Breaking News

Daily Archives: ಜೂನ್ 15, 2025

ನೀನು ಬೆಂಗಳೂರು ಉಸ್ತುವಾರಿ ಮಂತ್ರಿ, ಇಲ್ಲಿನ ನಿನ್ನ ಸಿಂಗಾಪುರ ಮಳೆಗೆ ಕೊಚ್ಚಿಹೋಗುತ್ತಿದೆ: ಕೇಂದ್ರ ಸಚಿವ ಹೆಚ್ ಡಿಕೆ

ಬೆಂಗಳೂರು: ನೀನು ಬೆಂಗಳೂರು ಉಸ್ತುವಾರಿ ಮಂತ್ರಿ. ಇಲ್ಲಿನ ನಿನ್ನ ಸಿಂಗಾಪುರ ಮಳೆ ಬಂದರೆ ಕೊಚ್ಚಿ ಹೋಗುತ್ತಿದೆ. ‌ಮೊದಲು ಇಲ್ಲಿ ಅಭಿವೃದ್ಧಿ ಮಾಡು. ಆಮೇಲೆ ಮಿಕ್ಕಿದ್ದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಟ್ಟರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ‘ಜನರೊಂದಿಗೆ ಜನತಾದಳ’ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ …

Read More »

ಜೈಲಿನಿಂದ ಬಿಡುಗಡೆಯಾದ ದಿನವೇ ಹತ್ಯೆ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದವನನ್ನು ಮಾತುಕತೆಗೆಂದು ಕರೆಸಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಜೆ.ಜೆ‌. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ದೀಪು (28) ಹಾಗೂ ಅರುಣ್ (27) ಎಂಬ ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ. ಶನಿವಾರ ರಾತ್ರಿ ಜೆ. ಜೆ. ನಗರದ ಜನತಾ ಕಾಲೋನಿಯಲ್ಲಿ ವಿಜಯ್ (26) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಆರೋಪಿಗಳು ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ …

Read More »

ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ,

ಕುಮಾರಸ್ವಾಮಿ ವಿರುದ್ಧದ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ, ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ …

Read More »

ನಗರದಲ್ಲಿ ಅಲೆದಾಡುತ್ತಿದ್ದ ಮಾನಸಿಕ ಅಸ್ವಸ್ಥೆಯನ್ನು ತಾಯಿ ಮಡಿಲಿಗೆ ಸೇರಿಸಿದ ಸಾಮಾಜಿಕ ಕಾರ್ಯಕರ್ತ

ಹಾವೇರಿ: ನಗರದಲ್ಲಿ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥ ಯುವತಿಯನ್ನು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖಾದರ್ ತಾಯಿಯ ಮಡಿಲಿಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದಾವಣಗೆರೆ ಮೂಲದ ಯುವತಿ ಮುಮ್ತಾಜ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ನಾಲ್ಕೈದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಮುಮ್ತಾಜ್ ಗುರುವಾರ ಹಾವೇರಿ ನಗರದಲ್ಲಿ ಅಲೆದಾಡುತ್ತಿದ್ದನ್ನು ಕಂಡ ಸ್ಥಳೀಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖಾದರ್​ಗೆ ಮಾಹಿತಿ ನೀಡಿದ್ದರು. ನಂತರ ಖಾದರ್, ಮಾನಸಿಕ ಅಸ್ವಸ್ಥ ಯುವತಿಯನ್ನು​ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ, ವೈದ್ಯರಿಗೆ ತೋರಿಸಿದ್ದರು. …

Read More »

ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು, ಜೂನ್​ 15: ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ (Rain) ಮುಂದುವರೆದಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ (Sringeri to Mangaluru) ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸೂಚನೆ ನೀಡಿದ್ದಾರೆ. ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್ ಧಾರಾಕಾರವಾಗಿ ಸುರಿಯುತ್ತಿರುವ …

Read More »

ಅಜ್ಜಿ ತಿಥಿ ಕಾರ್ಯಕ್ಕೆ ಹೋಗಿದ್ದವರ ಮನೆಯಲ್ಲಿ ಕಳ್ಳತನ

ಆನೇಕಲ್, ಜೂನ್​ 15: ಅಜ್ಜಿಯ ತಿಥಿ ಕಾರ್ಯಕ್ಕೆ ಹೋದವರಿಗೆ ಕಳ್ಳರು ಶಾಕ್ ನೀಡಿದ್ದಾರೆ. ಅತ್ತ ಹಳೆ ಮನೆಯಲ್ಲಿ ಮನೆ ಮಂದಿಯಲ್ಲ ಸೇರಿ ಅಜ್ಜಿಯ ತಿಥಿ ಕಾರ್ಯ ಮಾಡುತ್ತಿದ್ದರೇ, ಇತ್ತ ಕಳ್ಳರು ಮಾತ್ರ ಹೊಸ ಮನೆಯಲ್ಲಿದ್ದ 240 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲೂಕಿನ ಆಡೆಸೊಣ್ಣಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೇ 2ನೇ ತಾರೀಖು ರಾತ್ರಿ ಪ್ರೇಮಾ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ …

Read More »

ನರೇಗಾದಲ್ಲಿ ಶಾಲಾ ಮೈದಾನ ನಿರ್ಮಾಣ, ವಿದ್ಯಾರ್ಥಿಗಳೇ ಕಾರ್ಮಿಕರು!

ವಿಜಯಪುರ, (ಜೂನ್ 14): ವಿಜಯಪುರ (Vijayapura) ಜಿಲ್ಲೆ ಕ್ಯಾಡಗಿ ಗ್ರಾಮ ಪಂಚಾಯತಿಯಲ್ಲಿ (kyadgi Gram panchayat) ನರೇಗಾ (nrega) ಯೋಜನೆಯಲ್ಲಿ ಬಾರೀ ಗೋಲ್ಮಾಲ್ ನಡೆದಿದ್ದು, ಶಾಲಾ ಮಕ್ಕಳನ್ನೇ ಕಾರ್ಮಿಕರು ಎಂದು ದಾಖಾತಿಗಳಲ್ಲಿ ಫೋಟೋ ಅಪ್ಲೋಡ್ ಮಾಡಲಾಗಿದೆ. ಹೌದು.. ಎನ್ ಎನ್ ಎಂ ಎಸ್ ತಂತ್ರಾಂಶದಲ್ಲಿ ಶಾಲಾ ಮೈದಾನ ನಿರ್ಮಾಣ ಕಾಮಗಾರಿ ಫೋಟೋ ಅಪ್ ಲೋಡ್ ಮಾಡಲಾಗಿದ್ದು, ಇದರಲ್ಲಿ ಮಕ್ಕಳ ಫೋಟೋಗಳು ಇವೆ. ಮಕ್ಕಳೇ ಕಾರ್ಮಿಕರೆಂದು ಬಿಂಬಿಸಿ ಕ್ಯಾಡಗಿ ಗ್ರಾಮ ಪಂಚಾಯತಿ ಪಿಡಿಓ ಬಿಲ್ ಪಾವತಿಸಿದ್ದಾರೆ. ಇದರ ಜೊತೆ ಇತರೆ ಬೇರೆ …

Read More »

ಗುಮ್ಮಟನಗರಿ ಹುಡುಗ ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್

ವಿಜಯಪುರ, ಜೂನ್​ 15: ವಿಜಯಪುರ (Vijayapura) ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ. ಎಷ್ಟೇ ಹಿಂದುಳಿದಿದ್ದರೂ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಶನಿವಾರ ಪ್ರಕಟಗೊಂಡ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ (NEET UG Result) ಜಿಲ್ಲೆಯ ವಿದ್ಯಾರ್ಥಿ ಕರ್ನಾಟಕಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ. ನಗರದ ವೈದ್ಯ ದಂಪತಿಯ ಪುತ್ರ ನಿಖಿಲ್ ಸೊನ್ನದ ನೀಟ್​ ಪರೀಕ್ಷೆಯಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 720 ಕ್ಕೆ 670 ಅಂಕ ವಿಜಯಪುರ ನಗರದ ವೈದ್ಯ ದಂಪತಿ …

Read More »

ಪ್ರೀತಿ ಕೊಂದ ಕೊಲೆಗಾರ 6 ತಿಂಗಳ ಬಳಿಕ ಸಿಕ್ಕಿಬಿದ್ದ: ಹಂತಕನ ಹೆಡೆಮುರಿ ಕಟ್ಟಿದ್ದೇ ರೋಚಕ

ಗದಗ, (ಜೂನ್ 15): ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು ದಿನ ಕುಟುಂಬಸ್ಥರ ಕಣ್ತಪ್ಪಿಸಿ ಇಬ್ಬರು ಹಳ್ಳಿ ಗ್ರಾಮದ ಹೊರಹೊಲದಲ್ಲಿ ಭೇಟಿಯಾಗಿದ್ದು, ಈ ವೇಳೆ ಮಧುಶ್ರೀ ತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಬಳಿಕ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸತೀಶ್, ವೇಲ್​ ನಿಂದ …

Read More »

ಕಾಂತಾರ ಶೂಟಿಂಗ್​ ವೇಳೆ ಶಿಪ್​ ಪಲ್ಟಿ

ಶಿವಮೊಗ್ಗ: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ʼಕಾಂತಾರ-1ʼ ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ಶಿಪ್​ ಮಗುಚಿದ ಘಟನೆ‌ ಬಗ್ಗೆ ಹೊಂಬಾಳೆ ಫಿಲ್ಮ್ಸ್ ‌ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್‌ ಸ್ಪಷ್ಟನೆ ನೀಡಿದ್ದಾರೆ. “ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್‌ ಡ್ರಾಪ್​ಗೋಸ್ಕರ ಶಿಪ್​​ ಸೆಟ್‌ನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್​ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಕೂಡ ಅದರ ಸುತ್ತಮುತ್ತ ಇರಲಿಲ್ಲ. ನಮ್ಮ ಶೂಟಿಂಗ್‌ ದೂರದಲ್ಲಿ ನಡೆಯುತ್ತಿತ್ತು. …

Read More »