Breaking News

Monthly Archives: ಏಪ್ರಿಲ್ 2025

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ..

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ.. ಸಿ.ಇ.ಟಿ.ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕತ್ತಿರಿಸಿದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದಲ್ಲಿ ಜನಿವಾರ ಧರಿಸುವ ವಿವಿಧ ಸಮಾಜಗಳ‌ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಗರದ ವೆಂಕಟೇಶ್ವರ ಮಂದಿರದಿಂದ ಚಾಲನೆಗೊಂಡು ರ್ಯಾಲಿಯು ಗಾಂಧಿಚೌಕ್, ಹಳೆ ಮುನಸಿಪಾರ್ಟಿ ದಾರಿಯಿಂದ ಕಂಠಿವೃತ್ತದವರೆಗೆ ನಡೆಯಿತು. ಕಂಠಿ ವೃತ್ತದಲ್ಲಿ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು, ಜನಿವಾರ ಕತ್ತರಿಸಿ ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿದ್ದು …

Read More »

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹ

ರಾಯಚೂರು, ಏಪ್ರಿಲ್​ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ …

Read More »

ಬೆಳಗಾವಿ ಕಿತ್ತೂರು ಚನ್ನಮ್ಮ ಮೃಗಾಲಯಕ್ಕೆ ಬಂತು ಹೊಸ ಹೆಣ್ಣುಲಿ

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಮೃಗಾಲಯಕ್ಕೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ …

Read More »

ರಿಕ್ಕಿ ರೈ ಶೂಟ್ ಔಟ್​ ಕೇಸ್​: ಗನ್​ಮ್ಯಾನ್​ ಅರೆಸ್​ ಮಾಡಿದ ಪೊಲೀಸರು

ರಾಮನಗರ: ಭೂಗತ ಲೋಕದ ಮಾಜಿ ಡಾನ್ ದಿ.​ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ: ಭೂಗತ ಲೋಕದ ಮಾಜಿ …

Read More »

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಬೆಳಗಾವಿಯಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿ ಮಹಿಳೆಯರು ವ್ಯಕ್ತವಾಗಲು ವೇದಿಕೆಯನ್ನು ಕಲ್ಪಿಸಿ, ಇಂದು ಮಹಿಳೆಯರು ಮುಖ್ಯವಾಹಿನಿಗೆ ಬರಲು 12ನೇ ಶತಮಾನದಲ್ಲಿ ಶರಣರು ನೀಡಿದ ಅವಕಾಶವೇ ಕಾರಣವೆಂದು ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಹೇಳಿದರು. ಇಂದು ಬೆಳಗಾವಿಯಲ್ಲಿ ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟ ಧಾರಿಣಿ ಹಾಗೂ ಕನ್ನಡ ಭವನದ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿಯನ್ನು ಆಚರಿಸಲಾಯಿತು. …

Read More »

ಚಿಕ್ಕೋಡಿ:ದೂಧಗಂಗಾ ನದಿಗೆ ನೀರು ಬಿಡುಗಡೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕೋಡಿ:ದೂಧಗಂಗಾ ನದಿಗೆ ನೀರು ಬಿಡುಗಡೆ ಆಗ್ರಹಿಸಿ ಪ್ರತಿಭಟನೆ ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದ ಬಳಿ ಸುತ್ತಮುತ್ತಲಿನ ರೈತರು ನೀರಿನ ಸಮಸ್ಯೆ ನೀಗಿಸಲು ರೊಚ್ಚಿಗೆದ್ದು ದೂಧಗಂಗಾ ನದಿಯ ಕಾರದಗಾ-ಭೋಜ ಬ್ಯಾರಜ್‌ಗೆ ನೀರು ತಡೆಯಲು ಬಾಗಿಲು ಹಾಕಿ, ಕಾಳಮಾವಾಡಿ ಜಲಾಶಯದಿಂದ ದೂಧಗಂಗಾ ನದಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಅಲ್ಲದೆ ಅಳವಡಿಸಿದ ಬಾಗಿಲನ್ನು ತಗೆಯಲು ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತದೆ. ವೇದಗಂಗಾ …

Read More »

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತಪಟ್ಟವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತಪಟ್ಟವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಕೃತ್ಯವನ್ನು ಖಂಡಿಸಿ ಗೋವಾ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಶ್ರದ್ಧಾಂಜಲಿ ಸಲ್ಲಿಸಲಾಯಿತು . ಗೋವಾದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ …

Read More »

ಗಣಿ ಮಾಲೀಕನಿಂದ ಪ್ರತಿಭಟನಾಕಾರನ ಮೇಲೆ ಫೈರಿಂಗ್​ ಆರೋಪ

ಚಿಕ್ಕಬಳ್ಳಾಪುರ: ಗಣಿಗಾರಿಕೆ ಮಾಡಲು ರಸ್ತೆ ಮಾಡುವ ವಿಚಾರಕ್ಕೆ ನಡೆದ ಎರಡು ಗುಂಪುಗಳ ಗಲಾಟೆಯಲ್ಲಿ ಗಣಿ ಮಾಲೀಕನು ರೈತನ ಮೇಲೆ ಗುಂಡು ಹಾರಿಸಿರುವ ಆರೋಪ ಕೇಳಿಬಂದಿದೆ. ಪ್ರತಿಭಟನಾಕಾರನ ತೊಡೆ ಭಾಗಕ್ಕೆ ಗುಂಡೇಟು ತಗಲಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಚೇನಹಳ್ಳಿ ತಾಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಇಂದು ಮಧ್ಯಾಹ್ನ 1:30ರ ಸಮಯದಲ್ಲಿ ಗಲಾಟೆ …

Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮೈಸೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳು ಇನ್ನು ನಡೆದಿಲ್ಲ. ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾಶ್ಮೀರದಲ್ಲಿ ಅಮಾಯಕರ ಮೇಲೆ ಉಗ್ರರ ದಾಳಿ ನಡೆಯಬಾರದಿತ್ತು, ನಡೆದಿದೆ. ಇಂತಹ ಕೃತ್ಯಗಳನ್ನ ನಡೆಯದಂತೆ ಹತ್ತಿಕ್ಕುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಯಾವ ಉದ್ದೇಶದಿಂದ ಈ ಕೃತ್ಯ ನಡೆದಿದೆ ಎಂಬುದನ್ನು ತನಿಖೆಯಿಂದ ಗೊತ್ತಾಗಲಿದೆ. ಘಟನೆಗೆ ಯಾರು ಹೊಣೆ ಅಂತ ಹೇಳುವುದಕ್ಕೆ ಆಗಲ್ಲ. ಮುಂದೆ ಇಂಹ ಘಟನೆಗಳು ನಡೆಯದಂತೆ …

Read More »

ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.‌ ತಮ್ಮ ಎಕ್ಸ್​ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿಕೊಂಡಿರುವ ಸಿಎಂ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »