Breaking News

Daily Archives: ಮೇ 19, 2025

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್

ನವದೆಹಲಿ, (ಮೇ 19): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​  (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ (supreme court)​ ತಡೆಯಾಜ್ಞೆ ನೀಡಿದೆ.  ಬೆಳಗಾವಿ ಅಧಿವೇಶನದ (Belagavi Session) ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ …

Read More »

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ

ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್​​ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ವೈಟ್ ಫೀಲ್ಡ್​​ …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರ ವಾಗ್ದಾಳಿ: ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಪೊಸ್ಟರ್ ಬಿಡುಗಡೆ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಕೆ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ ಎಂಬ ಬರಹದ ಪೋಸ್ಟರ್ ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಿದ ಬಿಜೆಪಿ ಮುಖಂಡರು …

Read More »

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ 125 ಸೈನಿಕರು ದೇಶ ಸೇವೆ ಸಲ್ಲಿಸುತ್ತಿದ್ದಾರೆ.

ಹಾವೇರಿ: ಸವಣೂರು ತಾಲೂಕಿನ ಕಲಿವಾಳ ಗ್ರಾಮ ಜಿಲ್ಲೆಯ ಚಿಕ್ಕಗ್ರಾಮಗಳಲ್ಲಿ ಒಂದು. ಸುಮಾರು 400 ಮನೆಗಳಿರುವ ಈ ಗ್ರಾಮವೀಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸೈನಿಕರನ್ನು ಸೇನೆಗೆ ನೀಡಿದ ಖ್ಯಾತಿ ಗಳಿಸಿದೆ. ಕಲಿವಾಳದಲ್ಲಿನ ಸುಮಾರು 125 ಸೈನಿಕರು ದೇಶ ಸೇವೆ ಮಾಡುತ್ತಿದ್ದಾರೆ. 20ಕ್ಕೂ ಅಧಿಕ ಜನ ನಿವೃತ್ತರಾಗಿದ್ದು ಪೊಲೀಸ್, ರೈಲು, ಬ್ಯಾಂಕ್ ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವು ಮಾಜಿ ಯೋಧರು ಸರ್ಕಾರಿ ಕೆಲಸ ಪಡೆದಿದ್ದಾರೆ. ಭೂಸೇನೆ, ನೌಕಾದಳ, ವಾಯುದಳದಲ್ಲಿ ಗ್ರಾಮದ ಯುವಕರು ಕಾರ್ಯ …

Read More »

ಬ್ಲ್ಯಾಕ್​ಔಟ್ ಅಣಕು ಪ್ರದರ್ಶನ: ಬೆಳಗಾವಿಯಲ್ಲಿ ಆವರಿಸಿದ ಕಗ್ಗತ್ತಲು

ಬೆಳಗಾವಿ: ದೇಶದ ವಿವಿಧೆಡೆ ಯುದ್ಧ ಮತ್ತು ತುರ್ತು ಪರಿಸ್ಥಿತಿ ಎದುರಿಸಲು ಬ್ಲ್ಯಾಕ್​ಔಟ್​ ಅಣಕು ಪ್ರದರ್ಶನ ನಡೆಸಲಾಗುತ್ತಿದ್ದು, ಬೆಳಗಾವಿ ನಗರದಲ್ಲೂ ಭಾನುವಾರ ಸಂಜೆ ಹಮ್ಮಿಕೊಳ್ಳಲಾಗಿತ್ತು. ನಗರದ ಎರಡು ಪ್ರದೇಶಗಳಲ್ಲಿ 15 ನಿಮಿಷಗಳ ಸಂಪೂರ್ಣ ಕಗ್ಗತ್ತಲು ಆವರಿಸಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ಬೆಳಗಾವಿ ಜಿಲ್ಲಾಡಳಿತ, ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಪಾಲಿಕೆ ಆಯುಕ್ತೆ ಶುಭಾ ಬಿ. ನೇತೃತ್ವದಲ್ಲಿ ಹನುಮಾನ ನಗರ, ಕುವೆಂಪು ನಗರದಲ್ಲಿ ಬ್ಲ್ಯಾಕ್​ಔಟ್ ಅಣಕು ಪ್ರದರ್ಶನ ಏರ್ಪಡಿಸಲಾಗಿತ್ತು. ಐದು ಸೈರನ್ ಮೊಳಗುತ್ತಿದ್ದಂತೆ …

Read More »

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್​

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ವೇತಾ ಪೂಜಾರಿ ಮೇ 8ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ‌ ಪೋಸ್ಟ್ ಮಾಡಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ …

Read More »

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರೈಲ್ವೆಯ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ

ಮೈಸೂರು: ನಗರದ ಕೇಂದ್ರೀಯ ರೈಲ್ವೆ ವರ್ಕ್‌ಶಾಪ್‌ನಲ್ಲಿನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವರ್ಕ್‌ಶಾಪ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಸೀನಿಯರ್ ಸೆಕ್ಷನ್ ಇಂಜಿನಿಯರ್​ಗಳು ಹಾಗೂ ಓರ್ವ ಮಹಿಳಾ ಅಧಿಕಾರಿಯ ವಿರುದ್ದ ಅಶೋಕಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ವಿವರ: ಕೆಲಸದ ವೇಳೆ ಇಂಜಿನಿಯರ್​ವೊಬ್ಬರು ಲೈಂಗಿಕ ಪದ ಬಳಸಿ ಮಾತನಾಡುವುದು, ಲೈಂಗಿಕ …

Read More »