Breaking News

Daily Archives: ಜುಲೈ 17, 2025

ಪರಪ್ಪನ ಅಗ್ರಹಾರ ಕೈದಿಯಿಂದ ‘ಉತ್ತಮರ ಸಂಗ’ ಹಾಡು ಹಾಡಿಸಿದ ಪ್ರೇಮಕವಿ ಕೆ.ಕಲ್ಯಾಣ್

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿ, ಜೈಲು ಸೇರಿದ್ದ ಶಿಕ್ಷಾಬಂಧಿಯಲ್ಲಿದ್ದ ಸುಪ್ತ ಪ್ರತಿಭೆ ಗುರುತಿಸಿ ಅವರಿಂದ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ತತ್ವಪದ ಹಾಡಿಸಿದ್ದಾರೆ. ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಕೆ.ಕಲ್ಯಾಣ್​ ಅವರ ಸಾಹಿತ್ಯದಲ್ಲಿ ಮೂಡಿಬಂದ ‘ಉತ್ತಮರ ಸಂಗ’ ಎಂಬ ಹಾಡನ್ನು ಕೈದಿ ಅರುಣ್ ಆಚಾರ್ ಹಾಡಿದ್ಧಾರೆ. ಈ ಹಾಡಿನ ಮೇಕಿಂಗ್ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನಿರ್ಮಿಸಿರುವ …

Read More »

ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ

ನೆಲ್ಯಾಡಿ ಬಳಿ ಮತ್ತೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಸ್ಥಗಿತ ನೆಲ್ಯಾಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ. ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು …

Read More »

ಸರ್ಕಾರಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ: ಲೋಕಾಯುಕ್ತರೇ ಶಾಕ್..!

ಕಲಬುರಗಿ, (ಜುಲೈ 16): ಜಿಲ್ಲೆಯ ಜೇವರ್ಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ (Jewargi Governmnet Hospital) ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನಿಮಾದ ಭಕ್ತಿಗೀತೆ ಬರೆದಿರುವುದು ಲೋಕಾಯುಕ್ತರ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಕಲಬುರಗಿ (Kalaburagi) ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್‌ಪಿ ಗೀತಾ ಬೇನಾಳ ಅವರು ಭೇಟಿ ನೀಡಿದರು. ಇದೇ ವೇಳೆ ಆಸ್ಪತ್ರೆಯ ವ್ಯವಸ್ಥೆಯ ಪರಿಶೀಲಿಸುವಾಗ ಭಕ್ತಿಗೀತೆ ಬರೆದಿರುವುದು ಕಂಡುಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ದಂಗಾಗಿದ್ದಾರೆ. ಒಪಿಡಿ ಪುಸ್ತಕದಲ್ಲಿ …

Read More »

ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವ ವಿಚಾರವಾಗಿ ಸೋದರ ಸಂಬಂಧಿಯನ್ನ ಹೆದರಿಸಲು ಸಾರ್ವಜನಿಕರ ಮೇಲೆ ಲಾಂಗ್ ಹಾಗೂ ಕಬ್ಭಿಣದ ರಾಡ್ ನಿಂದ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ಆರೋಪಿ ರವಿ ಹಾಗೂ ತಲೆಮರೆಸಿಕೊಂಡಿರುವ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋರ್ಟರ್ ಬಾಯ್ ಆಗಿ ಕೆಲಸ ಮಾಡಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ …

Read More »

ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ: ಉತ್ತರ ಕರ್ನಾಟಕದ ಮೊದಲ ಟೈಗರ್ ಸಫಾರಿ ಖ್ಯಾತಿಗೆ ಪಾತ್ರವಾಗಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಗಾಗಿ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಒಟ್ಟು 6.41 ಕೋಟಿ ವೆಚ್ಚದಲ್ಲಿ ಭರದಿಂದ ಕಾಮಗಾರಿಗಳು ನಡೆಯುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ಮೃಗಾಲಯದ ಚಿತ್ರಣವೇ ಬದಲಾಗಲಿದೆ. ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು …

Read More »

ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವನ್ನು ನಾನು, ಡಿಸಿಎಂ ಪಾಲಿಸುತ್ತೇವೆ: ಸಿಎಂ

ಬೆಂಗಳೂರು: ಹೈಕಮಾಂಡ್‌ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಆ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್‌ ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ವಿಚಾರದಲ್ಲಿ ಹೈಕಮಾಂಡ್‌ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು …

Read More »

ಶಿರೂರು ಗುಡ್ಡ ಕುಸಿತಕ್ಕೆ ಒಂದು ವರ್ಷ; ಮುಗಿಯದ ಸಂತ್ರಸ್ತರ ಕಣ್ಣೀರ ಗೋಳು

ಕಾರವಾರ(ಉತ್ತರಕನ್ನಡ): ಉತ್ತರಕನ್ನಡದ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಮಹಾದುರಂತವೊಂದಕ್ಕೆ (ಜು.16) ಇಂದಿಗೆ ಒಂದು ವರ್ಷವಾಗಿದೆ. ಆದರೆ ದುರಂತದ ಬಳಿಕ ಸ್ವತಃ ಮುಖ್ಯಮಂತ್ರಿಯೇ ಬಂದು ಪರಿಶೀಲಿಸಿದ್ದರು. ಇಂದಿಗೂ ಗುಡ್ಡ ಕುಸಿತ ಅರೆಬರೆಯಾಗಿ ನಿರಾಶ್ರಿತರಿಗೂ ಸೂರು ದೊರೆಯದೇ ಕಣ್ಣೀರ ಗೋಳು ಮುಂದುವರಿದಿದೆ. ಹೌದು ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಬೃಹತ್ ಗುಡ್ಡ ಕುಸಿತಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಈ ದುರಂತವು ಉತ್ತರಕನ್ನಡದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ಉಳಿದಿದೆ. ಘಟನೆ …

Read More »

ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …

Read More »

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು …

Read More »