Breaking News

Daily Archives: ಏಪ್ರಿಲ್ 14, 2025

ಇದು ಜಾತಿ ಗಣತಿ ಅಲ್ಲ; ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ- ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯ ಸರ್ಕಾರ ಏಪ್ರಿಲ್ 17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕೆಂದಿರುವುದು ಜಾತಿ ಗಣತಿಯ ಕುರಿತಲ್ಲ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ. ಅದರಲ್ಲಿ ಜಾತಿ ಕಾಲಂ‌ ಸೇರಿಸಲಾಗಿದೆ ಅಷ್ಟೇ. ಇದು ಕೂಡ ಸ್ವಾಗತಾರ್ಹ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ವೈಜ್ಞಾನಿಕವಾಗಿದೆ. ಶಿಕ್ಷಕರು ಮನೆ ಮನೆಗೆ ಹೋಗಿ ಗಣತಿ ಮಾಡಿದ್ದಾರೆ. …

Read More »

ಸಿಬಿಐ ಸೋಗಿನಲ್ಲಿ ಬೆದರಿಸಿ 5.80 ಲಕ್ಷ ರೂ. ವಂಚಿಸಿದ ಆರೋಪ: ಶಿಕ್ಷಕನಿಗೆ ಹೈಕೋರ್ಟನಿಂದ​ ಜಾಮೀನು

ಬೆಂಗಳೂರು : ಸಿಬಿಐ ಅಧಿಕಾರಿ ಅಂತಾ ಸುಳ್ಳು ಮಾಹಿತಿ ನೀಡಿ ಕೊರಿಯರ್​ಲ್ಲಿ ಡ್ರಗ್ಸ್​ ತರಿಸಿಕೊಂಡಿದ್ದೀರ ಎಂಬುದಾಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿ 5.80 ಲಕ್ಷ ಹಣ ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡು ಮೂಲದ ಶಿಕ್ಷಕನೊಬ್ಬನಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ತಮಿಳುನಾಡಿನ ತಿರುವರೂರ್‌ ನಿವಾಸಿ ಕೆ.ಅರುವೊಳ್ಳಿ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್​. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರ …

Read More »

ಶಿವರಾಮ್ ಹೆಬ್ಬಾರ್​ ಅವರನ್ನು ನಾವು ಕೈ ಬಿಟ್ಟಿದ್ದೇವೆ: ಆರ್.ಅಶೋಕ್

ಬೆಂಗಳೂರು: ಶಾಸಕ ಶಿವರಾಮ್ ಹೆಬ್ಬಾರ್​​ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್‌ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯನವರು ಟೋಪಿ ಹಾಕಿಕೊಂಡು ಏಕೆ …

Read More »

ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಸಂಸ್ಕಾರ, ಕುಟುಂಬಸ್ಥರ ಆಕ್ರಂದನ

ಹುಬ್ಬಳ್ಳಿ: ಭಾನುವಾರ ಕೊಲೆಯಾದ ಐದು ವರ್ಷದ ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ಇಂದು ನಗರದ ಕೆಎಂಸಿಆರ್​ಐ ಆಸ್ಪತ್ರೆಯಲ್ಲಿ ನಡೆಯಿತು. ಬಳಿಕ ಮೃತದೇಹವನ್ನು ಮಗುವಿನ ಮನೆಗೆ ತೆಗೆದುಕೊಂಡು ಹೋಗಲಾಯಿತು. ಈ ವೇಳೆ, ಕುಟುಂಬಸ್ಥರ ಆಕ್ರಂದನ ಮನ ಕಲಕುವಂತಿತ್ತು. ಬಳಿಕ ದೇವಾಂಗಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್​.ಶಶಿಕುಮಾರ್​ ಪ್ರತಿಕ್ರಿಯಿಸಿ, “ಬಾಲಕಿ ಹಾಗೂ ಆರೋಪಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ‌. ಆರೋಪಿಯ ಹಿನ್ನೆಲೆಯನ್ನು ಪತ್ತೆ ಮಾಡುತ್ತಿದ್ದೇವೆ. ವಿಚಾರಣೆಯ ವೇಳೆ ತಾನು ಬಿಹಾರದ ಪಾಟ್ನಾ …

Read More »

ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳ ಖಂಡಿಸಿ ರಾಜ್ಯ ಲಾರಿ ಮಾಲೀಕರ ಸಂಘ ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ

ಬೆಂಗಳೂರು: ಇಂಧನ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳದ ಆರೋಪದ ವಿರುದ್ಧ ಇಂದು ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ. ಡೀಸೆಲ್ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರು ಏ.14ರವರೆಗೆ ಗಡುವು ನೀಡಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಮುಷ್ಕರಕ್ಕೆ ಮುಂದಾಗಿರುವುದಾಗಿ ರಾಜ್ಯ ಲಾರಿ ಮಾಲೀಕರ …

Read More »

ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಗಲಕೋಟೆ : ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಪಿಯುಸಿ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಅದಕ್ಕಾಗಿ ಮನನೊಂದು ವಿದ್ಯಾರ್ಥಿ ಮಹೇಶ ಬಸಪ್ಪ ತೇಲಿ ಲೋಕಾಪುರದಲ್ಲಿರುವ ಅಕ್ಕ ಸಾವಿತ್ರಿ ಅವರ ಮನೆಯ ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

Read More »

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ: ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ …

Read More »

ಬಾಬಾಸಾಹೇಬರ ಜಯಂತಿ ಹಿನ್ನೆಲೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬಾಬಾಸಾಹೇಬರ ಜಯಂತಿ ಹಿನ್ನೆಲೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಜೈ ಭೀಮ ಗ್ರುಪ್ ಮಾತಾ ರಮಾಬಾಯಿ ಅಂಬೇಡ್ಕರ ಫೌಂಡೇಶನ್’ನ ಕಾರ್ಯ ಭಾರತ ರತ್ನ , ವಿಶ್ವ ಮಾನವ, ಡಾ, ಬಾಬಾಸಾಹೇಬ ಅಂಬೇಡ್ಕರ ಅವರ 134 ನೇ ಜಯಂತಿಯ ಅಂಗವಾಗಿ ಜೈ ಭೀಮ ಗ್ರುಪ್ ಮಾತಾ ರಮಾಬಾಯಿ ಅಂಬೇಡ್ಕರ ಫೌಂಡೇಶನ್ ಬೆಳಗಾವಿ ವತಿಯಿಂದ ಜಿಲ್ಲಾ ಆಸ್ಪತ್ರೆ ಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರರ 134ನೇ …

Read More »

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ : ಎನ್​ಕೌಂಟರ್ ಲೇಡಿ ಸಿಂಗಂ ಹಾಡಿ – ಹೊಗಳುತ್ತಿರುವ ಸಾರ್ವಜನಿಕರು

ಹುಬ್ಬಳ್ಳಿ : ಇಲ್ಲಿನ ಅಶೋಕನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಯತ್ನ ಮಾಡಿ ಬಳಿಕ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪಿಯನ್ನು ಹುಬ್ಬಳ್ಳಿ ಅಶೋಕನಗರ ಮಹಿಳಾ ಪಿಎಸ್‌ಐ ಅನ್ನಪೂರ್ಣಾ ಎನ್‌ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ – ಧಾರವಾಡದ ಮಹಾನಗರದ ಇತಿಹಾಸದಲ್ಲಿ ನಡೆದ ಮೊದಲ ಎನ್‌ಕೌಂಟರ್ ಕೂಡ ಇದಾಗಿದೆ. ಈ ಹಿಂದೆ ಹಲವು ಬಾರಿ ಗೋಲಿಬಾರ್ ಆಗಿವೆ. ರೌಡಿಗಳ ಕಾಲಿಗೆ ಗುಂಡೇಟು ಬಿದ್ದಿವೆ. ಆದರೆ, …

Read More »

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ‘ಮಗುವಿನ ಮುಖ ನೋಡಲು ಆಗುತ್ತಿಲ್ಲ’: ಸಚಿವ ಸಂತೋಷ್​ ಲಾಡ್

ಹುಬ್ಬಳ್ಳಿ(ಧಾರವಾಡ): “5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಇಡೀ ಸಮಾಜ ತಲೆ ತಗ್ಗಿಸುವ ವಿಚಾರ. ಮಗುವಿನ ಮುಖ ನೋಡಲು ಆಗುತ್ತಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್​​ ಶವಾಗಾರಕ್ಕೆ ಭೇಟಿ ನೀಡಿ ಮೃತ ಮಗುವನ್ನು ನೋಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ …

Read More »