ಬಾಗಲಕೋಟೆ, ಜುಲೈ 21: ಒಂದೆಡೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji), ಮತ್ತೊಂದೆಡೆ ವಿಜಯಾನಂದ ಕಾಶಪ್ಪನವರ (Vijayanand Kashappanavar) ನೇತೃತ್ವದಲ್ಲಿ ನಡೆದ ಟ್ರಸ್ಟ್ ಸಭೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸುತ್ತಿರುವ ನಾಯಕರು. ಹೀಗೆ ಕೂಡಲಸಂಗಮ ಪಂಚಮಸಾಲಿ ಪೀಠ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಸಮಾಜದ ಮುಖಂಡರು ಸಂಧಾನದ ಸುಳಿವು ನೀಡಿದ್ದಾರೆ. ಅತ್ತ ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ನಡೆದಿದ್ದರೆ, ಇತ್ತ ಸ್ವಾಮೀಜಿ …
Read More »Daily Archives: ಜುಲೈ 21, 2025
20 ರೂಪಾಯಿಗಾಗಿ ಹೆತ್ತ ತಾಯಿಯನ್ನೇ ಕಡಿದು ಹತ್ಯೆಗೈದ ಮಗ
ಜುಲೈ 21: ಹಣ ಕೊಡಲಿಲ್ಲ ಎನ್ನವು ಕೋಪದಲ್ಲಿ ಮಗನೊಬ್ಬ ಹೆತ್ತ ತಾಯಿಯನ್ನೇ ಕಡಿದು ಕೊಲೆ(Murder) ಮಾಡಿರುವ ಘಟನೆ ಹರ್ಯಾಣದ ನೂಹ್ನಲ್ಲಿ ನಡೆದಿದೆ. ಕೇವಲ 20 ರೂಪಾಯಿಗಾಗಿ 56 ವರ್ಷದ ತಾಯಿಯನ್ನು ಮಗ ಹತ್ಯೆ ಮಾಡಿದ್ದಾನೆ. ಜೈಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಗ ಮಾದಕ ವ್ಯಸನಿಯಾಗಿದ್ದು, ಬಹಳ ದಿನಗಳಿಂದ ಗಾಂಜಾ ಮತ್ತು ಅಫೀಮು ಸೇವಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಕೊಲೆ ಮಾಡಿದ ಬಳಿಕ ರಕ್ತ ಸಿಕ್ತ …
Read More »ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ
ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …
Read More »ಇ-ಸ್ವತ್ತು ಹಾಗೂ ಹಕ್ಕು ಪತ್ರ ವಿತರಣಾ ಸಮಾರಂಭಕ್ಕೆ ಡಿಕೆಶಿ ಅವರಿಂದ ಚಾಲನೆ
ಹೊಸಕೋಟೆ(ಬೆಂ. ಗ್ರಾಮಾಂತರ): “ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಹೊಸಕೋಟೆ ತಾಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯಿತಿಗಳ ವತಿಯಿಂದ ಇ-ಸ್ವತ್ತು ಹಾಗೂ ಹಕ್ಕು ಪತ್ರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲವು …
Read More »ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ದುರ್ಮರಣ
ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ – ಮಗ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಘಟನೆ ವಿವರ: ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಬಸವರಾಜ ಕೆಂಗೇರಿ (40) ಹಾಗೂ ಪುತ್ರ ಧರೆಪ್ಪ ಬಸವರಾಜ ಕೆಂಗೇರಿ (14) ಮೃತರು. ಬಸವರಾಜ ಪತ್ನಿ ತವರೂರು ಮಳಗಲಿ ಗ್ರಾಮದಲ್ಲಿರುವ ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ನೀರು ತರಲು ಹೋಗಿದ್ದ ಬಸವರಾಜ …
Read More »ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ.
ಐದು ದಿನಗಳ ಕಾಲ, ರವೀಂದ್ರನಾಥ್ ಸಮುದ್ರದಲ್ಲಿ ಏಕಾಂಗಿಯಾಗಿ ಈಜುತ್ತಿದ್ದರು, ಆಹಾರ ಅಥವಾ ಪಾನೀಯವಿಲ್ಲದೆ, ಬದುಕುವ ಅದಮ್ಯ ಬಯಕೆ ಮಾತ್ರ. ಮಳೆ ಬಂದಾಗ, ಅವರು ಜೀವಂತವಾಗಿರಲು ಆ ಮಳೆನೀರನ್ನು ಕುಡಿದರು. ಸಾವು ಪ್ರತಿ ಕ್ಷಣವೂ ಸಮೀಪಿಸುತ್ತಿರುವಂತೆ ತೋರುತ್ತಿತ್ತು, ಆದರೆ ಅವರ ಧೈರ್ಯ ಅದರ ಮೇಲಿತ್ತು. ಐದನೇ ದಿನ… ‘ಎಂ.ವಿ. ಜಾವೇದ್’ ಹಡಗು ಬಾಂಗ್ಲಾದೇಶದ ಕುತುಬಬಾದಿಯಾ ದ್ವೀಪದಿಂದ ಸುಮಾರು 600 ಮೀಟರ್ ದೂರದಲ್ಲಿ ಹಾದುಹೋಗುತ್ತಿತ್ತು. ಹಡಗಿನ ಕ್ಯಾಪ್ಟನ್ ದೂರದಲ್ಲಿ ಸಮುದ್ರದಲ್ಲಿ ಏನೋ ಚಲಿಸುತ್ತಿರುವುದನ್ನು …
Read More »ಸಣ್ಣಪುಟ್ಟ ವ್ಯಾಪಾರಸ್ಥರಿಗೂ ಜಿಎಸ್ಟಿ ನೋಟಿಸ್: QR ಕೋಡ್ ಜಾಗದಲ್ಲಿ Cash Only ಬೋರ್ಡ್ ಪ್ರತ್ಯಕ್ಷ
ಬೆಂಗಳೂರು: ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಬೆಂಗಳೂರು, ಮೈಸೂರು ಮುಂತಾದ ನಗರಗಳಲ್ಲಿ ಹಾಗೂ ಅರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರಸ್ಥರು ನಗದು ವಹಿವಾಟಿಗೆ ಮರಳುತ್ತಿದ್ದು, ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯ …
Read More »ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ
ಗಂಗಾವತಿ(ಕೊಪ್ಪಳ): ಕಳೆದ ಹಲವು ದಿನಗಳ ಹಿಂದೆ ಪರಸ್ಪರ ವಾಗ್ವಾದ ಮಾಡಿಕೊಂಡಿದ್ದ ಮಾಜಿ ಸಚಿವ ಶ್ರೀರಾಮುಲು ಮತ್ತು ಗಂಗಾವತಿಯ ಹಾಲಿ ಶಾಸಕ ಜಿ.ಜನಾರ್ದನ ರೆಡ್ಡಿ ಮುನಿಸು ಮರೆತು ಮತ್ತೆ ವೇದಿಕೆಯಲ್ಲಿ ಒಂದಾದ ಪ್ರಸಂಗ ಇಂದು ನಡೆಯಿತು. ತಾಲೂಕಿನ ಮರಳಿಯ ಹೊರವಲಯದಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿದ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖ ಪದಾಧಿಕಾರಿಗಳ ಸಂಘಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಪಕ್ಷದ ಹಲವು ನಾಯಕರ ಸಮ್ಮುಖದಲ್ಲಿ ರೆಡ್ಡಿ-ರಾಮುಲು ಒಂದಾದರು.ಕಾರ್ಯಕ್ರಮದ ವೇದಿಕೆಯಲ್ಲಿ …
Read More »ಧರ್ಮಸ್ಥಳ ಪ್ರಕರಣ ಎಸ್ ಐಟಿಗೆ: ಸರ್ಕಾರದ ನಿಲುವು ಉತ್ತಮ- ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕಟಣೆ
ಮಂಗಳೂರು(ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ನೀಡಿರುವ ಸಂಬಂಧ ಇಂದು ಪ್ರಕಟಣೆ ನೀಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರು, ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅವರು ಈ ಬಗ್ಗೆ ಪ್ರಕಟಣೆ ನೀಡಿದ್ದು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು …
Read More »