Breaking News

Daily Archives: ಜುಲೈ 5, 2025

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

ಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ (ಎಫ್ ಸಿಐ)ಗೆ ವಹಿಸುವುದು ಸೂಕ್ತ ಎಂದು ಭಾರತೀಯ ಆಹಾರ ನಿಗಮ (ಎಫ್​​ಸಿಐ) ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಪ್ರಸಕ್ತ ವರ್ಷದಲ್ಲಿ ಭಾರತೀಯ ಆಹಾರ ನಿಗಮವು ಕರ್ನಾಟಕದಲ್ಲಿ ನಿರ್ವಹಿಸಿರುವ ಕಾರ್ಯಗಳ ಬಗ್ಗೆ ಕಾಡುಗೋಡಿಯಲ್ಲಿರುವ ಎಫ್​​ಸಿಐನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಡಾಡಿ …

Read More »

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ತಿಳಿಸಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್‌ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಆದೇಶ ಮಾಡಿದೆ. ಬುಡ್ಗ ಅಥವಾ …

Read More »

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

ಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು ಸ್ಥಗಿತಗೊಳಿಸುವುದಾಗಿ ಹೇಳಿರುವುದರಿಂದ ರಾಜ್ಯದಲ್ಲೂ ಮುಂದಿನ ವರ್ಷದಿಂದ ರಾಸಾಯನಿಕ ಗೊಬ್ಬರದ ಲಭ್ಯತೆ ಕಡಿಮೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪ್ರಸಕ್ತ ವರ್ಷದಲ್ಲಿ 11.17 ಲಕ್ಷ ಮೆಟ್ರಿಕ್‌ ರಸಗೊಬ್ಬರಕ್ಕೆ ಬೇಡಿಕೆ ಇದ್ದು, …

Read More »

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, ಕೊಳಕು ನಾಲಿಗೆ ಇವರದು” ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಆರ್​ಎಸ್​ಎಸ್​ ಬ್ಯಾನ್​ ಮಾಡುತ್ತೇನೆ ಎಂದು ಹೇಳಿಲ್ಲ. ಮೂರು ಸಲ ಆರ್​ಎಸ್​ಎಸ್​ ಬ್ಯಾನ್​ ಆಗಿತ್ತು. ಆ ಬ್ಯಾನ್​ ತೆಗೆದು ತಪ್ಪು ಮಾಡಿದೆವು ಎಂದು ಹೇಳಿದ್ದೇನೆ. ನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ ಮಾಡೋಣ …

Read More »