Breaking News

Daily Archives: ಆಗಷ್ಟ್ 23, 2025

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು?

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್​ಮ್ಯಾನ್ (Masked man) ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು …

Read More »

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ ಫ್ರಾನ್ಸ್​ನಲ್ಲಿ ನಡೆಯಲಿದೆ. ಇಲ್ಲಿ ನಡೆಯುವ ಗಾಳಿಪಟ ಉತ್ಸವಕ್ಕೆ ಮಂಗಳೂರಿನ ಗಾಳಿಪಟ ಆಸಕ್ತರ ತಂಡವೊಂದು ವಿಶೇಷ ಗಾಳಿಪಟವನ್ನು ತಯಾರಿಸಿ, ಸಿದ್ಧವಾಗಿದೆ. ಫ್ರಾನ್ಸ್‌ನಲ್ಲಿ ಸೆಪ್ಟಂಬರ್ 13 ರಿಂದ ಪ್ರಪಂಚದ ಅತೀ ದೊಡ್ಡ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ಗಾಳಿಪಟ ಹಾರಿಸಲು ‘ಟೀಮ್ ಮಂಗಳೂರು’ ತಂಡ ವಿಶೇಷವಾದ ಗಾಳಿಪಟವನ್ನು ತಯಾರಿಸಿದೆ. ಇದೇ ಗಾಳಿಪಟ ಫ್ರೆಂಚರ …

Read More »

ಲಕ್ಕಿ ಸ್ಕೀಮ್ ಹೆಸರಲ್ಲಿ ಜನರಿಗೆ ನಂಬಿಸಿ ₹14 ಕೋಟಿಗೂ ಅಧಿಕ ವಂಚನೆ: ನಾಲ್ವರ ಬಂಧನ

ಮಂಗಳೂರು: ಲಕ್ಕಿ ಸ್ಕೀಮ್ ಮೂಲಕ ಗ್ರಾಹಕರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚನೆ ಮಾಡಿದ ಎರಡು ಸಂಸ್ಥೆಗಳ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅಹಮದ್ ಖುರೇಶಿ, ನಝೀರ್ ಯಾನೆ ನಾಸಿರ್, ಮುಹಮ್ಮದ್ ಅಶ್ರಫ್, ಮುಹಮ್ಮದ್ ಹನೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ 1: ನ್ಯೂ ಶೈನ್ ಎಂಟರ್​ಪ್ರೈಸಸ್ ಎಂಬ ಲಕ್ಕಿ ಸ್ಕೀಮ್​ನಲ್ಲಿ 9 ತಿಂಗಳು 1,000 ರೂ. ಹಾಗೂ ಕೊನೆಯ 2 …

Read More »

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು, ಗೃಹ ಅಲಂಕಾರ ಮತ್ತು ಪೀಠೋಪಕರಣಗಳ ಬೃಹತ್ ವಸ್ತು ಪ್ರದರ್ಶನವನ್ನು‌ ಇಂದು ಉದ್ಘಾಟಿಸಲಾಯಿತು. ಕಟ್ಟಡ ನಿರ್ಮಾಣ ಕ್ಷೇತ್ರದ ನವೀನ ತಂತ್ರಜ್ಞಾನಗಳು, ಆಧುನಿಕ ವಸ್ತುಗಳು ಮತ್ತು ಉಪಕರಣಗಳನ್ನು ಒಟ್ಟುಗೂಡಿಸಿದ ಈ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಅಲ್ಲಿ ಪ್ರದರ್ಶಿಸಲಾದ ತಂತ್ರಜ್ಞಾನಗಳನ್ನು ಅವಲೋಕಿಸಿದೆ. …

Read More »

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್​​ ಎಂಬುವವರು ನೀಡಿದ ದೂರಿನನ್ವಯ ಎಫ್​ಐಆರ್​​ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ‌ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …

Read More »

ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ

ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ ಸ್ವಯಂ ಪ್ರೇರಿತರಾಗಿ ಬಂದು ರಕ್ತಧಾನ ಮಾಡಿದ ಸಾರ್ವಜನಿಕರುಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದಗುರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹಿಸಿ ಸರ್ಕಾರಕ್ಕೆ ನೀಡುವ ಗುರಿ ಹೊಂದಲಾಗಿದೆ ಎಂದು ರಾಜಯೋಗಿನಿ ಬಿಕೆ ಸುಲೋಚನಾ …

Read More »

ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು

ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ….50ಕೆಜಿ ಗಾಂಜಾ ಪ್ರಕರಣ ಭೇದಿಸಿದ ಬೆಳಗಾವಿಯ ಖಾಕಿ ಪಡೆಗಾಂಜಾ ಜಾಲವನ್ನು ಬುಡಸಮೇತ ಕಿತ್ತು ಹಾಕಲಾಗುವುದುಜಾಲದಲ್ಲಿರುವ ವ್ಯಕ್ತಿಗಳ ಪತ್ತೆಗೆ ಮೂಹರ್ತವಿಟ್ಟ ಕಮೀಷನರ್ ಜಾಲವನ್ನು ಬೇಧಿಸಿದ ಪೊಲೀಸ್ ತಂಡಕ್ಕೆ ಬಹುಮಾನ ಘೋಷಣೆ ಬೆಳಗಾವಿ-ಚಂದಗಡ ರಸ್ತೆಯಲ್ಲಿರುವ ದಾಭಾ ಒಂದರ ಬಳಿ ಕಾರ ಪರಿಶೀಲನೆ ನಡೆಸಿದಾಗ ಆರು ಜನ ಆರೋಪಿಗಳು ಸುಮಾರು 50 ಕೆಜಿಯಷ್ಟು ಗಾಂಜಾದೊಂದಿಗೆ ಸಿಕ್ಕಿ ಬಿದ್ದಿರುವದಾಗಿ ಬೆಳಗಾವಿ ನಗರ ಪೊಲೀಸ್ …

Read More »