Breaking News

Monthly Archives: ಜುಲೈ 2025

ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ‌ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ

ಏರೋಸ್ಪೇಸ್ ಅನ್ಯ ರಾಜ್ಯದ ಪಾಲಾಗಬಾರದು, ಉತ್ತರ ಕರ್ನಾಟಕದಲ್ಲಿ‌ ಪಾರ್ಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅರವಿಂದ ಬೆಲ್ಲದ ಸಿಎಂಗೆ ಪತ್ರ ಧಾರವಾಡ- ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಮೀಸಲಿಟ್ಟಿದ್ದ 1,777 ಎಕರೆ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ರೈತರಿಗೆ ನೆರವಾಗುವಂತೆ ತಾವು ಕೈಗೊಂಡ ನಿರ್ಧಾರ ಸ್ವಾಗತಾರ್ಹ. ಈ ಏರೋ ಸ್ಪೇಸ್ ಪಾರ್ಕ ನಿರ್ಮಾಣವನ್ನು ಉತ್ತರ ಕರ್ನಾಟಕದಲ್ಲಿ ಮಾಡಬೇಕು‌ ಎಂದು ವಿಪಕ್ಷ ಉಪನಾಯಕ ಅರವಿಂದ …

Read More »

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆ

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಜಿಲ್ಲೆಯಲ್ಲಿ ಇನ್ನಷ್ಟು ಬಸ್‌ಗಳನ್ನು ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು. ಈ …

Read More »

ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ

ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿಗೆ ಸಿದ್ಧರಾಮಯ್ಯ ಕೊಡುಗೆ ಶೂನ್ಯ; ನಿಖಿಲ್ ಕುಮಾರಸ್ವಾಮಿ ಬಾದಾಮಿಯಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ ರಾಜಕೀಯ ಪುರ್ನಜನ್ಮ ನೀಡಿದ ಬಾದಾಮಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಶೂನ್ಯ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯ ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಗುರುವಾರ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ …

Read More »

ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ

ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಮಾಜಿ ಮೇಯರ ವಿಜಯ ಮೋರೆ ಮನವಿ ಸಾರ್ವಜನಿಕರು ಪ್ರತಿನಿತ್ಯ ತಾವುಗಳು ಮನೆಗೆ ಕೊಂಡುಕೊಳ್ಳುವ ಪತ್ರಿಕೆಗಳನ್ನು ಹಾಳು ಮಾಡದೆ ಒಟ್ಟುಗೂಡಿಸಿ ಪ್ರತಿ ಎರಡು ತಿಂಗಳಿಗೊಮ್ಮೆ ರದ್ದಿಯನ್ನು ಶಾಂತಾಯಿ ವಿದ್ಯಾ ಆಧಾರದವರಿಗೆ ನೀಡಿದರೆ ಸೌಕರ್ಯ ವಂಚಿತ ಬಡ ವಿದ್ಯಾರ್ಥಿಗಳ ಅನುಕೂಲವಾಗುತ್ತದೆ ಎಂದು ಮಾಜಿ ಮೇಯರ ವಿಜಯ ಮೋರೆ ಹೇಳಿದರು ಸವಲತ್ತು ರಹಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸಲು ಶಾಂತಾಯಿ ವಿದ್ಯಾ ಆಧಾರ್ ತನ್ನ ಕಾರ್ಯವನ್ನು ಮುಂದುವರೆಸಿದೆ ಸಂಸ್ಥೆಯು …

Read More »

ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್

ಮಧ್ಯವರ್ಜನ ಶಿಬಿರಗಳಲ್ಲಿ ಪಾಲ್ಗೊಂಡು ಉತ್ತಮ ಜೀವನ ನಡೆಸಿ: ಮಲ್ಲಗೌಡ ಪಾಟೀಲ್ ಸಲಹೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1951ನೇ ಮಧ್ಯವರ್ಜನ ಶಿಬಿರ ಕಾರ್ಯಕ್ರಮ ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ದಶಕಗಳಿಂದ ಮಧ್ಯವರ್ಜನ ಶಿಬಿರ ನಡೆಸಿ ಕುಡಿತದ ಚಟಕ್ಕೆ ಬಲಿಯಾದವರನ್ನು ಸರಿ ದಾರಿಗೆ ತರುತ್ತಿರುವುದು ಶ್ಲಾಘನೀಯ ಕೆಲಸ ಎಂದು ಕೆಪಿಸಿಸಿ ಸದಸ್ಯರಾದ ಮಲ್ಲಗೌಡ ಕಲ್ಲಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಕಡೋಲಿ ವಲಯದಲ್ಲಿ ಛತ್ರಪತಿ ಶಿವಾಜಿ …

Read More »

ಪ್ಲಾಸ್ಟಿಕ್‌ ಕೈ ಚೀಲದ ಬದಲು ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಸರ್ಕಾರದ ನಿರ್ಧಾರ

ಬೆಂಗಳೂರು: ಪ್ಲಾಸ್ಟಿಕ್‌ ಕೈ ಚೀಲಗಳ ಬದಲು ಕರಗುವ “ಕಾಂಪೋಸ್ಟಬಲ್ ಕ್ಯಾರಿ ಬ್ಯಾಗ್” ಗಳ ಉತ್ಪಾದನೆಗೆ ಆದ್ಯತೆ ನೀಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಈ ವಿಷಯ ತಿಳಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತು ಅರಣ್ಯ ಇಲಾಖೆ ಹೊರಡಿಸಿರುವ ಅಧಿಸೂಚನೆಗಳಲ್ಲಿ “ಪ್ಲಾಸ್ಟಿಕ್ ಬ್ಯಾಗ್” ಎಂಬ ಪದದ ವ್ಯಾಖ್ಯಾನಕ್ಕೆ ತಿದ್ದುಪಡಿ ಮಾಡಲು …

Read More »

ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು: ವೈದ್ಯಕೀಯ ಸಚಿವರ ಸ್ಪಷ್ಟನೆ

ಹಾವೇರಿ: ರಾಜ್ಯದಲ್ಲಿ ಹೃದಯಾಘಾತಗಳಿಂದ ಹೆಚ್ಚು ಸಾವುಗಳಾಗುತ್ತಿವೆ ಎಂಬ ತಪ್ಪು ಸಂದೇಶ ಹೋಗಿದೆ. ಹೃದಯಾಘಾತಗಳಿಂದ ಹೆಚ್ಚು ಸಾವಾಗುತ್ತಿದೆ ಎಂಬುದು ಸುಳ್ಳು ಎಂದು ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಹಾವೇರಿ ತಾಲೂಕಿನ ನಲೋಗಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಜಿಟಿಟಿಸಿ ತರಬೇತಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೃದಯಾಘಾತ ಪ್ರಕರಣಗಳ ಬಗ್ಗೆ ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೊಂದಿಗೆ ಎರಡು ದಿನಗಳ ಹಿಂದೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದೇವೆ. ಈ ಬಗ್ಗೆ …

Read More »

ಆಪರೇಟಿವ್ ಸೊಸೈಟಿಯೊಂದರ ಮೇಲೆ ಇಡಿ ದಾಳಿ

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15,000ಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕೋ-ಆಪರೇಟಿವ್ ಸೊಸೈಟಿಯೊಂದರ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ಮಾಡಿದೆ ಎಂದು ಇಡಿ ಮೂಲಗಳು ತಿಳಿಸಿವೆ. ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ. …

Read More »

ಮಾಜಿ ಸಚಿವನಿಗೆ ನವಿಲಿನ ಗರಿ ಹಾರ ಹಾಕಿದ ಅಭಿಮಾನಿಗಳು; ದೂರು ದಾಖಲಾಗ್ತಿದ್ದಂತೆ ಸ್ಪಷ್ಟನೆ ಕೊಟ್ಟ ಶಿವನಗೌಡ ನಾಯಕ್​​

ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದಂದು ಅಭಿಮಾನಿಗಳು ನವಿಲುಗರಿ ಹಾರ ಹಾಕಿರುವ ವಿಚಾರಕ್ಕೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಕುರಿತು ಈ ಮೇಲ್ ದೂರು ನೀಡಿದ್ದಾರೆ. 2025 ಜುಲೈ 14 ರಂದು ಕೆ. ಶಿವನಗೌಡ ನಾಯಕ ಅವರ ಹುಟ್ಟುಹಬ್ಬವಿತ್ತು. ಅಂದು ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ಸಿದ್ದಪಡಿಸಿದ್ದ ಹಾರವನ್ನ ಧರಿಸಿ ಸಾರ್ವಜನಿಕವಾಗಿ ಫೋಟೋ ಪ್ರದರ್ಶನ ಮಾಡಲಾಗಿದೆ. ಇದರಿಂದ …

Read More »

ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ

ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ ನಿಧನ ಬೆಳಗಾವಿ ತಾಲೂಕಿನ ಹಲಗಾ ಮರಗಾಯಿ ಗಲ್ಲಿ ಮೂಲದ ಸದ್ಯ ಬೆಳಗಾವಿಯ ಟೀಚರ್ಸ್ ಕಾಲನಿಯ ರಹಿವಾಸಿ ಮಾಜಿ ಯೋಧ ಸಂತರಾಮ ಪರಶರಾಮ ಸಂತಾಜೀ (63) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ, ಅಳಿಯ, ಪುತ್ರ ಸೊಸೆ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ

Read More »