Breaking News

Monthly Archives: ಜುಲೈ 2025

ಗಾಂಜಾ ಮಾರಾಟ: ಪ.ಬಂಗಾಳದ ಐವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ತೀರ್ಥಹಳ್ಳಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅಪರಾಧಿಗಳಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿದೆ. ಪಶ್ಚಿಮ ಬಂಗಾಳದ ಅಲೋಕ್ (34), ಶ್ರೀವಾಷ್ ಸರ್ಕಾರ್ (20), ಅಮ್ರಿತ್ ಮಂಡಲ್ (27) ಹಾಗೂ ಸಂಕರ್ ಬ್ಯಾಪಾರಿ (28) ಹಾಗೂ ಹರಧನ್ ಮಂಡಲ್ ಶಿಕ್ಷೆಗೊಳಗಾದ ಅಪರಾಧಿಗಳು. ಕಟ್ಟಡ ಸೆಂಟ್ರಿಂಗ್ ಕೆಲಸಕ್ಕೆಂದು …

Read More »

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ

ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ, …

Read More »

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು …

Read More »

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ನೇಗಿನಹಾಳ ಗ್ರಾಮದಲ್ಲಿ ಆಯೋಜಿಸಲಾದ ಚೆನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರೊಂದಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಪಕ್ಷದ ಭವಿಷ್ಯವನ್ನು ರೂಪಿಸುವ ಶಕ್ತಿ ಯುವಕರಲ್ಲಿದೆ. ಎಲ್ಲರೂ ಒಂದಾಗಿ, ಶಕ್ತಿಯಾಗಿ ಮುನ್ನಡೆಯಬೇಕು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ. ಈ ವೇಳೆ ಕಿತ್ತೂರು ಹಾಗೂ ನೇಸರಗಿ ಬ್ಲಾಕ್‌ ಗಳಿಗೆ ನೂತನವಾಗಿ ‌ಆಯ್ಕೆಯಾದ ಯುವ ಕಾಂಗ್ರೆಸ್ ಎಲ್ಲ ಪದಾಧಿಕಾರಿಗಳಿಗೆ ಸನ್ಮಾನಿಸಿದರು ಸಭೆಯಲ್ಲಿ …

Read More »

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …

Read More »

ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಸಮಯಕ್ಕೆ ಬಾರದ ಬಸ್ ವಿದ್ಯಾರ್ಥಿಗಳೆಲ್ಲ ಠುಸ್ ಮಕ್ಕಳ ದಿನನಿತ್ಯದ ಗೋಳನ್ನು ನೋಡಿದ ಪಾಲಕರ ಮನಸ್ಸು ಕಸ್ ರೋಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪಾಲಕರದಿಂದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಗೆ ಬ್ರೇಕ್ ಈ  ಬೆಳಗಾವಿ ತಾಲೂಕಿನ ಕೊಂಡಸಕಪ್ಪ ಗ್ರಾಮಕ್ಕೆ ಬಸ್ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಬುಧವಾರ ತಮ್ಮೂರಿಗೆ ಬಸ್ …

Read More »

ಕಿತ್ತೂರು ಕೈ ಶಾಸಕರಿಂದ ಬಿಜೆಪಿಗರ ಅವಹೇಳನ ಆರೋಪ ಶಾಸಕ ಬಾಬಾಸಾಹೇಬ್ ಪಾಟೀಲ್ ಗೃಹ ಕಚೇರಿಗೆ ಮುತ್ತಿಗೆ?!!!

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಕೈ ಶಾಸಕರ ಗೃಹ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೈ ಶಾಸಕರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಶಾಸಕರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಶಾಸಕ …

Read More »

ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ

ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ ಗಡಿಭಾಗದಲ್ಲಿ ಶೇ.15ಕ್ಕಿಂತ ಹೆಚ್ಚು ಅನ್ಯ ಭಾಷಿಕರಿರುವಾಗಲೂ ಕನ್ನಡ ಕಡ್ಡಾಯ ಆದೇಶ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಆಗಸ್ಟ್ ಮೊದಲವಾರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಗುವುದೆಂದು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಇಂದು ಬೆಳಗಾವಿಯ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಮಾಜಿ ಶಾಸಕ ಮನೋಹರ್ ಕಿಣೇಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿಭಾಗದಲ್ಲಿ ಕನ್ನಡ ಕಡ್ಡಾಯ, …

Read More »

ಹುಬ್ಬಳ್ಳಿ – ಜೋಗ್​ಫಾಲ್ಸ್‌ಗೆ ವಿಶೇಷ ಬಸ್

ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ವಿಶ್ವವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿವೆ. ವಿಶ್ವವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಸಾರ್ವಜನಿಕರ ಬೇಡಿಕೆಯ ಮೇರೆಗೆ ಜೋಗ ಜಲಪಾತ ವೀಕ್ಷಿಸಲು ಕುಟುಂಬದವರೊಂದಿಗೆ ಹೋಗಿ ಬರಲು …

Read More »

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …

Read More »