Breaking News

Daily Archives: ಜುಲೈ 2, 2025

ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ರಾಜೀನಾಮೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗೆ ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಭರಮನಿ ಅವರು ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಧಾರವಾಡ: ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರು ಸ್ವಯಂ ಘೋಷಿತ …

Read More »

ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆ, 6 ದಿನ ಕಳೆದರೂ ಸಿಗದ ಸುಳಿವು

ಚಿಕ್ಕಮಗಳೂರು, ಜುಲೈ 02: ಜಿಲ್ಲೆಯ ಕಡೂರು (Kadur) ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ (forest guard) ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್ ಮತ್ತು ಅರಣ್ಯದಲ್ಲಿ ಹುಡುಕಾಟ ನಡೆಸಿದರೂ ಕಳೆದ 6 ದಿನಗಳಿಂದ ಗಾರ್ಡ್ ಸುಳಿವು ಮಾತ್ರ ಸಿಗುತ್ತಿಲ್ಲ. ಆರು ತಿಂಗಳ ಹಿಂದಷ್ಟೇ ವರ್ಗಾವಣೆ ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಕಾಲೂರು ಗ್ರಾಮದ ‌33 ವರ್ಷದ ಫಾರೆಸ್ಟ್ ಗಾರ್ಡ್ …

Read More »

ತರಂಗಿಣಿ’ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ವಿಶೇಷ ಚೇತನರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಆಯ್ದ 200 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ‘ಅಲೆಕ್ಸಾ’ ಸಹಾಯಕ ಸಾಧನವನ್ನು ವಿತರಿಸುವ ‘ತರಂಗಿಣಿ’ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ಸ್ಟೇಟ್ ಸ್ಟ್ರೀಟ್ ಕಂಪನಿಯ ಸಿ.ಎಸ್.ಆರ್ ಅನುದಾನದೊಂದಿಗೆ ಯುನೈಟೆಡ್‌ ವೇ ಬೆಂಗಳೂರು (ಯುಡಬ್ಲ್ಯೂಬಿಇ) ಸಂಸ್ಥೆಯ ಸಹಯೋಗದಲ್ಲಿ …

Read More »

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಹಸು ಮೇಯಿಸಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ. ಜಿಲ್ಲೆಯ ಗುಂಡಿಬಂಡೆ ತಾಲೂಕಿನ ವರ್ಲಕೊಂಡ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ನಡುವೆ ನಿನ್ನೆ ಬೆಳಗ್ಗೆ ಚಿರತೆ ದಾಳಿಯ ಆತಂಕದಲ್ಲಿಯೇ ಕರೇನಹಳ್ಳಿಯ ರೈತ ರಾಮಕೃಷ್ಣಪ್ಪ ಹಸು ಮೇಯಿಸಲು ವರ್ಲಕೊಂಡ ಬೆಟ್ಟದ ಕಡೆ ಹೋಗಿದ್ದರು. ಈ ವೇಳೆ ಚೊಕ್ಕನಹಳ್ಳಿಯ ಕೆರೆ …

Read More »

ರೈಲ್ವೆ ಟಿಕೆಟ್ ದರ ಏರಿಕೆ ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ‌ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು …

Read More »

ಹಾರ್ಟ್​ ಅಟ್ಯಾಕ್ ಭಯದಿಂದಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಹಾರ್ಟ್ ಅಟ್ಯಾಕ್ ಭಯ : ತಪಾಸಣೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಯುವಕರ ಲಗ್ಗೆ ಮೈಸೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವಜನರೇ ಸಾಯುತ್ತಿರುವ ಘಟನೆಗಳಿಂದ ಭಯಭೀತರಾದ ಹಾಸನ, ಮಂಡ್ಯ ಹಾಗೂ ಮೈಸೂರಿನ ಜನರು ತಪಾಸಣೆಗಾಗಿ ಜಿಲ್ಲೆಯ ಸರ್ಕಾರಿ ಜಯದೇವ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಅದರಲ್ಲಿಯೂ ಈ ಮಧ್ಯೆ ತಪಾಸಣೆಗೆ ಹೆಚ್ಚಾಗಿ ಯುವಕರೇ ಬರುತ್ತಿರುವುದು ಹೃದಯಾಘಾತದ ಭಯ ಹೆಚ್ಚಿದಂತೆ ಕಂಡು ಬರುತ್ತಿದೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಹಳೆ ಮೈಸೂರು ಭಾಗದ ಹೃದ್ರೋಗಿಗಳಿಗೆ ಪರಿಚಿತವಾದ …

Read More »

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ‌.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …

Read More »

ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಉಂಡ ಮನೆಗೆ ದ್ರೋಹ ಎಂಬಂತೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್​ಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಿಂದ ಬೆಟ್ಟಿಂಗ್ ಆಡುತ್ತಿದ್ದ ಮಾಜಿ ನೌಕರನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ಮಂಗಳೂರು ಮೂಲದ ಸುಬ್ರಹ್ಮಣ್ಯ ಪ್ರಸಾದ್ (34) ಬಂಧಿತ ಆರೋಪಿ. ಆರೋಪಿಯಿಂದ 19 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್​ಗಳು, 5 ಐಫೋನ್​ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ 2ನೇ …

Read More »