Breaking News

Monthly Archives: ಜುಲೈ 2025

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ‌ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನಿಶ್ಚಿತತೆ ಕಾಡುತ್ತಿದೆ. ರಣದೀಪ್ ಸಿಂಗ್ ಸುರ್ಜೆವಾಲ ಅವರು ಪದೇ ಪದೆ ಬೆಂಗಳೂರಿಗೆ ಬರ್ತಾ ಇದ್ದಾರೆ. ಬಂದಾಗಲೆಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅವರು ಬೆಂಗಳೂರಿನಲ್ಲಿ ಮೂರು ದಿನಗಳ‌ವರೆಗೆ ಇರ್ತಾರೆ. ಇದರ ಹಿನ್ನೆಲೆ ಏನಂದ್ರೆ, ಡಿ. ಕೆ. …

Read More »

ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ ಸಮಿತಿ ಸಲ್ಲಿಸಿರುವ ವರದಿಯನ್ನು ಬಹಿರಂಗಪಡಿಸಲು ಕೋರಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್, ಕೇಂದ್ರ, ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ಸಿಎಲ್)ಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, …

Read More »

ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ

ಹಾವೇರಿ: “ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು. “ನನಗೆ ಸಚಿವ …

Read More »

ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಅಪರಿಚಿತರು ಮೊಬೈಲ್ ಫೋನ್ ಕೇಳಿದಾಗ ಕೊಡುವ ಮುನ್ನ ಸ್ವಲ್ಪ ಎಚ್ಚರವಿರಲಿ. ಕರೆ ಮಾಡಲು ಕೊಟ್ಟ ಫೋನ್​ನ್ನು ವಾಪಸ್ ಕೇಳಿದ್ದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 3ರಂದು ಹಾಡಹಗಲೇ ಜಯನಗರದ ಪಟಾಲಮ್ಮ ದೇವಸ್ಥಾನದ ರಸ್ತೆಯಲ್ಲಿ ಈ ಘಟನೆ ಜರುಗಿದೆ. ದುಷ್ಕರ್ಮಿಯ ಅಟ್ಟಹಾಸಕ್ಕೆ ಸೆಕ್ಯುರಿಟಿ ಗಾರ್ಡ್ ಪರ್ವಿಂದರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅಸ್ಗರ್ ಎಂಬಾತನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಮೊಬೈಲ್ …

Read More »

ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

ನೆಲಮಂಗಲ, ಜುಲೈ 07: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದೆ. ಕುಶಾಲ್ ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ ಸೋಲದೇವನಹಳ್ಳಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಕಾಲೇಜಿನ ದಿನಗಳಲ್ಲಿ ಕುಶಾಲ್ ಮತ್ತು ಯುವತಿ ಮಧ್ಯೆ ಪ್ರೀತಿ ಅರಳಿತ್ತು. ಎರಡು ವರ್ಷದ ಪ್ರೀತಿ ಕೆಲವು ತಿಂಗಳ ಹಿಂದೆ ಮುರಿದು ಬಿದ್ದಿತ್ತು. ಈ ವೇಳೆ ಯುವತಿಗೆ …

Read More »

ಶಾಸಕರ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ 20 ವಾಹನಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ

ಆನೇಕಲ್​, ಜುಲೈ 07: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ (Satish Reddy) ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಆಟೋಗಳ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 12 ಕಾರುಗಳು 8 ಆಟೋಗಳ ಗಾಜುಗಳು ಪುಡಿ ಪುಡಿಯಾಗಿವೆ. ಬೊಮ್ಮನಹಳ್ಳಿಯ (Bommanahalli) ಹೊಂಗಸಂದ್ರದಲ್ಲಿ ಘಟನೆ ನಡೆದಿದೆ. ಹೊಂಗಸಂದ್ರದ ರಾಜಕುಮಾರ್ ರಸ್ತೆ ಬದಿ ನಿಲ್ಲಿಸಿದ್ದ 12 ಕಾರುಗಳು 8 ಆಟೋಗಳ ಮೇಲೆ ದುಷ್ಕರ್ಮಿಗಳು ನಸುಕಿನ ಜಾವ 3 ಗಂಟೆ ಸುಮಾರಿಗೆ ಕಲ್ಲು, ದೊಣ್ಣೆ, ರಾಡ್​ನಿಂದ ಕಾರು …

Read More »

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಪತ್ನಿಯಾಗಿದ್ದಾರೆ. ಪತಿ ನವೀನ್ ಕೊಲೆ ಮಾಡಿರುವ ಆರೋಪಿ. ಮಹಿಳೆಯ ಕುತ್ತಿಗೆ, ಮುಖ ಹಾಗೂ ಇತರ ಭಾಗಗಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನವೀನ್ ತುಮಕೂರು ತಾಲೂಕಿನ ಅಮೃತಗಿರಿಯ ವಾಸಿಯಾಗಿದ್ದು, ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. …

Read More »

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

ಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ ಅವರ ಪತ್ನಿ ತೇಜಸ್ವಿನಿ ಹಾಗೂ ಕೊಲೆಗೆ ಯತ್ನಿಸಿದ ಗಣೇಶ್ ಪಾಟೀಲ್​ಗೆ ತಲಾ 10 ವರ್ಷಗಳವರೆಗೆ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಪ್ರಕರಣ ಹಿನ್ನೆಲೆ: 11 ಜೂನ್ 2021 ರಂದು ರಾತ್ರಿ ಅಂಕುಶ್​ ಕೊಲೆಗೆ ಯತ್ನ ನಡೆದಿತ್ತು‌. ಅಂಕುಶ್​ ಪತ್ನಿ ಗಣೇಶ್ ಎಂಬಾತನಿಗೆ 30 …

Read More »

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

ಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. ಆದರೆ, ತಾಯಿಗೆ ಮಗನ ಸಾಧನೆ ಬಗ್ಗೆ ಬೆಟ್ಟದಷ್ಟು ಕನಸು. ಮಗ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದಲ್ಲಿ 7 ಚಿನ್ನದ ಪದಕ ಗೆದ್ದು ತಾಯಿ ಹೆಮ್ಮೆ ಪಡುವಂತ ಸಾಧನೆಗೈದಿದ್ದಾರೆ. ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ‌ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ನಡೆಯಿತು. ಈ ವೇಳೆ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. ರಾಜ್ಯಪಾಲ …

Read More »

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಜೂನ್ 6ರಂದು ಬೆಳಗ್ಗೆ 10:25ರ ಸುಮಾರಿಗೆ ಮಹಿಳೆಗೆ 8260865038 ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದವರು ತಾವು ಇನ್ಸ್‌ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡು, NCRP (ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್)ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಮಹಿಳೆಯ ಗಂಡನ ಹೆಸರಿನಲ್ಲಿ ಹೊಸ ಸಿಮ್ (9867485463) ಖರೀದಿಸಲಾಗಿದೆ. …

Read More »