Breaking News

Daily Archives: ಜುಲೈ 1, 2025

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

ಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ 40 ದಿನಗಳ ಅಂತರದಲ್ಲಿ ಬರೋಬ್ಬರಿ 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವಿಗೀಡಾಗುವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿಯವರು ತಜ್ಞರ ಸಮಿತಿ ರಚಿಸಿದ್ದು, ಸರಣಿ ಸಾವುಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಡಿಸಿ ಲತಾ ಕುಮಾರಿ ಮಾತನಾಡಿ, ಚಿಕ್ಕ …

Read More »

ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (

ಬೆಂಗಳೂರು, ಜುಲೈ 1: ‘ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (BR Patil) ಆಡಿದ್ದ ಅಬ್ಬರದ ಮಾತು ಕಾಂಗ್ರೆಸ್ (Congress) ಮನೆಯನ್ನನ್ನು ನಡುಗಿಸಿತ್ತು. ಸರ್ಕಾರವನ್ನು ಅಲುಗಾಡಿಸಿತ್ತು. ವಸತಿ ಯೋಜನೆಯಲ್ಲಿ ಮನೆ ನೀಡಲು ಲಂಚ ಪಡೆಯಲಾಗುತ್ತಿದೆ ಎಂಬ ಬಿಆರ್ ಪಾಟೀಲ್ ಆರೋಪದಿಂದ ಶುರುವಾದ ಅಸಮಾಧಾನದ ಜ್ವಾಲೆ ಕೈಪಡೆಯನ್ನು ಬಡಿದೆಬ್ಬಿಸಿತ್ತು. ಬಿಆರ್ ಪಾಟೀಲ್ ಬೆನ್ನಲ್ಲೇ ಶಾಸಕರಾದ ರಾಜುಕಾಗೆ, ಬೇಳೂರು ಗೋಪಾಲಕೃಷ್ಣ, ವೈ.ಎನ್ ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದ್ದರು. ಶಾಸಕರ ಈ ಸಿಟ್ಟು ಯಾರನ್ನು ಎಚ್ಚರಿಸಿದೆಯೋ ಬಿಟ್ಟಿದೆಯೋ, …

Read More »

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. …

Read More »

ಮಾಧ್ಯಮಗಳಿಗೆ ಹೇಳಿದ್ದನ್ನೇ ಸುರ್ಜೇವಾಲಾಗೆ ಹೇಳುತ್ತೇನೆ:ರಾಜು ಕಾಗೆ

ಬೆಂಗಳೂರು, ಜುಲೈ 1: ಬೆಳಗಾವಿ ಜಿಲ್ಲೆ ಕಾಗ್ವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಾಜು ಕಾಗೆ (ಭರಮಗೌಡ ಆಲಗೌಡ ಕಾಗೆ) ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನೇರ ಮಾತುಗಾರಿಕೆಗೆ ಹೆಸರಾಗಿರುವ ರಾಜು ಕಾಗೆ, ನಮ್ಮ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ನಿನ್ನೆ ಜರೂರು ಸಭೆಯೊಂದರ ನಿಮಿತ್ತ ಬೆಂಗಳೂರುಗೆ ಬರಲಾಗಲಿಲ್ಲ, ಇವತ್ತು ಭೇಟಿಯಾಗುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದೆ ಎಂದರು. ಮೊನ್ನೆ ಮಾಧ್ಯಮಗಳ ಮುಂದೆ ಆಡಿರುವ …

Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ …

Read More »

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

ಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಪ್ರತಿ ಘಟಕಕ್ಕೂ 11 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಈ ಘಟಕಗಳಲ್ಲಿ ಐದು ರೂಪಾಯಿ ನೀಡಿದರೆ 20 ಲೀಟರ್ ಶುದ್ಧ ಕುಡಿಯುವ‌ ನೀರು ಸಿಗುವ ಸೌಲಭ್ಯ ಕಲ್ಪಿಸಲಾಗಿದೆ‌. ಆದರೆ, ಆರು ಘಟಕಗಳಲ್ಲಿ ಕೇವಲ ನಾಲ್ಕು ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಎರಡು ಘಟಕಗಳ ಕಾಮಗಾರಿ ಪೂರ್ಣಗೊಂಡರೂ ಸಹ …

Read More »

ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಅಮಾಯಕನಿಗೆ ಶಿಕ್ಷೆ: ಮೂವರು ಇನ್ಸ್​ಪೆಕ್ಟರ್​ಗಳು ಸಸ್ಪೆಂಡ್​

ಮೈಸೂರು: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್​ಪೆಕ್ಟರ್​ಗಳನ್ನು ಅಮಾನತು ಮಾಡಲಾಗಿದೆ. ಕುಶಾಲನಗರ ಸರ್ಕಲ್ ಇನ್ಸ್​ಪೆಕ್ಟರ್​ ಬಿ.ಜಿ.ಪ್ರಕಾಶ್, ಇಲವಾಲ ಇನ್ಸ್​ಪೆಕ್ಟರ್​ ಮಹೇಶ್‌ ಕುಮಾರ್ ಹಾಗೂ ಜಯಪುರ ಠಾಣೆ ಇನ್ಸ್​ಪೆಕ್ಟರ್​ ಪ್ರಕಾಶ್ ಎತ್ತಿನಮನೆ ಅಮಾನತಾದವರು. ಏನಿದು ಪ್ರಕರಣ?: ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಸುರೇಶ್​ ಅಲಿಯಾಸ್ ಕುರುಬರ ಸುರೇಶ್ ಎಂಬವರ ವಿರುದ್ಧ ಪತ್ನಿಯನ್ನು ಕೊಲೆ ಮಾಡಿದ ಆರೋಪದ …

Read More »

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಪ್ರಲ್ಹಾದ್ ‌ಜೋಶಿ‌‌

ಹುಬ್ಬಳ್ಳಿ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಶೀಘ್ರದಲ್ಲೇ ಆಯ್ಕೆ ನಡೆಯಲಿದೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎನ್ನುವ ಪ್ರಶ್ನೆ ‌ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌‌ ಹೇಳಿದರು. ನಗರದಲ್ಲಿಂದು ನೂತನ ‌ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನೂತನ ಮೇಯರ್, ಉಪ ಮೇಯರ್​​ಗೆ ಅಭಿನಂದಿಸಿ, ಹುಬ್ಬಳ್ಳಿ-ಧಾರವಾಡ ಅವಳಿ‌ ನಗರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಬಳಿಕ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, …

Read More »

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

ಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಾನೂನು ರೀತ್ಯಾ ಕ್ರಮ ಆಗುತ್ತಿದೆ. ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ಕಾಡುಗೋಡಿ ಪ್ಲಾಂಟೇಷನ್​ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ …

Read More »

ಖಾಲಿ ಗ್ಯಾಸ್ ಸಿಲಿಂಡರ್ ದಾಸ್ತಾನು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 409 ಗ್ಯಾಸ್​ ಸಿಲಿಂಡರ್​ಗಳನ್ನು ಜಪ್ತಿ ಮಾಡಿದ್ದಾರೆ.

ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಸಿಲಿಂಡರ್ ಅಡ್ಡೆಯ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಖಾಲಿ ಗ್ಯಾಸ್ ಸಿಲಿಂಡರ್​​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರವಾರ ರಸ್ತೆಯ ಕೆಂಪಗೇರಿ ಹತ್ತಿರದ ಗೋಡೌನ್​​ನಲ್ಲಿ ಅಕ್ರಮವಾಗಿ ಕರ್ಮಷಿಯಲ್ ಖಾಲಿ ಸಿಲಿಂಡರ್ ಸಂಗ್ರಹ ಮಾಡಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಜಂಟಿಯಾಗಿ …

Read More »