ಬೆಂಗಳೂರು : ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ. ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ”ಸರ್ವೇ ಇಲಾಖೆ ಇಡೀ ಸರ್ಕಾರಕ್ಕೆ ಮೂಲ ಇಲಾಖೆ. ಯಾವುದೇ ಭೂಮಿಗೆ ದಾಖಲೆಗಳ …
Read More »Daily Archives: ಏಪ್ರಿಲ್ 10, 2025
ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಹುಬ್ಬಳ್ಳಿ : ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಕೆಎಂಸಿಆರ್ಐಗೆ ದಾಖಲಾಗಿ ಯುವಕ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಏಕಾಏಕಿ ಬೆಳಗಿನ ಜಾವ ಕೆಎಂಸಿಆರ್ಐ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದಿದ್ದಾನೆ. ಕೂಡಲೇ ತುರ್ತು …
Read More »ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಮತ್ತೆ 4 ತಿಂಗಳು ಬಂದ್
ಹುಬ್ಬಳ್ಳಿ: ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಬಳಿಯ ಫ್ಲೈ ಓವರ್ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮೆಲ್ಸೇತುವೆ ಕಾಮಗಾರಿ ತ್ವರಿತಗೊಳಿಸುವ ಸಂಬಂಧ ಏ. 20ರಿಂದ ನಾಲ್ಕು ತಿಂಗಳ ಹಿಂದಷ್ಟೆ ಹೊಸದಾಗಿ ನಿರ್ಮಿಸಿರುವ ಹಳೇ ಬಸ್ ನಿಲ್ದಾಣ (ನಗರ ಪ್ರಾದೇಶಿಕ ಬಸ್ ನಿಲ್ದಾಣ) ವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಬಸವವನದಿಂದ ಚನ್ನಮ್ಮ ವೃತ್ತದವರೆಗೆ 500 ಮೀಟರ್, ಚನ್ನಮ್ಮ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೆ 150 …
Read More »ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳಲ್ಲಿ ಪೋಡಿಮುಕ್ತ ಗ್ರಾಮಗಳಾಗಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ, ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್ಆರ್ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು …
Read More »ಇಳಕಲ್ ನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ ಮಾಡಿ ಬಂಗಾರ, ಬೆಳ್ಳಿ ನಗದು ದೋಚಿ ಪರಾರಿಯಾದ ಕಳ್ಳರು
ಬಾಗಲಕೋಟೆ : ಇಳಕಲ್ ನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ ಮಾಡಿ ಬಂಗಾರ, ಬೆಳ್ಳಿ ನಗದು ದೋಚಿ ಪರಾರಿಯಾದ ಕಳ್ಳರು ಬಾಗಲಕೋಟೆ ಜಿಲ್ಲೆ ಇಳಕಲ್ಲ ನಗರದಲ್ಲಿ ಹಾಡಹಗಲೇ ಕಳ್ಳತನ ಮಾಡಿ ಪರಾರಿಯಾಗಿದ್ದು ಕಳ್ಳರ ಹಾವಳಿ ಹೆಚ್ಚಾಗಿದ್ದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ ಕಳೆದ ಒಂದು ವರ್ಷದಿಂದ ನಗರದಲ್ಲಿ ಅಲ್ಲಲ್ಲಿ ಮನೆಗಳ್ಳತನಗಳು ನಡೆಯುತ್ತಲೇ ಇವೆ. ಬುಧವಾರ ಹಾಡ ಹಗಲೇ ಯಾರೂ ಇಲ್ಲದ ವೇಳೆ ಹೂಂಚು ಹಾಕಿದ ಖದೀಮರು ಬಸವ ನಗರದ ಸಾಯಿ ಬಡಾವಣೆಯಲ್ಲಿರುವ …
Read More »ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ
ಬೆಳಗಾವಿ ಸ್ಮಾರ್ಟ್ ಸಿಟೀಜ 2 ಪ್ರೊಜೆಕ್ಟ್,ಅಂ.ರಾ. ತಂಡ, ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಜಂಟಿ ಸಭೆ ಬೆಳಗಾವಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಸಿಟಿಸ್ 2 ಪ್ರೊಜೆಕ್ಟಗಾಗಿ ಅಂತರಾಷ್ಟ್ರೀಯ ಟೀಮ್ ಫ್ರಾನ್ಸ್ ಮತ್ತು ಜರ್ಮನಿ ಹಾಗೂ ಕೇಂದ್ರ ಸರ್ಕಾರದ ಟೀಮ್ ಬೆಳಗಾವಿ ಮಹಾನಗರ ಪಾಲಿಕೆಗೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಮಹಾಪೌರರು ಹಾಗೂ ಉಪ ಮಹಾಪೌರರು ಮಹಾನಗರ ಪಾಲಿಕೆ ಬೆಳಗಾವಿ ರವರ ಉಪಸ್ಥಿತಿಯಲ್ಲಿ ಸಭೆಯನ್ನು ಜರುಗಿಸಿದರು.. ಮಹಾನಗರ ಪಾಲಿಕೆ ಆಯುಕ್ತರು …
Read More »ಬೆಳಗಾವಿಯಲ್ಲಿ ಖಾಸಗಿ ಶಾಲೆಯ ಶುಲ್ಕದಲ್ಲಿ ಏಕಾಏಕಿ ಹೆಚ್ಚಳ… ಶಾಲೆಗೆ ಮುತ್ತಿಗೆ ಹಾಕಿ ಪೋಷಕರ ಆಕ್ರೋಶ !!!
ಬೆಳಗಾವಿಯಲ್ಲಿ ಖಾಸಗಿ ಶಾಲೆಯ ಶುಲ್ಕದಲ್ಲಿ ಏಕಾಏಕಿ ಹೆಚ್ಚಳ… ಶಾಲೆಗೆ ಮುತ್ತಿಗೆ ಹಾಕಿ ಪೋಷಕರ ಆಕ್ರೋಶ !!! ಮೊದಲೇ ಹಾಲಿನ, ವಿದ್ಯುತ್, ತೈಲ್ ದರ ಏರಿಕೆಯಿಂದ ಶಾಕ್ ನಲ್ಲಿರುವ ಬೆಳಗಾವಿ ಜನ, ಈಗ ಖಾಸಗಿ ಶಾಲೆಯಲ್ಲಿನ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ಖಂಡಿಸಿ ವನಿತಾ ವಿದ್ಯಾಲಯ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಖಾಸಗಿ ಶಾಲೆಯೊಂದರ ಪ್ರವೇಶ ಶ಼ುಲ್ಕ ಏಕಾಏಕಿ ಹೆಚ್ಚಳಗೊಂಡಿದ್ದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಆಡಳಿತ ಮಂಡಳಿಯನ್ನು …
Read More »20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭಸ್ಮ!*
ಬೆಳಗಾವಿಯಲ್ಲಿ 20ಕ್ಕೂ ಅಧಿಕ ಮೇವಿನ ಬಣಿವೆಗಳಿಗೆ ಬೆಂಕಿ,ಸುಟ್ಟು ಭ*ಸ್ಮ!* ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಘಟನೆ ಗ್ರಾಮದ ಹೊರವಲಯದಲ್ಲಿರುವ ಕೆರೆ ಮೈದಾನದಲ್ಲಿ ಒಟ್ಟಿದ್ದ ರೈತರ 20 ಬಣಿವೆಗಳು ಸು**ಟ್ಟು ಭಸ್ಮ ಹೊಟ್ಟು ಮತ್ತು ಕಣಕಿ ಮೇವಿನ ಬಣಿವೆಗಳು ಬೆಂ*ಕಿಗಾಹುತಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳ ಆಗಮನಿ ಬೆಂ*ಕಿ ನಂದಿಸುವಲ್ಲಿ ಹರಸಾಹಸ ದೊಡವಾಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
Read More »ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ರಾಮನಗರ, ಏಪ್ರಿಲ್ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್ಎನ್ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು. ನಡೆದದ್ದೇನು? 2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ …
Read More »ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ವಿಜಯೇಂದ್ರ
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು. ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ …
Read More »