿದ್ದ ಆಂಧ್ರ ಪ್ರದೇಶದ ಮತ್ತೊಬ್ಬ ಬ್ಯಾಂಕ್ ಉದ್ಯೋಗಿ ಕೂಡ ಲಾಕ್ ಆಗಿದ್ದು, ತನ್ನ ಗುರುತು ಮರೆಮಾಚಲು ಆ ಕಿಲಾಡಿ ತನ್ನ ಗೆಟಪ್ ಅನ್ನೇ ಬದಲಿಸಿಕೊಂಡಿದ್ದ. ಆದರೂ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ನಗರದ ಬ್ಯಾಂಕ್ ಆಫ್ …
Read More »ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ
ರಾಯಚೂರು, (ಏಪ್ರಿಲ್ 08): ಜಿಲ್ಲೆಯ ಸಿಂಧನೂರಿನ (Sindhanur) ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur Five murder case) ರಾಯಚೂರು(Raichur) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ಇಂದು(ಏಪ್ರಿಲ್ 08) ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (Sindhanur District …
Read More »255 ನೀರಿನ ಬಾಟಲ್ ಮಾದರಿ ಪರೀಕ್ಷೆ; 95 ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟ- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದಾಗಿ ಈಗಾಗಲೇ ಕಲರ್ ಬಳಕೆ ಸೇರಿದಂತೆ ಅಗತ್ಯ ವಸ್ತುಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ರಾಜ್ಯ ನೀರಿನ ಬಾಟಲ್ ಸೇರಿದಂತೆ ಹಲವು ವಸ್ತುಗಳ ಸುರಕ್ಷತೆ ಪರೀಕ್ಷೆ ನಡೆಸಿದೆ. ಆರೋಗ್ಯ ಇಲಾಖೆ ಫೆಬ್ರವರಿ -ಮಾರ್ಚ್ ತಿಂಗಳಲ್ಲಿ ನಡೆಸಿದ ವಿಶೇಷ ಅಭಿಯಾನದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಾಟಲ್ಗಳಲ್ಲಿ 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ವಿವಿಧ ಬ್ರಾಂಡ್ಗಳಡಿ ಸ್ಥಳೀಯವಾಗಿ ಮಾರಾಟವಾಗುತ್ತಿರುವ ಶೇ. 70 …
Read More »ವಾಟರ್ ಬಾಟಲ್ ನೀರು ಅಸುರಕ್ಷಿತ
ಬೆಂಗಳೂರು, ಏಪ್ರಿಲ್ 8: ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ (Karnataka Food Department) ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಇದೀಗ ವಾಟರ್ ಬಾಟಲ್ (Water Bottle) ನೀರಿನ ಸರದಿ. ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ (Mineral Water) ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ …
Read More »ಪಿಯು ಫಲಿತಾಂಶ: ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ!
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ …
Read More »ಬಿಸಿಲ ಝಳ ಹೆಚ್ಚಾಗುತ್ತಿದ್ದು ಹೈಕೋರ್ಟ್ ಪೀಠದ ಕಲಾಪದ ಸಮಯದಲ್ಲಿ ಬದಲಾವಣೆ
ಬೆಂಗಳೂರು: ಬಿಸಿಲ ಝಳ ಹೆಚ್ಚಾಗುತ್ತಿದ್ದು ಕಲಬುರಗಿ ಹೈಕೋರ್ಟ್ ಪೀಠದ ಕಲಾಪದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8ಕ್ಕೆ ಆರಂಭವಾಗುವ ಕಲಾಪವು ಮಧ್ಯಾಹ್ನ 1.30ಕ್ಕೆ ಮುಗಿಯಲಿದೆ. ಇದೇ ನಿಯಮವನ್ನು ಕಲಬುರಗಿ ಮತ್ತು ಬೆಳಗಾವಿ ವಿಭಾಗದ 8 ಜಿಲ್ಲಾ ನ್ಯಾಯಾಲಯಗಳಿಗೂ ವಿಸ್ತರಿಸಲಾಗಿದೆ. ಏಪ್ರಿಲ್ 3ರಿಂದ ಸಮಯ ಬದಲಾವಣೆ ಜಾರಿಗೆ ಬಂದಿದ್ದು, ಮೇ 31ರವರೆಗೂ ಮುಂದುವರೆಯಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ …
Read More »ಅತ್ತೆ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಮಾಡಿದ ಅಳಿಯ
ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಅತ್ತೆ ಮನೆಯಲ್ಲಿಯೇ 11 ಲಕ್ಷ ರೂ.ಕಳ್ಳತನ ಮಾಡಿದ್ದ ಆರೋಪಿ ಅಳಿಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸುಲು ತಿಳಿಸಿದರು. ಕಾಳಗಿ ಪಟ್ಟಣದ ನಿವಾಸಿ ಮೀನಪ್ಪ ಬೆನ್ನೂರ (38) ಬಂಧಿತ ಆರೋಪಿಯಾಗಿದ್ದು, ಆತನಿಂದ 9.30 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಳೆದ ಮಾ.28 ರಂದು ರಟಕಲ್ ಗ್ರಾಮದ ಸಿದ್ದಮ್ಮ ಮಲ್ಲೇಶಪ್ಪ ರಟಕಲ್ ಅವರ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಆಗಿತ್ತು. …
Read More »ಪಿಯುಸಿ ರಿಸಲ್ಟ್: ಬಾಲಕಿಯರದ್ದೇ ಮೇಲುಗೈ
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದಿದ್ದ 6,37,805 ಲಕ್ಷ ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಶೇ.73.45ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.8ರಷ್ಟು ಕುಸಿತವಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಲ್.ಆರ್.ಸಂಜನಾಬಾಯಿ ಅವರಿಗೆ ಒಟ್ಟು 600ರಲ್ಲಿ 597 ಅಂಕ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ …
Read More »