ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಒಂದು ವರ್ಷದಲ್ಲಿ ಡ್ರಗ್ಸ್ ನಿರ್ಮೂಲನೆ ಸಾಧ್ಯವಿಲ್ಲ. ಈ ಪಿಡುಗಿನ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 14,485 ಡ್ರಗ್ಸ್ ಪ್ರಕರಣ ದಾಖಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರಿಷತ್ನಲ್ಲಿ ಮಾಹಿತಿ ನೀಡಿದ್ಧಾರೆ. ಇಂದು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಇಂದು ಡ್ರಗ್ಸ್ ಮಹಾಹೆಮ್ಮಾರಿಯಾಗಿ ಪರಿಣಮಿಸಿದೆ. ಹಳ್ಳಿ-ಹಳ್ಳಿಗಳಲ್ಲಿ ಮಾದಕವಸ್ತುವಿನ ಜಾಲ …
Read More »Daily Archives: ಆಗಷ್ಟ್ 22, 2025
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ
ಬೆಂಗಳೂರು: ಮೈಕ್ರೋ ಫೈನಾನ್ಸಿಯರ್ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಪರಿಷತ್ನಲ್ಲಿ ಘೋಷಿಸಿದ್ದಾರೆ. ಸಾಲಬಾಧೆಗೆ ತತ್ತರಿಸಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮಾದರಿಯಲ್ಲೇ ಮೈಕ್ರೋ ಫೈನಾನ್ಸ್ಗಳ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಗಳ ಕುಟುಂಬಕ್ಕೂ 5 ಲಕ್ಷ ರೂ ನೀಡಲಾಗುವುದು. ಆತ್ಮಹತ್ಯೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದೇ ನಮ್ಮ ಉದ್ದೇಶ. ಈ ಬಗ್ಗೆ ಹಣಕಾಸು ಇಲಾಖೆ ಹಾಗೂ ಮುಖ್ಯ …
Read More »ಉನ್ನತ ಶಿಕ್ಷಣಕ್ಕೆ ಸರ್ಕಾರಿ ಸೇವಾ ನಿರತ ವೈದ್ಯರನ್ನು ಬಿಡುಗಡೆಗೊಳಿಸದ ಸರ್ಕಾರ ಕ್ರಮಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾನಿರತ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯಲು ಸೇವೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯ ನೀಡಿದ ಆದೇಶ ಪಾಲಿಸದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಉನ್ನತ ಶಿಕ್ಷಣ ಪಡೆಯಲು ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ 2025ರ ಜೂನ್ 24ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪಾಲಿಸದ ಆರೋಗ್ಯ ಇಲಾಖೆಯ ಕ್ರಮ ಪ್ರಶ್ನಿಸಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಬಾಚಿಗೊಂಡನಹಳ್ಳಿಯ ಪ್ರಾಥಮಿಕ …
Read More »ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಆಯೋಜಕರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಆಯೋಜನೆ ಮಾಡಿದವರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಗುರುವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಚರ್ಚೆಗೆ ಅವರು ಉತ್ತರಿಸಿದರು. ಕರ್ನಾಟಕದ ಇತಿಹಾಸದಲ್ಲಿ ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ಪ್ರಗತಿಶೀಲ ರಾಜ್ಯ ಇದನ್ನು ಲಘುವಾಗಿ ತೆಗೆದುಕೊಳ್ಳಲು ಆಗುವುದಿಲ್ಲ. ತಪ್ಪು ಆದ ಮೇಲೆ ಕ್ರಮ ಕೈಗೊಳ್ಳುವುದು ಅದು ಬಹಳ ಮುಖ್ಯವಾಗಿದೆ. ಐಪಿಎಲ್ನ್ನು ಕ್ರೀಡೆಯೂ ಆಗಬೇಕು, …
Read More »
Laxmi News 24×7