ಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಪ್ರತಿ ಘಟಕಕ್ಕೂ 11 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಈ ಘಟಕಗಳಲ್ಲಿ ಐದು ರೂಪಾಯಿ ನೀಡಿದರೆ 20 ಲೀಟರ್ ಶುದ್ಧ ಕುಡಿಯುವ ನೀರು ಸಿಗುವ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಆರು ಘಟಕಗಳಲ್ಲಿ ಕೇವಲ ನಾಲ್ಕು ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಎರಡು ಘಟಕಗಳ ಕಾಮಗಾರಿ ಪೂರ್ಣಗೊಂಡರೂ ಸಹ …
Read More »Monthly Archives: ಜುಲೈ 2025
ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಅಮಾಯಕನಿಗೆ ಶಿಕ್ಷೆ: ಮೂವರು ಇನ್ಸ್ಪೆಕ್ಟರ್ಗಳು ಸಸ್ಪೆಂಡ್
ಮೈಸೂರು: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಕುಶಾಲನಗರ ಸರ್ಕಲ್ ಇನ್ಸ್ಪೆಕ್ಟರ್ ಬಿ.ಜಿ.ಪ್ರಕಾಶ್, ಇಲವಾಲ ಇನ್ಸ್ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಠಾಣೆ ಇನ್ಸ್ಪೆಕ್ಟರ್ ಪ್ರಕಾಶ್ ಎತ್ತಿನಮನೆ ಅಮಾನತಾದವರು. ಏನಿದು ಪ್ರಕರಣ?: ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಸುರೇಶ್ ಅಲಿಯಾಸ್ ಕುರುಬರ ಸುರೇಶ್ ಎಂಬವರ ವಿರುದ್ಧ ಪತ್ನಿಯನ್ನು ಕೊಲೆ ಮಾಡಿದ ಆರೋಪದ …
Read More »ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಶೀಘ್ರದಲ್ಲೇ ಆಯ್ಕೆ ನಡೆಯಲಿದೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಎನ್ನುವ ಪ್ರಶ್ನೆ ಅಪ್ರಸ್ತುತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ನೂತನ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನೂತನ ಮೇಯರ್, ಉಪ ಮೇಯರ್ಗೆ ಅಭಿನಂದಿಸಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಬಳಿಕ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, …
Read More »ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ
ಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಾನೂನು ರೀತ್ಯಾ ಕ್ರಮ ಆಗುತ್ತಿದೆ. ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ಕಾಡುಗೋಡಿ ಪ್ಲಾಂಟೇಷನ್ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ …
Read More »ಖಾಲಿ ಗ್ಯಾಸ್ ಸಿಲಿಂಡರ್ ದಾಸ್ತಾನು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 409 ಗ್ಯಾಸ್ ಸಿಲಿಂಡರ್ಗಳನ್ನು ಜಪ್ತಿ ಮಾಡಿದ್ದಾರೆ.
ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಸಿಲಿಂಡರ್ ಅಡ್ಡೆಯ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಖಾಲಿ ಗ್ಯಾಸ್ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರವಾರ ರಸ್ತೆಯ ಕೆಂಪಗೇರಿ ಹತ್ತಿರದ ಗೋಡೌನ್ನಲ್ಲಿ ಅಕ್ರಮವಾಗಿ ಕರ್ಮಷಿಯಲ್ ಖಾಲಿ ಸಿಲಿಂಡರ್ ಸಂಗ್ರಹ ಮಾಡಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಜಂಟಿಯಾಗಿ …
Read More »ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!
ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು ಗುರಿಯಾಗಿಸಿ ಅಪಘಾತವೆಸಗಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಶಾಂತಿನಗರದ ಭಂಗಿಯಪ್ಪ ಗಾರ್ಡನ್ ನಿವಾಸಿ ಚಂದ್ರಶೇಖರ್ (78 ವರ್ಷ) ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿ ಜಮೀಲ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. …
Read More »ಮೈಸೂರು ದಸರಾ 2025: ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭ
ಮೈಸೂರು: ಈ ಬಾರಿ ಸಂಭ್ರಮ ಹಾಗೂ ಅದ್ಧೂರಿ ದಸರಾ ಆಚರಿಸಲು ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಎಂಟು ಆನೆ ಶಿಬಿರಗಳಿಗೆ ಭೇಟಿ ನೀಡಿ ಸುಮಾರು 25 ಗಂಡು ಮತ್ತು ಹೆಣ್ಣು ಆನೆಗಳ ಆರೋಗ್ಯ ಪರಿಶೀಲನೆ ನಡೆಸಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯೇ ಗಜಪಡೆ. ಈ ಗಜಪಡೆಯ ಪ್ರಮುಖ ಕೇಂದ್ರಬಿಂದುವಾಗಿ ಇಟ್ಟುಕೊಂಡು ನಡೆಯುವುದು ಮೈಸೂರು ದಸರಾದ ಜಂಬೂಸವಾರಿ. ಇಂತಹ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳನ್ನು ಆಯ್ಕೆ …
Read More »5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.
ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ವಲಯ ಅರಣ್ಯಾಧಿಕಾರಿ ಮಾದೇಶ್ ಅವರಿಗೆ ಮುಂದಿನ ಆದೇಶದ ತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ. ಐದು ಹುಲಿಗಳು ರಸ್ತೆಯಿಂದ ಕೇವಲ …
Read More »ಆರ್ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ
ಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ ಮಾಡುತ್ತಿದ್ದವರ ಮೇಲೆ ಸೋಮವಾರ ನಗರದ 11 ಆರ್ಟಿಒ ಕಚೇರಿಯ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರ ನಿಗದಿಗೊಳಿಸಿದ ಕನಿಷ್ಠ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಆಧರಿಸಿ ಇಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು …
Read More »ದೂಧ್‌ಸಾಗರ್ ಜಲಪಾತದ ಸೂಕ್ಷ್ಮ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ: 21 ಪ್ರವಾಸಿಗರ ಬಂಧನ, ಬಿಡುಗಡೆ
ಹುಬ್ಬಳ್ಳಿ: ಕರ್ನಾಟಕದ ಗಡಿಭಾಗದ ಸಮೀಪವಿರುವ ಗೋವಾ ರಾಜ್ಯದ ದೂಧ್‌ಸಾಗರ್ ಜಲಪಾತ ಈಗ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯತ್ತಿದೆ. ಅದ್ರೆ ಪ್ರವಾಸಕ್ಕೆ ಹೋದವರು ಅಲ್ಲಿನ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಮಳೆಗಾಲದ ಸಂದರ್ಭದಲ್ಲಿ ದೂಧ್‌ಸಾಗರ್ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತದೆ. ಆದ್ರೆ ಕ್ಯಾಸಲ್‌ರಾಕ್-ದೂಧ್‌ಸಾಗರ್ ಅತ್ಯಂತ ಸೂಕ್ಷ್ಮ ಹಾಗೂ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸುರಂಗಗಳು, ಕಡಿದಾದ ಕಂದರಗಳು ಮತ್ತು ಕಾಡು ಪ್ರಾಣಿಗಳ ಅಪಾಯದಿಂದಾಗಿ ಚಾರಣ ನಿಷೇಧಿಸಲಾಗಿದೆ. ಕ್ಯಾಸಲ್‌ರಾಕ್‌ನ ರೈಲ್ವೆ …
Read More »