ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಜೀವನಾಡಿಯಾದ ಭದ್ರಾ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಿಂದ 1,200 ಕ್ಯೂಸೆಕ್ ನೀರನ್ನು ನದಿಗೆ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಸುಮಾರು ಮೂರು ಅಡಿಯಷ್ಟು ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯವು 186 ಅಡಿ ಗರಿಷ್ಟ ಎತ್ತರ ಹೊಂದಿದೆ. ಇಂದಿನ ನೀರಿನ ಮಟ್ಟ 174.4 ಅಡಿ ಇದೆ. ಮಳೆಗಾಲ ಇನ್ನೂ ಇದೆ. ಕಳೆದ ವರ್ಷ …
Read More »Daily Archives: ಜುಲೈ 15, 2025
ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ
ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ರಾಜಸ್ಥಾನ ಮೂಲದ ಪೀಮ್‌ರಾಮ್ ನಗರದಲ್ಲಿ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. …
Read More »ಯಲ್ಲಾಪುರ ಅರಣ್ಯದಲ್ಲಿ ಗುಂಡಿನ ಸದ್ದು
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ, 16ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್ (37)ನನ್ನು ಸೋಮವಾರ ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಬಳಿಯ ದಟ್ಟ ಅರಣ್ಯದಲ್ಲಿ ಕಾಲಿಗೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಈ ಕಾರ್ಯಾಚರಣೆ ವೇಳೆ, ಪ್ರವೀಣ್ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಜೊಯಿಡಾ ತಾಲೂಕಿನ …
Read More »ಮದುವೆಯಾದ ಖುಷಿಗೆ ಪಾರ್ಟಿ: ಚಿಕನ್ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
ಬೆಳಗಾವಿ: ಮದುವೆಯಾದ ಖುಷಿಗೆ ಯುವಕನೊಬ್ಬ ತನ್ನ ಸ್ನೇಹಿತರಿಗೆ ಎಣ್ಣೆ ಹಾಗೂ ನಾನ್ ವೆಜ್ ಪಾರ್ಟಿ ಇಟ್ಟುಕೊಂಡಿದ್ದ. ಈ ಪಾರ್ಟಿಯಲ್ಲಿ ಚಿಕನ್ ಪೀಸ್ ಜಾಸ್ತಿ ಹಾಕಲಿಲ್ಲ ಅಂತಾ ಸಣ್ಣ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಯರಗಟ್ಟಿಯ ವಿನೋದ ಮಲಶೆಟ್ಟಿ(25) ಕೊಲೆಯಾದ ಯುವಕ. ವಿನೋದ ಸ್ನೇಹಿತ ಅಭಿಷೇಕ ಕೊಪ್ಪದ ಅವರ ಮದುವೆ ಎರಡು ತಿಂಗಳ ಹಿಂದೆಯಷ್ಟೇ ಆಗಿತ್ತು. ಅಂದಿನಿಂದ ಆತನ ಸ್ನೇಹಿತರು ಪಾರ್ಟಿ …
Read More »ಶಾಸಕರ ಜೊತೆಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಸುರ್ಜೇವಾಲರಿಂದ ಮಿನಿಸ್ಟರ್ ಜೊತೆ One to One ಸಭೆ
ಬೆಂಗಳೂರು: ಶಾಸಕರೊಟ್ಟಿಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಚಿವರ ಜೊತೆ ಒನ್ ಒನ್ ಸಭೆ ಆರಂಭಿಸಿದ್ದಾರೆ. ಸಚಿವರುಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅನ್ನೋ ಶಾಸಕರ ಆರೋಪದ ಬೆನ್ನಲ್ಲೇ ಸಚಿವರ ಜೊತೆ ಸಭೆಗೆ ನಡೆಸುತ್ತಿರೋ ಸುರ್ಜೇವಾಲ ಸೋಮವಾರ ನಾಲ್ವರು ಸಚಿವರ ಜೊತೆ ಮಾತುಕತೆ ನಡೆಸಿದರು. ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರು ಸರಿಯಾಗಿ ಸ್ಪರ್ಧಿಸುತ್ತಿಲ್ಲ, ಉಸ್ತುವಾರಿ ಸಚಿವರುಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ತಿಲ್ಲ, ನಮ್ಮ ಲೆಟರ್ ಗಳಿಗೆ ಬೆಲೆ …
Read More »