Breaking News

Daily Archives: ಆಗಷ್ಟ್ 18, 2025

ಅಗ್ನಿ ಅವಘಡದಲ್ಲಿ ಐವರ ಸಾವು ಪ್ರಕರಣ: ಕಟ್ಟಡದ ಇಬ್ಬರು ಮಾಲೀಕರು ಪೊಲೀಸ್ ವಶಕ್ಕೆ

ಬೆಂಗಳೂರು: ಅಗ್ನಿ ಅವಘಡದಲ್ಲಿ ಐವರು ಸಜೀವ ದಹನವಾದ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರಿಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ದುರಂತ ಸಂಭವಿಸಿದ ಕಟ್ಟಡದ ಮಾಲೀಕರಾದ ಬಾಲಕೃಷ್ಣಯ್ಯ ಶೆಟ್ಟಿ ಹಾಗೂ ಸಂದೀಪ್ ಶೆಟ್ಟಿ ಅವರನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ (ಆಗಸ್ಟ್ 16) ನಸುಕಿಜಾವ 3 ಗಂಟೆ ಸುಮಾರಿಗೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರತ್ ಪೇಟೆಯಲ್ಲಿ ಸಂಭವಿಸಿದ …

Read More »

ಭಾರಿ ಮಳೆ ಮುನ್ಸೂಚನೆ, ರೆಡ್​ ಅಲರ್ಟ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೋಮವಾರ (ಆ.18) ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಅವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಸೋಮವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ …

Read More »

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆ

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದೆ. ಶ್ರೀ ಅಪ್ಪಣಗೌಡ ಪಾಟೀಲ ಅವರ ದೂರದೃಷ್ಟಿಯ ಪರಿಣಾಮವಾಗಿ ಆರಂಭವಾದ ಈ ಸಹಕಾರಿ ಸಂಘವು, ರೈತರ ಹಾಗೂ ಸಾಮಾನ್ಯ ಜನರ ಬೆಳವಣಿಗೆಗಾಗಿ ಸದಾ ಶ್ರಮಿಸಿರುವ ಸಂಸ್ಥೆಯಾಗಿದೆ. ಇಂತಹ ಸಂಸ್ಥೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂಬರುವ ಈ ಚುನಾವಣೆ ಆ ದಿಸೆಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದಲೇ ನಾಳೆಯಿಂದ ಪ್ರಚಾರ ಪ್ರಾರಂಭಿಸಿ, …

Read More »