Breaking News

Monthly Archives: ಜುಲೈ 2025

ನಾಳೆ ಬೆಳಗಾವಿಗೆ ಗಡಿ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ

ನಾಳೆ ಬೆಳಗಾವಿಗೆ ಗಡಿ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಭೇಟಿ ಬೆಳಗಾವಿ: ಗಡಿ ಉಸ್ತುವಾರಿ ಸಚಿವರಾಗಿ ಇತ್ತೀಚೆಗೆ ನೇಮಕಗೊಂಡಿರುವ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವ ಶ್ರೀ ಎಚ್.ಕೆ.ಪಾಟೀಲ ಅವರು ಶನಿವಾರ ದಿ.26 ರಂದು ಗಡಿ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ಸಚಿವರು ಸಭೆ ನಡೆಸಿ ಗಡಿಗೆ ಸಂಬಂಧಿಸಿದ ವಿಷಯಗಳ …

Read More »

ಯರಹಳ್ಳಿಯಲ್ಲಿ 44ನೇ ಶ್ರೀ ಚಾಮುಂಡೇಶ್ವರಿ ಹಬ್ಬ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ ಸಾವಿರಾರು ಭಕ್ತರು

ಯರಹಳ್ಳಿಯಲ್ಲಿ 44ನೇ ಶ್ರೀ ಚಾಮುಂಡೇಶ್ವರಿ ಹಬ್ಬ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ ಸಾವಿರಾರು ಭಕ್ತರು ಎಚ್.ಡಿ. ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ 44ನೇ ವರ್ಷದ ಶ್ರೀ ಚಾಮುಂಡೇಶ್ವರಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಗ್ರಾಮದಲ್ಲಿ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಂಸ್ಕೃತಿಕ ಕಲೆಗಳಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದರು. ವಿದ್ಯಾರ್ಥಿಗಳಿಂದ ಕಲಾತಂಡಗಳು ವಾದ್ಯ, ಕಂಸಾಳೆ, ಚಿಲಿಪಿಲಿ ಗೊಂಬೆ, ಕರಗ, ಬೆಳ್ಳಿರಥದೊಂದಿಗೆ ಭವ್ಯ ಮೆರವಣಿಗೆಯನ್ನು ನಡೆಸಿ ದೇವಿಗೆ ನಮನ ಸಲ್ಲಿಸಿದರು. …

Read More »

ಧಾರವಾಡದಲ್ಲಿ‌ ಕುಖ್ಯಾತಿ ಮನೆ ಕಳ್ಳರ ಮೇಲೆ ಪೊಲೀಸ್ ಫೈರಿಂಗ್…..ಇಬ್ಬರ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ವಿದ್ಯಾಗಿರಿ ಪಿಎಸ್‌ಐ.

ಧಾರವಾಡದಲ್ಲಿ‌ ಕುಖ್ಯಾತಿ ಮನೆ ಕಳ್ಳರ ಮೇಲೆ ಪೊಲೀಸ್ ಫೈರಿಂಗ್…..ಇಬ್ಬರ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ ವಿದ್ಯಾಗಿರಿ ಪಿಎಸ್‌ಐ. ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ. ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ ಅಣ್ಣಿಗೇರಿ ಎಂಬಾತರೇ ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳಾಗಿದ್ದಾರೆ. ಇನ್ನೂ ಈ ಇಬ್ಬರು 35 ಕ್ಕೂ …

Read More »

ಜಿಟಿ ಜಿಟಿ ಮಳೆಗೆ ಕೆಸರುಗದ್ದೆಯಂತಾದ ತಳಕವಾಡ-ಆಶ್ರಯ ಪ್ಲಾಟ್ ರಸ್ತೆ

ಜಿಟಿ ಜಿಟಿ ಮಳೆಗೆ ಕೆಸರುಗದ್ದೆಯಂತಾದ ತಳಕವಾಡ-ಆಶ್ರಯ ಪ್ಲಾಟ್ ರಸ್ತೆ ಕ್ಯಾರೆ ಎನ್ನದ ಪಂಚಾಯಿತಿ ವಿರುದ್ಧ ಹಿಡಿಶಾಪ!!! ಜಿಟಿ ಜಿಟಿ ಮಳೆಗೆ ಕೆಸರುಗದ್ದೆಯಂತಾದ ರಸ್ತೆಯಲ್ಲಿ ಪ್ರತಿದಿನ ಮಹಿಳೆಯರು ಮಕ್ಕಳು ಬಿದ್ದು ಗಾಯಗೊಳ್ಳುತ್ತಿದ್ದು, ಕ್ಯಾರೆ ಎನ್ನದ ಗ್ರಾಮ ಪಂಚಾಯಿತಿಯ ವಿರುದ್ಧ ಮಹಿಳೆಯರು ಹಿಡಿಶಾಪ ಹಾಕುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಆಲೂರು ಎಸ್.ಕೆ ಗ್ರಾಮದಲ್ಲಿ ಕಂಡು ಬರುತ್ತಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಆಲೂರು ಎಸ್.ಕೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಳಕವಾಡ …

Read More »

ಬೈಕ್ ಮೇಲೆ ಮರ ಬಿದ್ದು ಗಂಡ-ಹೆಂಡತಿ ಸಾವು, ಮಗಳಿಗೆ ಗಾಯ

ರಾಯಚೂರು: ಬೃಹದಾರದ ಮರವೊಂದು ಬೈಕ್ ಸವಾರರ ಮೇಲೆ ಉರುಳಿಬಿದ್ದ ಪರಿಣಾಮ ಪತಿ-ಪತ್ನಿ ಮೃತಪಟ್ಟಿದ್ದು, ಅವರ ಮಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಮುದಗಲ್‌ನಲ್ಲಿ ಬುಧವಾರ ನಡೆದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಮದರ್ ಥೆರೆಸಾ ಶಾಲೆ ಬಳಿ ಈ ದುರ್ಘಟನೆ ಸಂಭವಿಸಿದೆ. ಪತಿ ರಮೇಶ್​ ಗುಡದಪ್ಪ(26), ಪತ್ನಿ ಮಂಜುಳಾ(23) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮೂರು ವರ್ಷ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತರನ್ನು …

Read More »

ಲೋಕಾಯುಕ್ತ ದಾಳಿ: ರಾಶಿರಾಶಿ ಚಿನ್ನ, ನಗದು ಸೇರಿ 37.41 ಕೋಟಿಯ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದಡಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳೂ ಸೇರಿದಂತೆ ಏಕಕಾಲದಲ್ಲಿ 41 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ. ಅಸಮತೋಲನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ಐಐಎಸ್ ಮಹಿಳಾ ಅಧಿಕಾರಿ ಒಳಗೊಂಡಂತೆ ಎಂಟು …

Read More »

ಭೀಮನ ಅಮಾವಾಸ್ಯೆ: ಝಗಮಗಿಸುತ್ತಿದೆ ಮಹದೇಶ್ವರ ಬೆಟ್ಟ

ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಭೀಮನ‌ ಅಮಾವಾಸ್ಯೆ ಪ್ರಯುಕ್ತ ಇಡೀ ಕ್ಷೇತ್ರ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ. ಭೀಮನ ಅಮವಾಸ್ಯೆ ಪ್ರಯುಕ್ತ ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು ಭಕ್ತರ ಕಣ್ಮನ ಸೆಳೆಯುತ್ತಿದೆ. ಶ್ರಾವಣ ಮಾಸದ ಮೊದಲ ದಿನವಾಗಿದ್ದು, ಈ ದಿನ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಈಗಾಗಲೇ ಸಹಸ್ರಾರು ಮಂದಿ ಭಕ್ತರು ಬರುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ …

Read More »

ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ.

ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ. ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಜನರು ಬರೀ ವಾಣಿಜ್ಯ ತೆರಿಗೆ ಬಗ್ಗೆ ಅಷ್ಟೆ ಮಾತಾಡ್ತಿದ್ದಾರಾ? ಜಿಎಸ್ಟಿ ಬಗ್ಗೆ ಮಾತಾಡ್ತಿಲ್ವಾ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದ ಅವರು ಈ ಕುರಿತು ಸಿಎಂ ಸಭೆಯನ್ನು …

Read More »

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಿಂದ 20 ಸಾವಿರ ರೂ. ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಇತರ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA)ಯ ವಿವಿಧ ಸೆಕ್ಷನ್​ಗಳನ್ನು ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಧನುಷ್ ಭಂಡಾರಿ, ದಿಲೇಶ್ ಬಂಗೇರ, …

Read More »

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಜಗದೀಶ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಜಗದೀಶ್ ವಿರುದ್ಧ ಭಾರತೀನಗರ ಠಾಣೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ಧಾರೆ. ಜುಲೈ 15ರಂದು ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇದುವರೆಗೂ 12 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಆರೋಪಿ ಜಗದೀಶ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಿದರೂ ಸುಳಿವು ಸಿಕ್ಕಿಲ್ಲ. ಹೀಗಾಗಿ, ಆತನ …

Read More »