Breaking News

Monthly Archives: ಏಪ್ರಿಲ್ 2025

ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ರಾಮನಗರ, ಏಪ್ರಿಲ್​ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್​ಎನ್​ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್‌ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು. ನಡೆದದ್ದೇನು? 2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ …

Read More »

ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ವಿಜಯೇಂದ್ರ

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು. ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ …

Read More »

ಕುಡಿವ ನೀರಿನ ದರ ಹೆಚ್ಚಳದ ಶಾಕ್

ಬೆಂಗಳೂರು: ಬೆಂಗಳೂರು ಜಲ ಮಂಡಳಿ ಅಳೆದೂ ತೂಗಿ ಕೊನೆಗೂ ಕುಡಿಯುವ ನೀರಿನ ದರ ಏರಿಕೆ ಮಾಡಿದೆ. ಹನ್ನೊಂದು ವರ್ಷಗಳ ನಂತರ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು ನಾಳೆ ನೀರಿನ ದರ ಹೆಚ್ಚಳ ಕುರಿತು ಅಧಿಕೃತ ಆದೇಶ ಪ್ರಕಟವಾಗಲಿದೆ. ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆವರೆಗೆ ಹೆಚ್ಚಳ ಮಾಡಲಾಗಿದೆ. ಹೈ-ರೈಸ್ ಗೃಹ ಬಳಕೆದಾರರಿಗೆ ಪ್ರತಿ ಲೀಟರ್​ಗೆ ಕನಿಷ್ಠ 0.30 ಪೈಸೆಯಿಂದ ಗರಿಷ್ಠ 1 ಪೈಸೆ ಪ್ರತಿ …

Read More »

ವೃತ್ತಿಯ ಕೊನೆ ದಿನ ಲಂಚದ ಬೇಡಿಕೆ ಇಟ್ಟ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಆಗಿದ್ದ ಕೃಷ್ಣಪ್ಪ ಅವರು ಬಿಲ್ ಪಾಸ್ ಮಾಡಲು ರೂ.1 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಆಗಿದ್ದರು. ಇವರು ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಎಲ್​ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆಯ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್​ ಬಿಲ್ ಪಾಸ್ ಮಾಡಲು 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. …

Read More »

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ 14 ದಿನಗಳ ಕಾಲ ED ವಶಕ್ಕೆ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ (ಡಿಸಿಸಿ) ನಕಲಿ ಚಿನ್ನಾಭರಣ ಅಡವಿಟ್ಟು 62 ಕೋಟಿ ರೂ ಸಾಲ ಪಡೆದಿದ್ದ ಪ್ರಕರಣದಲ್ಲಿ, ಬ್ಯಾಂಕ್‌ನ ಹಾಲಿ ಅಧ್ಯಕ್ಷ ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿ, 14 ದಿನಗಳವರೆಗೆ ವಶಕ್ಕೆ ಪಡೆದಿದೆ. 2014ರಲ್ಲಿ ಮಂಜುನಾಥ ಗೌಡ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದಾಗ ಈ ಅಕ್ರಮ ಬೆಳಕಿಗೆ ಬಂದಿತ್ತು. ಆಗ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ಮಂಜುನಾಥ ಗೌಡ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. …

Read More »

ಚೆಕ್ ಬೌನ್ಸ್ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಡಬಲ್ ಶಾಕ್

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಎಸಿಜೆಂಎಂ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ ದಂಡ ವಿಧಿಸಿದೆ. ಮತ್ತೊಂದೆಡೆ, ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹಿಂದುಳಿದ ವರ್ಗಗಳ ಇಲಾಖೆ ಮಾಜಿ ಸಚಿವರಾಗಿದ್ದ ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರು ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ ಎಂದು 42ನೇ ಎಸಿಜೆಂಎಂ ನ್ಯಾಯಾಧೀಶರಾದ …

Read More »

ಚಾಲಕನ ನಿಯಂತ್ರಣ ಕಳೆದುಕೊಂಡು ಮನೆ ಮೇಲೆ ಬಿದ್ದ ಸರ್ಕಾರಿ ಬಸ್

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಕಂದಕಕ್ಕೆ ನುಗ್ಗಿ, ಕಂದಕದಲ್ಲಿದ್ದ ಮನೆಯ ಮೇಲ್ಛಾವಣಿ ಮೇಲೆ ಬಿದ್ದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ಇಂದು ನಡೆಯಿತು. ಘಟನೆಯಲ್ಲಿ ಚಾಲಕ ಹಾಗೂ ಕೆಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಸಾಕಷ್ಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 40 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ತುಂತುರು ಮಳೆಯ ನಡುವೆ ಬಸ್, ಚಾಲಕನ ನಿಯಂತ್ರಣ ತಪ್ಪಿದ್ದು, ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು …

Read More »

2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು …

Read More »

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ; ನಕಲಿ ಚಿನ್ನದ ಕೇಸ್​ನಲ್ಲಿ ಶಕ್ಕೆ ಪಡೆದ ED

ಬೆಂಗಳೂರು, (ಏಪ್ರಿಲ್ 09): ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank ) ಹಗರಣ ಪ್ರಕರಣದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ …

Read More »

ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು, ಏಪ್ರಿಲ್​ 09: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ (Valmiki Corporation scam) ಕೇಸ್​ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ …

Read More »