Breaking News

Daily Archives: ಆಗಷ್ಟ್ 9, 2025

ದಸರಾ ದೀಪಾಲಂಕಾರ 2025: ಆಕರ್ಷಕ ಹಾಗೂ ವಿನೂತನವಾಗಿರಲಿ – ಕೆ. ಎಂ. ಮುನಿಗೋಪಾಲ್‌ ರಾಜು

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ, ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿ ವಹಿಸಿ, ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕ ಕೆ. ಎಂ. ಮುನಿಗೋಪಾಲ್‌ ರಾಜು ಅವರು ಸಲಹೆ ನೀಡಿದ್ದಾರೆ. ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ …

Read More »

ಧರ್ಮಸ್ಥಳ ಪ್ರಕರಣ: ಬೊಳಿಯಾರ್​ನಲ್ಲಿ ಹೊಸ ಸ್ಥಳ ಗುರುತಿಸಿದ ದೂರುದಾರ, ಎಸ್​ಐಟಿಯಿಂದ ಶೋಧ

ಧರ್ಮಸ್ಥಳ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಎಸ್​ಐಟಿ ಶೋಧ ಕಾರ್ಯ ಮುಂದುವರಿಸಿದೆ. ಇಂದು ಬೋಳಿಯಾರ್ ಬಳಿ ದೂರುದಾರ ಗುರುತಿಸಿದ ಮತ್ತೊಂದು ಹೊಸ ಸ್ಥಳದಲ್ಲಿ ವಿಶೇಷ ತನಿಖಾ ಶೋಧ ಕಾರ್ಯಾಚರಣೆ ನಡೆಸಿತು. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಳಿಯ ಗೋಂಕ್ರತಾರ್ ಸಮೀಪದ ಅರಣ್ಯ ಪ್ರದೇಶಕ್ಕೆ ದೂರುದಾರನೊಂದಿಗೆ ಅಧಿಕಾರಿಗಳ ತಂಡ 1:15 ರಿಂದ ಸಂಜೆ 5:30 ಗಂಟೆಯವರೆಗೆ ಮಿನಿ ಜೆಸಿಬಿ ಮತ್ತು ಕಾರ್ಮಿಕರೊಂದಿಗೆ ಶೋಧ …

Read More »

ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವಕ್ಕೆ ಚಾಲನೆ

ರಾಯಚೂರು: ಮಂತ್ರಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಶುಕ್ರವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಶ್ರೀಮಠದ ಮುಂಭಾಗದಲ್ಲಿ ಸಾಂಪ್ರದಾಯಿಕ ಧ್ವಜಾರೋಹಣ ಸಮಾರಂಭವು ಅಪಾರ ಭಕ್ತಿ ಮತ್ತು ಭವ್ಯತೆಯಿಂದ ನಡೆಯಿತು. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಗೋ ಪೂಜೆ ಮತ್ತು ಅಶ್ವ ಪೂಜೆ ನೆರವೇರಿಸಿದರು. ನಂತರ ಆರಾಧನಾ ಆಚರಣೆಗಳ ಆರಂಭವನ್ನು ಸೂಚಿಸುವ ವಿಧ್ಯುಕ್ತ ಧ್ವಜಾರೋಹಣವು ವೇದ ಪಠಣ ಹಾಗೂ ಮಂಗಳವಾದ್ಯಗಳೊಂದಿಗೆ ನಡೆಯಿತು. ಈ ಕ್ಷಣಕ್ಕೆ ಅಪಾರ …

Read More »

ಯಲ್ಲಮ್ಮನಗುಡ್ಡದಲ್ಲಿ ಮಳೆರಾಯನ ಆರ್ಭಟ

ಬೆಳಗಾವಿ: ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿ ತಾಲೂಕಿನ ಉಗರಗೋಳ–ಯಲ್ಲಮ್ಮನಗುಡ್ಡ ಮಾರ್ಗದಲ್ಲಿನ ಹಳ್ಳ ಉಕ್ಕಿ ಹರಿದ ಪರಿಣಾಮ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ. ದೇವಿ ದರ್ಶನಕ್ಕೆ ಬಂದಿದ್ದ ಭಕ್ತರು ಪರದಾಡಿದ್ದಾರೆ. ಹೌದು, ಆಗಸ್ಟ್‌ 9ರಂದು ಯಲ್ಲಮ್ಮನಗುಡ್ಡದಲ್ಲಿ ನೂಲು ಹುಣ್ಣಿಮೆ ಹಿನ್ನೆಲೆ ಜಾತ್ರೆ ನಡೆಯಲಿದ್ದು, ದೇವಿ ದರ್ಶನಕ್ಕೆ ಶುಕ್ರವಾರ ಸಂಜೆಯಿಂದಲೇ ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳಿಂದ ಉಗರಗೋಳ ಮಾರ್ಗವಾಗಿ ಗುಡ್ಡಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 …

Read More »

ಗೋಕಾಕ ಉಗ್ರಾಣದಲ್ಲಿ 98 ಲಕ್ಷ ರೂ ಮೌಲ್ಯದ ಅವಧಿ ಮೀರಿದ ಔಷಧಿ ಪತ್ತೆ: ನ್ಯಾ.ಬಿ.ಎಸ್.ಪಾಟೀಲ

ಬೆಳಗಾವಿ: ಗೋಕಾಕ್​ ಉಗ್ರಾಣದಲ್ಲಿ 98 ಲಕ್ಷ ರೂಪಾಯಿ ಮೌಲ್ಯದ ಔಷಧ ಅವಧಿ ಮೀರಿದೆ. ಜನವರಿಯಿಂದ ಈವರೆಗೆ 6 ಲಕ್ಷ ರೂ. ಮೌಲ್ಯದ ಔಷಧ ಅವಧಿ ಮೀರಿದ್ದು ಕಂಡು ಬಂದಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿಂದ ಐದಾರು ತಾಲೂಕುಗಳ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧ ಸರಬರಾಜು ಆಗುತ್ತದೆ. ಆ ಔಷಧ ಉಪಯೋಗ ಮಾಡಿಲ್ಲ. …

Read More »