ಬೆಂಗಳೂರು, ಏಪ್ರಿಲ್ 13: ಕೇವಲ ಮುಸ್ಲಿಮರನ್ನು (Muslim) ವೋಟ್ ಬ್ಯಾಂಕ್ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ …
Read More »Daily Archives: ಏಪ್ರಿಲ್ 13, 2025
ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ಹೋದ ಯೋಧನು ನೀರುಪಾಲು: ಬಾಗಲಕೋಟೆಯಲ್ಲಿ ಇಬ್ಬರು ಸಾವು
ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಬಾಲಕ ಶೇಖಪ್ಪ (15) ಮತ್ತು ಯೋಧ ಮಹಾಂತೇಶ (25) ಎಂದು ಗುರುತಿಸಲಾಗಿದೆ. ಆಗಿದ್ದೇನು ? ನದಿಯಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಯೋಧ ಸಹ ನೀರುಪಾಲಾಗಿದ್ದಾರೆ. ಹಂಸನೂರು ಗ್ರಾಮದ ಶೇಖಪ್ಪ, ಗದಗ ಜಿಲ್ಲೆಯ ಬೇನಾಳ ಗ್ರಾಮದ ಯೋಧ ಮಹಾಂತೇಶ ಮೃತ ದುರ್ದೈವಿಗಳು. ಸ್ನಾನ ಮಾಡಲು ಮೊದಲು ನದಿಗೆ …
Read More »ಹಾವೇರಿ: ವಂದೇ ಭಾರತ್ ರೈಲು ಟಿಕೆಟ್ ಬುಕ್ಕಿಂಗ್‌ಗೆ ಪ್ರಯಾಣಿಕರ ಪರದಾಟ
ಹಾವೇರಿ: ಹಾವೇರಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ ತೋರಿಸಿದ್ದು, ಆರಂಭದಲ್ಲೇ ಟಿಕೆಟ್ ಬುಕ್ಕಿಂಗ್ನಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿವೆ. ಹಾವೇರಿಗೆ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಆಗುತ್ತಿಲ್ಲ. ಹಾವೇರಿಯಲ್ಲಿ ರೈಲು ನಿಲುಗಡೆ ಇದ್ದರೂ, ಹತ್ತಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನ ಕೆಆರ್ಎಸ್ ರೈಲು ನಿಲ್ದಾಣದಿಂದ ಹಾವೇರಿಗೂ ಟಿಕೆಟ್ ಬುಕ್ಕಿಂಗ್ ಆಗುತ್ತಿಲ್ಲ. ಬದಲಾಗಿ, ಯಶವಂತಪುರದಿಂದ ಹಾವೇರಿಗೆ …
Read More »ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನವಾಗಬಹುದು ಎಂದ ಕೇಂದ್ರ ಸಚಿವ ವಿ.ಸೋಮಣ್ಣ
ಬೆಂಗಳೂರು: ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನವಾಗಬಹುದು. ಹಾಗಾಗಿ, ವರದಿ ತಿರಸ್ಕರಿಸಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹಿಸಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರೇ ಕರೆದು ಹೇಳಿದ್ದಾರೆ. ಸಿದ್ದರಾಮಯ್ಯರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ? ಅನ್ನೋ ನೋವು ನನ್ನನ್ನು ಕಾಡುತ್ತಿದೆ. ಜಾತಿ ಜನಗಣತಿ ವರದಿ …
Read More »ಸರ್ಕಾರದ ಮೂಗಿನ ನೇರಕ್ಕೆ ಜಾತಿ ಗಣತಿ ವರದಿ ತಯಾರಾಗಿದೆ: ರಂಭಾಪುರಿ ಶ್ರೀ
ಚಿಕ್ಕಮಗಳೂರು: “ಸರ್ಕಾರ ಯಾವುದೋ ಒಂದು ಜಾತಿಯನ್ನು ತುಷ್ಟೀಕರಣ ಮಾಡಲು ಜಾತಿ ಗಣತಿ ವರದಿ ತಯಾರಿಸಿದೆ. ಹತ್ತಾರು ವರ್ಷಗಳಿಂದ ಜಾತಿ ಗಣತಿ ವರದಿ ನೆನೆಗುದಿಗೆ ಬಿದ್ದಿತ್ತು. ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಸಂಘ ವಿರೋಧಿಸಿದೆ. ಜಾತಿ ಗಣತಿ ವರದಿಯನ್ನು ಪಾರದರ್ಶಕವಾಗಿ ಮಾಡಿಲ್ಲ” ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಂಭಾಪುರಿ ಪೀಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸರ್ಕಾರದ ಮೂಗಿನ ನೇರಕ್ಕೆ ಜಾತಿ ಗಣತಿ ವರದಿ ತಯಾರಾಗಿದೆ. …
Read More »ಹುಬ್ಬಳ್ಳಿಯಲ್ಲಿ ಸೈಕೋಪಾತಕಿಯಿಂದ ಹೇಯ್ ಕೃತ್ಯ, ಐದು ವರ್ಷದ ಬಾಲಕಿ ಸಾವು…. ಅತ್ಯಾಚಾರಕ್ಕೆ ಯತ್ನಿಸಿ ಮಗು ಕೊಲೆ ಮಾಡಿದ ಕಿರಾತಕನ ವಿರುದ್ಧ ಜನಾಕ್ರೋಶ.
ಹುಬ್ಬಳ್ಳಿಯಲ್ಲಿ ಸೈಕೋಪಾತಕಿಯಿಂದ ಹೇಯ್ ಕೃತ್ಯ, ಐದು ವರ್ಷದ ಬಾಲಕಿ ಸಾವು…. ಅತ್ಯಾಚಾರಕ್ಕೆ ಯತ್ನಿಸಿ ಮಗು ಕೊಲೆ ಮಾಡಿದ ಕಿರಾತಕನ ವಿರುದ್ಧ ಜನಾಕ್ರೋಶ. ಐದು ವರ್ಷದ ಮಗುವನ್ನು ಸ್ವೀಟ್ ಕೋಡೋ ಆಸೆ ತೋರಿಸಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಮಗು ಕಿರುಚಾಟದಿಂದ ಭಯ ಬಿದ್ದು ಮಗುವನ್ನೇ ಹತ್ಯೆ ಮಾಡಿರುವ ಹೇಯ್ ಕೃತ್ಯ ಹುಬ್ಬಳ್ಳಿಯಲ್ಲಿಂದು ನಡೆದಿದ್ದು, ಆರೋಪಿಯ ವಿರುದ್ಧ ಹುಬ್ಬಳ್ಳಿಗರು ಠಾಣೆಗೆ ಮತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ …
Read More »ಮನೆ ಬಾಗಿಲಿಗೆ ಬರಲಿದೆ ಮಾವು: ಇಂದೇ ಆರ್ಡರ್ ಮಾಡಿ
ಬೆಂಗಳೂರು, ಏಪ್ರಿಲ್ 12: ಮಾವಿನ (Mango) ಸುಗ್ಗಿ ಪ್ರಾರಂಭವಾಗಿದೆ. ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಬಂದಿದ್ದು, ಅಂಚೆಯಣ್ಣ ಮನೆ ಬಾಗಿಲಿಗೆ ಮಾವು ಹೊತ್ತು ತರಲು ಸಿದ್ಧನಾಗಿದ್ದಾನೆ. ಇನ್ನೇಕೆ ತಡ ಇಂದೇ ಆನ್ಲೈನ್ನಲ್ಲಿ ಬುಕ್ ಮಾಡಿ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಮಾರುಕಟ್ಟೆಗೆ ಹೋಗಿ ಖರೀದಿಸತ್ತೇವೆ. ಇನ್ನೂ ಕೆಲವರು ಆನ್ಲೈನ್ನಲ್ಲಿ ಆರ್ಡರ್ ಮಾಡಿ ಕೊಳ್ಳುತ್ತಾರೆ. ಇದೀಗ ಮಾವಿನ ಹಣ್ಣಿನ ಮಾರುಕಟ್ಟೆಗೆ ಅಂಚೆ ಇಲಾಖೆ (Government of India, Department of Post) ಕಾಲಿಟ್ಟಿದೆ. …
Read More »ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ
ಬೆಳಗಾವಿ, ಏಪ್ರಿಲ್ 13: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ (Ambulance) ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು ಬೆಳಗಾವಿ (Belagavi) ನಗರದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ …
Read More »ಕರ್ನಾಟಕ ರಾಜ್ಯ ಮಾಳಿ – ಮಾಲಗಾರ ಮಹಾಸಭಾ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಜ್ಯೋತಿಬಾ ಫುಲೆಯವರ 198 ಜಯಂತೋತ್ಸವ
ಕರ್ನಾಟಕ ರಾಜ್ಯ ಮಾಳಿ – ಮಾಲಗಾರ ಮಹಾಸಭಾ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಜ್ಯೋತಿಬಾ ಫುಲೆಯವರ 198 ಜಯಂತೋತ್ಸವ ಮತ್ತು ಪ್ರಾದೇಶಿಕ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ. ಈ ವೇಳೆ ತುಮಕೂರಿನ ಶಿವಗಂಗೆಯ ಶ್ರೀ ಮಹಾಲಕ್ಷ್ಮೀ ಮಹಾ ಸಂಸ್ಥಾನ ಪೀಠದ ಜಗದ್ಗುರು ಶ್ರೀ ಜ್ಞಾನನಂದಪುರಿ ಮಹಾಸ್ವಾಮಿಜಿ, ಬಬಲೇಶ್ವರ ತಾಲೂಕಿನ ನಾಗರಾಳ ಗ್ರಾಮದ ಪರಮಾನಂದ ಯೋಗಾಶ್ರಮದ ಶ್ರೀ ಸಿದ್ಧಾರೂಢ ಮಠದ ಪೂಜ್ಯ ಶ್ರೀ ಪ್ರೋ ಭ್ಯ. ಜ್ಞಾನೇಶ್ವರ …
Read More »ಹುಬ್ಬಳ್ಳಿ- ಧಾರವಾಡ ಮಧ್ಯೆ ಮೆಟ್ರೋ ಮಾದರಿ ಸಾರಿಗೆ ಯೋಜನೆ ಒಡಂಬಡಿಕೆ
ಹುಬ್ಬಳ್ಳಿ, ಏಪ್ರಿಲ್ 12: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ-ಭಾದಕಗಳ ಕುರಿತು ಶನಿವಾರ (ಏ.12) ಚರ್ಚೆ ನಡೆದಿದೆ. ಈ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ …
Read More »