ಬೆಳಗಾವಿ: ಬೆಳಗಾವಿ-ರಾಯಚೂರು ರಾಷ್ಟ್ರೀಯ ಎಕ್ಸ ಪ್ರೆಸ್‌ವೇ ಮುಖಾಂತರ ಹುಬ್ಬಳಿ-ಧಾರವಾಡ, ಬಾಗಲಕೋಟ, ವಿಜಯಪುರ ಹಾಗೂ ರಾಯಚೂರದಿಂದ ಬರುವ ಜನರಿಗೆ ವಿಮಾನ ನಿಲ್ದಾಣಕ್ಕೆ ನೇರವಾಗಿ ಹೊಗಲು ಸುಮಾರು 4 ಕಿ.ಮೀ ಬೈಪಾಸ್ ರಸ್ತೆಯನ್ನು ನಿರ್ಮಿಸುವ ಸಲುವಾಗಿ ಯೋಜನೆಯಲ್ಲಿ ಬದಲಾವಣೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದ್ದಾರೆ. ಬುಧವಾರ ನಗರದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು …
Read More »Daily Archives: ಮೇ 8, 2025
ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ, ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್
ಬೆಂಗಳೂರು: “ಪಹಲ್ಗಾಮ್ ದಾಳಿಯಲ್ಲಿ ಅಮಾಯಕರನ್ನು ಕೊಂದ ಪಾಕಿಸ್ತಾನದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ” ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, “ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ …
Read More »ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ
ರಾಯಚೂರು: “ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ” ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕಲಬುರಗಿ ವಿಭಾಗ ಮಟ್ಟದ ಪ್ರತಿಭಟನಾ ಸಮಾವೇಶವನ್ನು ಕಾಂಗ್ರೆಸ್ ಆಯೋಜಿಸಿತ್ತು. ಆದರೆ ಪಹಲ್ಗಾಮ್‌ನಲ್ಲಿ ದಾಳಿಗೆ ಪ್ರತ್ಯುತ್ತರವಾಗಿ ನಮ್ಮ ಸೈನಿಕರು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ನಾವು ಕೇಂದ್ರ …
Read More »ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸರ್ಕಾರ ಅಸ್ತು: ಸಚಿವ ಪ್ರಲ್ಹಾದ್ ಜೋಶಿ
ನವದೆಹಲಿ/ಹುಬ್ಬಳ್ಳಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ ₹11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಧಾರವಾಡ ಐಐಟಿ, ಆಂಧ್ರಪ್ರದೇಶದ …
Read More »ಬೆಣ್ಣೆ ನಗರಿಯಲ್ಲಿ ಇತ್ತೀಚಿಗೆ ನಡೆದಿದ್ದ ರೌಡಿಶೀಟರ್ ಕಣುಮಾ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ.
ದಾವಣಗೆರೆ: ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯ ಪ್ರಮುಖ ಆರೋಪಿ ಚಾವಳಿ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬುಧವಾರ ಸ್ಥಳ ಮಹಜರ್ ವೇಳೆ ಬಾಲ ಬಿಚ್ಚಿದ್ದ ಚಾವಳಿ ಸಂತೋಷ್ ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ನಗರದ ಆವರಗೆರೆ ಹೈಸ್ಕೂಲ್ ಬಳಿ ಈ ಘಟನೆ ನಡೆದಿದೆ. ಕಣುಮಾ ಸಂತೋಷ್ ನ ಮರ್ಡರ್ ಮಾಡಲು ಉಪಯೋಗಿಸಿದ್ದ ಮೊಬೈಲ್ ನ್ನು ಆವರಗೆರೆ ಬಳಿಯ ಪ್ರದೇಶವೊಂದರ ಬಳಿ ಆರೋಪಿಗಳು ಎಸೆದು ಪರಾರಿ ಆಗಿದ್ದರು. ಸಿಟಿ …
Read More »
Laxmi News 24×7