ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು ಗುರಿಯಾಗಿಸಿ ಅಪಘಾತವೆಸಗಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಶಾಂತಿನಗರದ ಭಂಗಿಯಪ್ಪ ಗಾರ್ಡನ್ ನಿವಾಸಿ ಚಂದ್ರಶೇಖರ್ (78 ವರ್ಷ) ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿ ಜಮೀಲ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …
Read More »Daily Archives: ಜುಲೈ 1, 2025
ಮೈಸೂರು ದಸರಾ 2025: ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭ
ಮೈಸೂರು: ಈ ಬಾರಿ ಸಂಭ್ರಮ ಹಾಗೂ ಅದ್ಧೂರಿ ದಸರಾ ಆಚರಿಸಲು ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಎಂಟು ಆನೆ ಶಿಬಿರಗಳಿಗೆ ಭೇಟಿ ನೀಡಿ ಸುಮಾರು 25 ಗಂಡು ಮತ್ತು ಹೆಣ್ಣು ಆನೆಗಳ ಆರೋಗ್ಯ ಪರಿಶೀಲನೆ ನಡೆಸಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯೇ ಗಜಪಡೆ. ಈ ಗಜಪಡೆಯ ಪ್ರಮುಖ ಕೇಂದ್ರಬಿಂದುವಾಗಿ ಇಟ್ಟುಕೊಂಡು ನಡೆಯುವುದು ಮೈಸೂರು ದಸರಾದ ಜಂಬೂಸವಾರಿ. ಇಂತಹ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳನ್ನು ಆಯ್ಕೆ …
Read More »5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.
ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ವಲಯ ಅರಣ್ಯಾಧಿಕಾರಿ ಮಾದೇಶ್ ಅವರಿಗೆ ಮುಂದಿನ ಆದೇಶದ ತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ. ಐದು ಹುಲಿಗಳು ರಸ್ತೆಯಿಂದ ಕೇವಲ …
Read More »ಆರ್ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ
ಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ ಮಾಡುತ್ತಿದ್ದವರ ಮೇಲೆ ಸೋಮವಾರ ನಗರದ 11 ಆರ್ಟಿಒ ಕಚೇರಿಯ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರ ನಿಗದಿಗೊಳಿಸಿದ ಕನಿಷ್ಠ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಆಧರಿಸಿ ಇಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು …
Read More »ದೂಧ್‌ಸಾಗರ್ ಜಲಪಾತದ ಸೂಕ್ಷ್ಮ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ: 21 ಪ್ರವಾಸಿಗರ ಬಂಧನ, ಬಿಡುಗಡೆ
ಹುಬ್ಬಳ್ಳಿ: ಕರ್ನಾಟಕದ ಗಡಿಭಾಗದ ಸಮೀಪವಿರುವ ಗೋವಾ ರಾಜ್ಯದ ದೂಧ್‌ಸಾಗರ್ ಜಲಪಾತ ಈಗ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯತ್ತಿದೆ. ಅದ್ರೆ ಪ್ರವಾಸಕ್ಕೆ ಹೋದವರು ಅಲ್ಲಿನ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಮಳೆಗಾಲದ ಸಂದರ್ಭದಲ್ಲಿ ದೂಧ್‌ಸಾಗರ್ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತದೆ. ಆದ್ರೆ ಕ್ಯಾಸಲ್‌ರಾಕ್-ದೂಧ್‌ಸಾಗರ್ ಅತ್ಯಂತ ಸೂಕ್ಷ್ಮ ಹಾಗೂ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸುರಂಗಗಳು, ಕಡಿದಾದ ಕಂದರಗಳು ಮತ್ತು ಕಾಡು ಪ್ರಾಣಿಗಳ ಅಪಾಯದಿಂದಾಗಿ ಚಾರಣ ನಿಷೇಧಿಸಲಾಗಿದೆ. ಕ್ಯಾಸಲ್‌ರಾಕ್‌ನ ರೈಲ್ವೆ …
Read More »KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ
ಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ …
Read More »