Breaking News

Daily Archives: ಏಪ್ರಿಲ್ 10, 2025

ಕುಡಿವ ನೀರಿನ ದರ ಹೆಚ್ಚಳದ ಶಾಕ್

ಬೆಂಗಳೂರು: ಬೆಂಗಳೂರು ಜಲ ಮಂಡಳಿ ಅಳೆದೂ ತೂಗಿ ಕೊನೆಗೂ ಕುಡಿಯುವ ನೀರಿನ ದರ ಏರಿಕೆ ಮಾಡಿದೆ. ಹನ್ನೊಂದು ವರ್ಷಗಳ ನಂತರ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು ನಾಳೆ ನೀರಿನ ದರ ಹೆಚ್ಚಳ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಹೈ-ರೈಸ್ ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.30 ಪೈಸೆಯಿಂದ ಗರಿಷ್ಠ 1 ಪೈಸೆ ಪ್ರತಿ …

Read More »

ವೃತ್ತಿಯ ಕೊನೆ ದಿನ ಲಂಚದ ಬೇಡಿಕೆ ಇಟ್ಟ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಆಗಿದ್ದ ಕೃಷ್ಣಪ್ಪ ಅವರು ಬಿಲ್ ಪಾಸ್ ಮಾಡಲು ರೂ.1 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಆಗಿದ್ದರು. ಇವರು ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಎಲ್​ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆಯ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್​ ಬಿಲ್ ಪಾಸ್ ಮಾಡಲು 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. …

Read More »

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ 14 ದಿನಗಳ ಕಾಲ ED ವಶಕ್ಕೆ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು 62 ಕೋಟಿ ರೂ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿ, 14 ದಿನಗಳವರೆಗೆ ವಶಕ್ಕೆ ಪಡೆದಿದೆ. 2014ರಲ್ಲಿ ಮಂಜುನಾಥ ಗೌಡ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ಬೆಳಕಿಗೆ ಬಂದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಮಂಜುನಾಥ ಗೌಡ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. …

Read More »

ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ …

Read More »

ಚಾಲಕನ ನಿಯಂತ್ರಣ ಕಳೆದುಕೊಂಡು ಮನೆ ಮೇಲೆ ಬಿದ್ದ ಸರ್ಕಾರಿ ಬಸ್

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿ, ಕಂದಕದಲ್ಲಿದ್ದ ಮನೆಯ ಮೇಲ್ಛಾವಣಿ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ಇಂದು ನಡೆಯಿತು. ಘಟನೆಯಲ್ಲಿ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ತುಂತುರು ಮಳೆಯ ನಡುವೆ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು …

Read More »